ಟಿ20 ವಿಶ್ವಕಪ್ ಟೂರ್ನಿಗೆ ಅರ್ಹತೆ ಪಡೆದ ಉಗಾಂಡ – ಆಫ್ರಿಕನ್ ರಾಷ್ಟ್ರದ ಐತಿಹಾಸಿಕ ಸಾಧನೆ

ಟಿ20 ವಿಶ್ವಕಪ್ ಟೂರ್ನಿಗೆ ಅರ್ಹತೆ ಪಡೆದ ಉಗಾಂಡ – ಆಫ್ರಿಕನ್ ರಾಷ್ಟ್ರದ ಐತಿಹಾಸಿಕ ಸಾಧನೆ

ಉಗಾಂಡ ತಂಡ 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಅರ್ಹತೆ ಪಡೆಯುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ. ಮುಂದಿನ ವರ್ಷ ವೆಸ್ಟ್ ಇಂಡೀಸ್‌ ಹಾಗೂ ಅಮೆರಿಕ ಆತಿಥ್ಯದಲ್ಲಿ ನಡೆಯುವ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಉಗಾಂಡ ಆಡಲಿದೆ. ಗುರುವಾರ ರುವಾಂಡ ವಿರುದ್ಧ 9 ವಿಕೆಟ್‌ಗಳಿಂದ ಗೆಲುವು ಪಡೆಯುವ ಮೂಲಕ ಉಗಾಂಡ ತಂಡ ಟಿ20 ವಿಶ್ವಕಪ್‌ ಟೂರ್ನಿಗೆ ಅರ್ಹತೆ ಪಡೆದ 20ನೇ ತಂಡ ಎನಿಸಿಕೊಂಡಿದೆ.

ಇದನ್ನೂ ಓದಿ: ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಟೀಂ ಇಂಡಿಯಾ ಪ್ರಕಟ–ಮೂರು ಮಾದರಿಯ ಕ್ರಿಕೆಟ್‌ಗೆ ಮೂವರು ನಾಯಕರು

