ಮೇವು ಎಂದು ಜೋಳದ ಚಿಗುರು ತಿಂದ ಕುರಿಗಳು! –  ಅಯ್ಯೋ.. 50 ಕುರಿಗಳು ಬಲಿ!

ಮೇವು ಎಂದು ಜೋಳದ ಚಿಗುರು ತಿಂದ ಕುರಿಗಳು! –  ಅಯ್ಯೋ.. 50 ಕುರಿಗಳು ಬಲಿ!

ಮೇವು ಎಂದು ಜೋಳದ ಚಿಗುರು ತಿಂದು 50 ಕುರಿಗಳು ಕ್ಷಣಾರ್ಧದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪೆನ್ನೋಬನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಇದನ್ನೂ ಓದಿ: ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಗೋಪುರ ಏರಿ ಕುಳಿತ ಕುಡುಕ! –  3 ಗಂಟೆ ಭಾರೀ ಹೈಡ್ರಾಮಾ!

ಪೆನ್ನೋಬನಹಳ್ಳಿ ಗ್ರಾಮದ ನಿವಾಸಿ ಜಂಪಕ್ಕ ಎನ್ನುವವರು ತಮ್ಮ ಕುರಿಗಳನ್ನ ಎಂದಿನಂತೆ ಕುರಿಗಳನ್ನು ಮೇವಿಗಾಗಿ ಹೊಲದತ್ತ ಕರೆದುಕೊಂಡು ಹೋಗಿದ್ದಾರೆ. ಸುಮಾರು 200ಕ್ಕೂ ಅಧಿಕ ಕುರಿಗಳು ಹೊಲದಲ್ಲಿ ಮೇಯುತ್ತಿದ್ದಾಗ ಕೆಲ ಕುರಿಗಳು, ಏಕಾಏಕಿ ಕುಸಿದು ಬೀಳತೊಡಗಿದೆ. ಕೆಲವೇ ಕ್ಷಣಗಳಲ್ಲಿ 50ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ. ಇದರಿಂದ ಕುರಿಗಾಹಿಗೆ ಭಾರೀ ಆಘಾತವಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಪಶುಪಾಲನಾ ಇಲಾಖೆಯ ವೈದ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆಯ ವೇಳೆ ಕುರಿಗಳು ಜೋಳದ ಚಿಗುರು ಸಿಪ್ಪೆಯನ್ನು ಸೇವಿಸಿರುವುದು ಪತ್ತೆಯಾಗಿದೆ. ವೈದ್ಯಾಧಿಕಾರಿ ಅರ್ಕೆರಪ್ಪ ಅವರು, ಜೋಳದ ಚಿಗುರು ಸಿಪ್ಪೆಯಲ್ಲಿ ಸೈನೆಡ್ ಅಂಶ ಇರುವುದರಿಂದ ಅದು ವಿಷವಾಗಿ ಪರಿಣಮಿಸಿ ಕುರಿಗಳ ಸಾವಿಗೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ.

ಘಟನೆಯ ಹಿನ್ನೆಲೆ ಕುರಿಗಳ ಮಾದರಿ ಸ್ಯಾಂಪಲ್‌ಗಳನ್ನು ವೈದ್ಯಕೀಯ ಪರೀಕ್ಷೆಗೆ ರವಾನಿಸಲಾಗಿದ್ದು, ಅಂತಿಮ ವರದಿ ನಿರೀಕ್ಷಿಸಲಾಗಿದೆ. ಇಂತಹ ದುರ್ಘಟನೆಗಳು ಮರುಕಳಿಸದಂತೆ ರೈತರು ಹಾಗೂ ಕುರಿಗಾಹಿಗಳು ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದು ಪಶು ವೈದ್ಯಾಧಿಕಾರಿಗಳು ಮನವಿ ಮಾಡಿದ್ದಾರೆ.

Shwetha M