ಕಣ್ಣನ್ ಅವರ ವೇತನ ವಾಪಸ್ ಪಡೆಯುವ ಕೇಸ್‌ಗೆ ಬಿಗ್‌ ಟ್ವಿಸ್ಟ್‌! – ತಹಶೀಲ್ದಾರ್ ಸಂಕಷ್ಟ!

ಕಣ್ಣನ್ ಅವರ ವೇತನ ವಾಪಸ್ ಪಡೆಯುವ ಕೇಸ್‌ಗೆ ಬಿಗ್‌ ಟ್ವಿಸ್ಟ್‌! – ತಹಶೀಲ್ದಾರ್ ಸಂಕಷ್ಟ!

ಚಿಕ್ಕಮಗಳೂರಿನ ಹಿರೇಮಗಳೂರಿನ ಕೋದಂಡರಾಮ ದೇಗುಲದ ಅರ್ಚಕ ಹಿರೇಮಗಳೂರು ಕಣ್ಣನ್ ಅವರ ವೇತನ ವಾಪಸ್ ಕೇಳಿ ಸರ್ಕಾರ ನೋಟಿಸ್​​ ನೀಡಿತ್ತು. ಇದೀಗ ಈ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್ ಸಿಕ್ಕಿದೆ. ಈ ಪ್ರಕರಣದ ಸಂಬಂಧ ಸಿಎಂ ಸಿದ್ಧರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಕಣ್ಣನ್ ಅವರಿಗೆ ಹೆಚ್ಚುವರಿಯಾಗಿ ಹಣ ಪಾವತಿಸಿರುವುದು ತಹಶೀಲ್ದಾರ್ ಅವರದ್ದೇ ತಪ್ಪೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯದ ಅರ್ಚಕರಿಗೆ ಬಿಗ್‌ ಶಾಕ್‌! – ಅರ್ಚಕರಿಂದ 10 ವರ್ಷದ ಸಂಬಳ ವಾಪಸ್ ಕೇಳಿದ ಸರ್ಕಾರ!

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಸಿಎಂ ಸಿದ್ಧರಾಮಯ್ಯ ಅವರು, ಹಿರೇಮಗಳೂರು ಕಣ್ಣನ್ ಅವರಿಗೆ ತಸ್ತೀಕ್ ಹಣ ವಾಪಾಸು ನೀಡುವಂತೆ ನೋಟಿಸ್ ನೀಡಿರುವುದರಲ್ಲಿ ತಹಶೀಲ್ದಾರ್ ತಪ್ಪಿದೆ ಹೊರತು ಕಣ್ಣನ್ ಅವರ ತಪ್ಪಿಲ್ಲ. ನೋಟಿಸ್ ಅನ್ನು ಹಿಂಪಡೆಯಲು ಸಂಬಂಧಪಟ್ಟವರ ಜೊತೆ ಮಾತನಾಡುತ್ತೇನೆ. ಕಣ್ಣನ್ ಅವರಿಗೆ ಹೆಚ್ಚುವರಿಯಾಗಿ ಹಣ ಪಾವತಿಸಿರುವುದು ತಹಶೀಲ್ದಾರರು, ಅವರಿಂದಲೇ ಬಾಕಿ ಹಣ ಕಟ್ಟಿಸಿಕೊಳ್ಳುತ್ತೇವೆ ಎಂದು ಬರೆದು ಸಿಎಂ ಪೋಸ್ಟ್​ ಶೇರ್ ಮಾಡಿದ್ದಾರೆ.

ಚಿಕ್ಕಮಗಳೂರು ಹೊರ ವಲಯದ ಕಲ್ಯಾಣ ಕೋದಂಡರಾಮ ದೇವಾಲಯದಲ್ಲಿ ಹಿರೇಮಗಳೂರು ಕಣ್ಣನ್ ಅವರು ಕಳೆದ 50 ವರ್ಷಗಳಿಂದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕಣ್ಣನ್ ಅವರ ಖಾತೆಗೆ ಪ್ರತಿ ತಿಂಗಳು ಸಂಬಳವಾಗಿ 7,500 ರೂಪಾಯಿ ಜಮೆ ಆಗುತ್ತಿತ್ತು. ಈ 7,500 ರೂಪಾಯಿ ನೀಡಿದ ಸಂಬಳದಲ್ಲಿ 4,500 ವಾಪಸ್ ನೀಡಲು ಚಿಕ್ಕಮಗಳೂರು ತಹಶೀಲ್ದಾರ್ ಸುಮಂತ್ ಅವರು ನೋಟಿಸ್ ನೀಡಿದ್ದರು. ಈ ಸಂಬಂಧ ಸದ್ಯ ಸಿಎಂ ಸಿದ್ದರಾಮಯ್ಯ ಅವರು ಟ್ವಿಟರ್​ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

Shwetha M