ಮಂಜುನಾಥನ ಸನ್ನಿಧಿಯಲ್ಲಿ ಉಗ್ರಂ ಮಂಜು ಕಲ್ಯಾಣ! – ಸಂಧ್ಯಾ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಉಗ್ರಂ ಮಂಜು

ಕನ್ನಡದ ಜನಪ್ರೀಯ ನಟ, ಬಿಗ್‌ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ಉಗ್ರಂ ಮಂಜು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ದೀರ್ಘಕಾಲದ ಗೆಳತಿ ಸಂಧ್ಯಾ ಜೊತೆ ಧರ್ಮಸ್ಥಳದಲ್ಲಿ ಸರಳವಾಗಿ ಮದುವೆಯಾಗಿದ್ದಾರೆ.
ಇದನ್ನೂ ಓದಿ: KSRTC ಬಸ್ ಪ್ರಯಾಣಿಕರಿಗೆ ಬಿಗ್‌ಶಾಕ್! – ಮಂಗಳೂರು-ಕಾಸರಗೋಡು ಪ್ರಯಾಣ ಬಲು ದುಬಾರಿ!
ಧರ್ಮಸ್ಥಳ ಶ್ರೀ ಮಂಜುನಾಥನ ಸನ್ನಿಧಿಯಲ್ಲಿ ಉಗ್ರಂ ಮಂಜು, ಗೆಳತಿ ಸಾಯಿ ಸಂಧ್ಯಾ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಧರ್ಮಸ್ಥಳದ ಮಹೋತ್ಸವ ಭವನದಲ್ಲಿ ಮದುವೆ ಕಾರ್ಯಕ್ರಮ ನಡೆದಿದ್ದು, ಕುಟುಂಬಸ್ಥರು, ಆಪ್ತರು ಭಾಗಿಯಾಗಿದ್ದಾರೆ. ಇನ್ನು ಉಗ್ರಂ ಮಂಜು ಮದುವೆಗೆ ಬಿಗ್‌ಬಾಸ್ ಖ್ಯಾತಿಯ ಗೌತಮಿ ಜಾಧವ್, ಮೋಕ್ಷಿತಾ ಪೈ ಆಗಮಿಸಿ ಶುಭಹಾರೈಸಿದ್ದಾರೆ.
ಅಂದ್ಹಾಗೆ ಉಗ್ರಂ ಮಂಜು ಅವರು, ಟ್ರಾನ್ಸ್‌ಪ್ಲಾಂಟ್ ಕೋ-ಆರ್ಡಿನೇಟರ್ ಆಗಿರುವ ಸಾಯಿ ಸಂಧ್ಯಾ ಅವರೊಂದಿಗೆ ಸಪ್ತಪದಿ ತುಳಿದಿದ್ದಾರೆ. ನಿನ್ನೆ ಅವರ ಮನೆಯಲ್ಲಿ ಅರಿಶಿಣ ಶಾಸ್ತ್ರ ನೆರವೇರಿತ್ತು. ಇಂದು ಮದುವೆಯಾಗಿದ್ದಾರೆ. ಅರಿಶಿಣ ಹಚ್ಚಿಕೊಂಡು ಮದುಮಗನ ಕಳೆಯಲ್ಲಿ ಮಂಜು ಕಂಗೊಳಿಸುತ್ತಿರುವ ಫೋಟೋಗಳು ವೈರಲ್ ಆಗಿದ್ದವು. ಇದೀಗ ಮದುವೆಯ ಫೊಟೋಗಳು ವೈರಲ್ ಆಗುತ್ತಿವೆ.
ಇನ್ನು ಮಂಜುನಾಥ್ ಗೌಡ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಉಗ್ರಂ ಮಂಜು ಎಂದೇ ಖ್ಯಾತಿ ಪಡೆದಿದ್ದಾರೆ. ಬಿಗ್ ಬಾಸ್ ಕನ್ನಡ ಸೀಸನ್ 11ರಲ್ಲಿ ಇವರು, ಸ್ಟ್ರಾಂಗ್ ಸ್ಪರ್ಧಿ ಎನ್ನಿಸಿಕೊಂಡಿದ್ದರು. ಉಗ್ರಂ ಮಂಜು ಬಿಗ್ಬಾಸ್ನಲ್ಲಿ ಐದನೇ ಸ್ಥಾನ ಪಡೆದುಕೊಂಡಿದ್ದಾರೆ.

ನೋಡಿರಿ