ಉಂಗಾಂಡ ಅರ್ಹತೆ ಪಡೆಯುವ ಮೂಲಕ ಟೆಸ್ಟ್‌ ಪೂರ್ಣಪ್ರಮಾಣದ ಸದಸ್ಯ ರಾಷ್ಟ್ರವಾದ ಜಿಂಬಾಬ್ವೆ ಟಿ20 ವಿಶ್ವಕಪ್‌ ಟೂರ್ನಿಗೆ ಅರ್ಹತೆ ಪಡೆಯುವಲ್ಲಿ ವಿಫವಾಯಿತು. ಐಸಿಸಿ ಪುರುಷರ T20 ವಿಶ್ವಕಪ್‌ನಲ್ಲಿ ಅರ್ಹತೆ ಪಡೆದುಕೊಳ್ಳುವ ಮೂಲಕ ಉಗಾಂಡ ತಂಡ ವಿಶ್ವಕಪ್‌ನಲ್ಲಿ ಭಾಗವಹಿಸುವ ಐದನೇ ಆಫ್ರಿಕನ್ ರಾಷ್ಟ್ರವಾಗಿ ಹೊರಹೊಮ್ಮಿದೆ. ಜೊತೆಗೆ ಉಗಾಂಡ ತಂಡ ತಮ್ಮ ಮೊದಲ ಟಿ20 ವಿಶ್ವಕಪ್ ಪಂದ್ಯವನ್ನು ಆಡಲಿದೆ. 2024 ರ ಜೂನ್ ತಿಂಗಳಿನಲ್ಲಿ ನಡೆಯಲ್ಲಿರುವ ಟಿ20 ವಿಶ್ವಕಪ್‌ಗೆ ಈಗಾಗಲೇ ಅರ್ಹತಾ ಸುತ್ತಿನ ಪಂದ್ಯಗಳು ನಡೆಯುತ್ತಿವೆ. ಸದ್ಯ ತಮ್ಮ ಆರು ಪಂದ್ಯಗಳಲ್ಲಿ ಐದು ಗೆಲುವು ಸಾಧಿಸುವ ಮೂಲಕ ಉಗಾಂಡ ತಂಡ ಐಸಿಸಿ ಪುರುಷರ T20 ವಿಶ್ವಕಪ್‌ನಲ್ಲೂ ಅರ್ಹತೆ ಪಡೆದುಕೊಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ ತಂಡ ಕೇವಲ 65 ರನ್‌ಗಳಿಗೆ ಆಲೌಟ್ ಆಯಿತು. ಜಿಂಬಾಬ್ವೆ ವಿರುದ್ಧ ಉಗಾಂಡ ಐದು ವಿಕೆಟ್‌ಗಳ ಜಯ ಸಾಧಿಸಿದೆ. ನಮೀಬಿಯಾ ಮತ್ತು ಉಗಾಂಡ ವಿರುದ್ಧ ಜಿಂಬಾಬ್ವೆ ಸೋಲಬೇಕಾಯಿತು. ಈ ಸೋಲು ವಿಶ್ವಕಪ್‌ನಿಂದ ಹೊರಗುಳಿಯಲು ಕಾರಣವಾಗಿದೆ. ಜಿಂಬಾಬ್ವೆ 2019ರ ವಿಶ್ವಕಪ್ ಮತ್ತು 2023ರ ವಿಶ್ವಕಪ್‌ಗೆ ಅರ್ಹತೆ ಪಡೆದುಕೊಂಡಿಲ್ಲ. ಅಮೆರಿಕ, ವೆಸ್ಟ್ ಇಂಡೀಸ್, ಆಸ್ಟ್ರೇಲಿಯಾ, ಇಂಗ್ಲೆಂಡ್, ಭಾರತ, ನೆದರ್ಲ್ಯಾಂಡ್ಸ್, ನ್ಯೂಜಿಲೆಂಡ್, ಪಾಕಿಸ್ತಾನ, ದಕ್ಷಿಣ ಆಫ್ರಿಕಾ, ಶ್ರೀಲಂಕಾ, ಅಫ್ಘಾನಿಸ್ತಾನ, ಬಾಂಗ್ಲಾದೇಶ, ಐರ್ಲೆಂಡ್, ಸ್ಕಾಟ್ಲೆಂಡ್, ಪಪುವಾ ನ್ಯೂಗಿನಿಯಾ, ಕೆನಡಾ, ನೇಪಾಳ, ಒಮನ್ ನಮೀಬಿಯಾ ಮತ್ತು ಉಗಾಂಡ ತಂಡಗಳು ಇಲ್ಲಿಯವರೆಗೆ ಟಿ20 ವಿಶ್ವಕಪ್ಗೆ ಅರ್ಹತೆ ಪಡೆದುಕೊಂಡಿವೆ. ಈ ಬಾರಿಯ ಟೂರ್ನಿಯ ಆರಂಭದಲ್ಲಿ ತಲಾ ಐದು ತಂಡಗಳ ನಾಲ್ಕು ಗುಂಪುಗಳು ಮೊದಲ ಸುತ್ತಿನಲ್ಲಿ ಮುಖಾಮುಖಿಯಾಗಲಿವೆ. ಪ್ರತಿ ಗುಂಪಿನಿಂದ ಅಗ್ರ ಎರಡು ತಂಡಗಳು ಸೂಪರ್ 8 ಗೆ ಮುನ್ನಡೆಯುತ್ತವೆ. ಅಲ್ಲಿಂದ ಮತ್ತೆ ಸೂಪರ್ 8 ರ ಕೊನೆಯಲ್ಲಿ ಅಗ್ರ ನಾಲ್ಕು ತಂಡಗಳು ಸೆಮಿಫೈನಲ್ಗೆ ಅರ್ಹತೆ ಪಡೆಯುತ್ತವೆ. 2024ರ ಟಿ20 ವಿಶ್ವಕಪ್ಗಾಗಿ ಆಫ್ರಿಕಾ ವಲಯದ ಅರ್ಹತಾ ಪಂದ್ಯಗಳನ್ನು 7 ತಂಡಗಳ ನಡುವೆ ಆಡಲಾಗುತ್ತಿದೆ.

Sulekha