ಉಡುಪಿ ಶ್ರೀಕೃಷ್ಣ ಮಠದಲ್ಲಿ ಡ್ರೆಸ್‌ಕೋಡ್! – ಇನ್ಮುಂದೆ ಶಾರ್ಟ್ಸ್, ಟೈಟ್ ಪ್ಯಾಂಟ್ ಧರಿಸುವಂತಿಲ್ಲ!

ಉಡುಪಿ ಶ್ರೀಕೃಷ್ಣ ಮಠದಲ್ಲಿ ಡ್ರೆಸ್‌ಕೋಡ್! – ಇನ್ಮುಂದೆ ಶಾರ್ಟ್ಸ್, ಟೈಟ್ ಪ್ಯಾಂಟ್ ಧರಿಸುವಂತಿಲ್ಲ!

ಉಡುಪಿ ಕೃಷ್ಣ ಮಠ ಕರ್ನಾಟಕದ ಉಡುಪಿಯಲ್ಲಿರುವ ಪ್ರಸಿದ್ಧ ಹಿಂದೂ ದೇವಾಲಯವಾಗಿದೆ. ನಿತ್ಯ ಸಾವಿರಾರು ಭಕ್ತರು ದೇಗುಲಕ್ಕೆ ಆಗಮಿಸುತ್ತಾರೆ. ಇದೀಗ ಶ್ರೀ ಕೃಷ್ಣನ ಭಕ್ತರಿಗೆ ಮಹತ್ವದ ಸುದ್ದಿಯೊಂದಿದೆ. ಕೃಷ್ಣ ಮಠದಲ್ಲಿ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ ಮಾಡಲಾಗಿದೆ.

ಇದನ್ನೂ ಓದಿ: ನಟ ಅಕ್ಷಯ್‌ ಕುಮಾರ್‌ ಕಾರು ಹಾಗೂ ಆಟೋ ನಡುವೆ ಭೀಕರ ಅಪಘಾತ! – ಬಾಲಿವುಡ್‌ ನಟ ಹೇಗಿದ್ದಾರೆ?

ಶೀರೂರು ಮಠದ ನೂತನ ಪರ್ಯಾಯ ಸ್ವಾಮಿಗಳು ಇದೀಗ ಶ್ರೀಕೃಷ್ಣ ಮಠಕ್ಕೆ ಬರುವ ಭಕ್ತರಿಗೆ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ ಮಾಡಿದ್ದಾರೆ. ಇನ್ಮುಂದೆ ಉಡುಪಿ  ಶ್ರೀಕೃಷ್ಣ ಮಠಕ್ಕೆ ಬರೋರು ಸಾಂಪ್ರದಾಯಿಕ ಉಡುಗೆಯಲ್ಲಿ ಬರಬೇಕು ಎಂದು ಸ್ವಾಮಿಗಳು ಈ ಸೂಚನೆ ನೀಡಿದ್ದಾರೆ.

ಪುರುಷರು ಅಂಗಿ, ಬನಿಯನ್, ಬರ್ಮುಡಾ ಹಾಗೂ ಟೈಟ್ ವಸ್ತ್ರಗಳನ್ನು ಧರಿಸಿ ಪ್ರವೇಶಿಸುವಂತಿಲ್ಲ. ಇನ್ನೂ ಮಹಿಳೆಯರು ಶಾರ್ಟ್ಸ್, ಟೈಟ್ ಪ್ಯಾಂಟ್ ಧರಿಸಿಕೊಂಡು ಬರುವಂತಿಲ್ಲ. ಶ್ರೀಕೃಷ್ಣನ ದರ್ಶನಕ್ಕೆ ಬರುವವರು ಸಾಂಪ್ರದಾಯಿಕ ಉಡುಗೆಯಲ್ಲಿರಬೇಕು. ಮಾಡರ್ನ್ ಡ್ರೆಸ್ ಹಾಕೊಂಡು ಬಂದ್ರೆ ದರ್ಶನಕ್ಕೆ ಅವಕಾಶವಿಲ್ಲ ಎಂದು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.  ಕೊಲ್ಲೂರು, ಧರ್ಮಸ್ಥಳ ಹಾಗೂ ಕಟೀಲು ಬಳಿಕ ಅದೇ ರೀತಿಯಲ್ಲಿ ಇದೀಗ ಉಡುಪಿ ಶ್ರೀಕೃಷ್ಣ ಮಠದಲ್ಲಿ ವಸ್ತ್ರಸಂಹಿತೆ ಜಾರಿತರಲಾಗಿದೆ.

Shwetha M