ತುಕಾಲಿ ಸಂತೋಷ್‌ ಕಾರು ಅಪಘಾತ – ಆಟೋ ಚಾಲಕ ಸಾವು

ತುಕಾಲಿ ಸಂತೋಷ್‌ ಕಾರು ಅಪಘಾತ – ಆಟೋ ಚಾಲಕ ಸಾವು

‘ಬಿಗ್ ಬಾಸ್’ ಖ್ಯಾತಿಯ ತುಕಾಲಿ ಸಂತೋಷ್ ಅವರ ಕಾರು ಅಪಘಾತಕ್ಕೀಡಾಗಿದೆ. ತುಮಕೂರಿನಲ್ಲಿ ತುಕಾಲಿ ಸಂತೋಷ್‌ ಅವರ ಕಾರಿಗೆ ಆಟೋ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಗಾಯಗೊಂಡಿದ್ದ ಆಟೋ ಚಾಲಕ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ:  ಮಗು ಹೆತ್ತು ಕೊಟ್ಟರೆ ₹25 ಲಕ್ಷ! – ತಾಯಂದಿರಿಗೆ ಕಂಪನಿಯಿಂದ ಭರ್ಜರಿ ಆಫರ್!

ಬುಧವಾರ ರಾತ್ರಿ ಶೂಟಿಂಗ್‌ ಮುಗಿಸಿಕೊಂಡು ತುಮಕೂರು ಕಡೆಯಿಂದ ಕುಣಿಗಲ್ ಮಾರ್ಗವಾಗಿ ಹೊಳೆನರಸೀಪುರ ಕಡೆ ತುಕಾಲಿ ಸಂತೋಷ್ ಅವರು ಪತ್ನಿ ಮಾನಸಾ ಜೊತೆ ಪ್ರಯಾಣಿಸುತ್ತಿದ್ದರು. ಅದೇ ವೇಳೆ ಕುಣಿಗಲ್‌ನಿಂದ ಕುರುಡಿಹಳ್ಳಿಗೆ ಆಟೋ ಬರುತ್ತಿತ್ತು. ಈ ಸಂದರ್ಭದಲ್ಲಿ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ತುಕಾಲಿ ಸಂತೋಷ್ ಅವರ ಕಾರಿಗೆ ಆಟೋ ಡಿಕ್ಕಿ ಹೊಡೆದಿದೆ. ಪರಿಣಾಮ ಆಟೋ ಚಾಲಕ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಟೋ ಚಾಲಕ ಮೃತಪಟ್ಟಿದ್ದಾರೆ.

ಕುಣಿಗಲ್ ತಾಲೂಕು ಕೋಡಿಹಳ್ಳಿಪಾಳ್ಯ ನಿವಾಸಿ ಜಗದೀಶ್ (44) ಮೃತ ದುರ್ದೈವಿ. ಘಟನೆ ಸಂಬಂಧ ದೂರು ಪ್ರತಿದೂರು ದಾಖಲಿಸಲು ಎರಡೂ ಕಡೆಯವರು ಕುಣಿಗಲ್ ಗ್ರಾಮಾಂತರ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಆಟೋ ಡ್ರೈವರ್ ಕಾರ್‌ಗೆ ಡಿಕ್ಕಿ ಹೊಡೆದಿದ್ದಾರೆ ಅಂತಾ ತುಕಾಲಿ ಸಂತು ಆರೋಪಿಸುತ್ತಿದ್ದರು. ಈ ಬಗ್ಗೆ ಕುಣಿಗಲ್ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Shwetha M