ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಹರಿದ ನೆತ್ತರು – ಸಹ ಕಾರ್ಮಿಕನಿಂದಲೇ ಮೀನುಗಾರನ ಹ*ತ್ಯೆ

ಉಡುಪಿ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನುಗಾರನೊಬ್ಬನನ್ನು ಕೊಲೆಗೈದ ಘಟನೆ ಮುಂಜಾನೆ ನಡೆದಿದೆ.
ಮೃತನನ್ನು ಮೀನು ಕಾರ್ಮಿಕ ಅಭಿಷೇಕ್ ಎಂದು ಗುರುತಿಸಲಾಗಿದೆ. ಬೋಟ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ಸಹ ಕಾರ್ಮಿಕರ ನಡುವೆ ಉಂಟಾದ ಗಲಾಟೆ ವಿಕೋಪಕ್ಕೆ ತಿರುಗಿದ್ದು, ಈ ವೇಳೆ ಅಭಿಷೇಕ್‌ನನ್ನು ಸಹ ಕಾರ್ಮಿಕನೊಬ್ಬ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಇದನ್ನೂ ಓದಿ: ಹನೂರು ಫೈರಿಂಗ್ ಕೇಸ್‌ಗೆ ಬಿಗ್ ಟ್ವಿಸ್ಟ್ – CIDಗೆ ಪ್ರಕರಣ ವಹಿಸಿದ ರಾಜ್ಯ ಸರ್ಕಾರ
ಮಾಹಿತಿ ಪಡೆದ ತಕ್ಷಣ ಮಲ್ಪೆ ಪೊಲೀಸ್ ಠಾಣಾ ಅನೀಲ್ ಕುಮಾರ್ ಡಿ., ಸಿಬ್ಬಂದಿ ಆದರ್ಶ ಮತ್ತು ಕುಬೇರ ಕಾರ್ಯಪ್ರವೃತ್ತರಾಗಿದ್ದು, ಆರೋಪಿ ಪತ್ತೆಗಾಗಿ ಕಾರ್ಯಾಚರಣೆ ಆರಂಭಿಸಿದ್ದರು. ಆರೋಪಿ ಗೋವಿಂದ ಹೈದರಾಬಾದ್ ಅಥವಾ ಮುಂಬೈ ಕಡೆ ಹೋಗಲು ಉಡುಪಿ ರೈಲೆ ನಿಲ್ದಾಣದ ಮೂಲಕ ಪರಾರಿಯಾಗಲು ಯತ್ನಿಸಿದ್ದನು. ತಕ್ಷಣ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಗೋವಿಂದ ಸುಮಾರು 15 ವರ್ಷಗಳಿಂದ ಮನೆಗೆ ಹೋಗದೇ ಮುಂಬೈ ಹೈದರಾಬಾದ್ ಹಾಗೂ ಇತರ ಕಡೆಗಳಲ್ಲಿ ಕೆಲಸ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದು, ಕೊಲೆಗೆ ನಿಖರವಾದ ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ನೋಡಿರಿ

