CM ವಿಜಯ್ & ತ್ರಿಶಾ ವಿರುದ್ಧ ಅವಹೇಳನಕಾರಿ ಹೇಳಿಕೆ – ಉದಯನಿಧಿ ಸ್ಟಾಲಿನ್ ಅರೆಸ್ಟ್

CM ವಿಜಯ್ & ತ್ರಿಶಾ ವಿರುದ್ಧ ಅವಹೇಳನಕಾರಿ ಹೇಳಿಕೆ – ಉದಯನಿಧಿ ಸ್ಟಾಲಿನ್ ಅರೆಸ್ಟ್

ತಮಿಳುನಾಡು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಅರೆಸ್ಟ್ ಮಾಡಲಾಗಿದೆ. ತಂಜಾವೂರಿನಲ್ಲಿ ಕಾವೇರಿ ನೀರಿನ ಬಿಕ್ಕಟ್ಟಿನ ಕುರಿತು ನಡೆದ ಡಿಎಂಕೆ ಪ್ರತಿಭಟನಾ ಸಭೆಯಲ್ಲಿ ಮಾತನಾಡುತ್ತಿದ್ದ ಉದಯನಿಧಿ ಸ್ಟಾಲಿನ್ ನಮ್ಮ ಮುಖ್ಯಮಂತ್ರಿ ಕಾವೇರಿ ನೀರಿನ ವಿಷಯದ ಬಗ್ಗೆ ಬಾಯಿ ತೆರೆಯುತ್ತಿಲ್ಲ.  ʼಯಾವ ನೀರು ಬರುತ್ತದೋ ಇಲ್ಲವೋ, ಆ ನೀರು ಬರಲೇಬೇಕುʼ ಎಂದು ಹೇಳಿದರು. ಈ ಮಾತು ನಟಿ ತ್ರಿಷಾ ಅವರನ್ನು ಪರೋಕ್ಷವಾಗಿ ಗುರಿಯಾಗಿಸಿ, ಮಹಿಳೆಯನ್ನು ಅವಮಾನಿಸುವ ಹಾಗೂ ಅಶ್ಲೀಲ ಅರ್ಥ ನೀಡುವ ರೀತಿಯಲ್ಲಿದೆ ಎಂದು ಟಿವಿಕೆ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಆರೋಪಿಸಿವೆ.

ಆರೋಪವೇನು?

ತಂಜಾವೂರಿನಲ್ಲಿ ಕಾವೇರಿ ನೀರಿನ ಬಿಕ್ಕಟ್ಟಿನ ಕುರಿತು ನಡೆದ ಡಿಎಂಕೆ ಪ್ರತಿಭಟನಾ ಸಭೆಯಲ್ಲಿ ಮಾತನಾಡುತ್ತಿದ್ದ ಉದಯನಿಧಿ ಸ್ಟಾಲಿನ್, ನಮ್ಮ ಮುಖ್ಯಮಂತ್ರಿ ಕಾವೇರಿ ನೀರಿನ ವಿಷಯದ ಬಗ್ಗೆ ಬಾಯಿ ತೆರೆಯುತ್ತಿಲ್ಲ. ಅವರ ಏಕೈಕ ಚಿಂತೆ ಡಿಎಂಕೆ ವಿರುದ್ಧ ಸುಳ್ಳು ಪ್ರಕರಣಗಳನ್ನು ಹೇಗೆ ಹಾಕುವುದು ಎಂಬುದು ಅಷ್ಟೇ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ವಿಜಯ್ ಸರ್ಕಾರವನ್ನು ಟೀಕಿಸುತ್ತಿದ್ದರು. ಇದೇ ವೇಳೆ ಜನಸಮೂಹದಿಂದ ‘ತ್ರಿಷಾ… ತ್ರಿಷಾ…’ ಎಂಬ ಘೋಷಣೆಗಳು ಕೇಳಿಬಂದವು. ಅದಕ್ಕೆ ಪ್ರತಿಕ್ರಿಯಿಸಿದ ಉದಯನಿಧಿ, ನಗುಮುಖದೊಂದಿಗೆ ತಮಿಳಿನಲ್ಲಿ ದ್ವಂದ್ವಾರ್ಥ ಬರುವ ರೀತಿಯಲ್ಲಿ ʼಯಾವ ನೀರು ಬರುತ್ತದೋ ಇಲ್ಲವೋ, ಆ ನೀರು ಬರಲೇಬೇಕುʼ ಎಂದು ಹೇಳಿದರು. ಈ ಮಾತು ನಟಿ ತ್ರಿಷಾ ಅವರನ್ನು ಪರೋಕ್ಷವಾಗಿ ಗುರಿಯಾಗಿಸಿ, ಮಹಿಳೆಯನ್ನು ಅವಮಾನಿಸುವ ಹಾಗೂ ಅಶ್ಲೀಲ ಅರ್ಥ ನೀಡುವ ರೀತಿಯಲ್ಲಿದೆ ಎಂದು ಟಿವಿಕೆ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಆರೋಪಿಸಿವೆ.

ಬಿಜೆಪಿ ತೀವ್ರ ವಾಗ್ದಾಳಿ, ಬಂಧನಕ್ಕೆ ಆಗ್ರಹ

ಉದಯನಿಧಿ ಅವರ ಈ ಹೇಳಿಕೆಯನ್ನು ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಖಂಡಿಸಿರುವ ತಮಿಳುನಾಡು ಬಿಜೆಪಿ ಮುಖ್ಯ ವಕ್ತಾರ ನಾರಾಯಣನ್ ತಿರುಪತಿ, “ಉದಯನಿಧಿ ಅವರ ಈ ಡಬಲ್‌ ಮೀನಿಂಗ್‌ ಮಾತುಗಳು ಅತ್ಯಂತ ಜಿಗುಪ್ಸೆ ತರಿಸುವಂತಹದ್ದಾಗಿದ್ದು, ಅಸಭ್ಯ ಹಾಗೂ ನಾಚಿಕೆಗೇಡಿನ ಸಂಗತಿಯಾಗಿದೆ” ಎಂದು ಕಿಡಿಕಾರಿದ್ರು.

Kishor KV

Leave a Reply

Your email address will not be published. Required fields are marked *