ಮಹಾರಾಷ್ಟ್ರ ಕ್ಯಾತೆ – ವಿಧಾನಸಭೆಯಲ್ಲಿ ಸರ್ವಾನುಮತದಿಂದ ಖಂಡನಾ ನಿರ್ಣಯ

ಮಹಾರಾಷ್ಟ್ರ ಕ್ಯಾತೆ – ವಿಧಾನಸಭೆಯಲ್ಲಿ ಸರ್ವಾನುಮತದಿಂದ ಖಂಡನಾ ನಿರ್ಣಯ

ಬೆಳಗಾವಿ ಗಡಿಯಲ್ಲಿ ಮಹಾರಾಷ್ಟ್ರ ಕ್ಯಾತೆ ಖಂಡಿಸಿ ರಾಜ್ಯ ವಿಧಾನಸಭೆಯಲ್ಲಿ ಸರ್ವಾನುಮತದಿಂದ ಖಂಡನಾ ನಿರ್ಣಯ ಅಂಗೀಕರಿಸಲಾಗಿದೆ. ಮಹಾರಾಷ್ಟ್ರ ಸಚಿವರು, ಸಂಸದರ ಪುಂಡಾಟದ ಹೇಳಿಕೆಯ ವಿರುದ್ಧ ವಿಧಾನಸಭೆಯಲ್ಲಿ ಭಾರಿ ಆಕ್ರೋಶ ವ್ಯಕ್ತವಾಯ್ತು. ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ ಖಂಡನಾ ನಿರ್ಣಯ ಸರ್ವಾನುಮತದಿಂದ ಅಂಗೀಕಾರವಾಯಿತು. ಕರ್ನಾಟಕ ಜನರ ಆಶಯದಂತೆ ಒಂದಿಂಚು ನೆಲ ಬಿಡುವ ಪ್ರಶ್ನೆಯೇ ಇಲ್ಲ. ಮಹಾರಾಷ್ಟ್ರ ಕ್ಯಾತೆ, ಸಚಿವರು, ಸಂಸದನ ಹೇಳಿಕೆ ಖಂಡನೀಯ ಎಂದು ಖಂಡನಾ ನಿರ್ಣಯ ಕೈಗೊಳ್ಳಲಾಯ್ತು. ಇದೇ ವೇಳೆ ನಮ್ಮ ರಾಜ್ಯದ ಸಿಎಂ ಬಗ್ಗೆ ಮಾತನಾಡಿದ್ದ ಮಹಾರಾಷ್ಟ್ರದ ಸಚಿವರು ಹಾಗೂ ಸಂಸದ ಸಂಜಯ್ ರಾವತ್ ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದರು.

suddiyaana