ಬಜೆಟ್ ಮಂಡನೆಗೆ ಕೌಂಟ್‌ಡೌನ್ – ಹಣಕಾಸು ಇಲಾಖೆಗೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಬಜೆಟ್ ಮಂಡನೆ ಮಾಡಲಿದ್ದಾರೆ. ನಿರ್ಮಲಾ ಸೀತಾರಾಮನ್ ಸತತ 7ನೇ ಬಾರಿಗೆ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಮೂರನೇ ಅವಧಿಯ ಮೊದಲ ಬಜೆಟ್ ಇದಾಗಿದೆ.
ಇದನ್ನೂ ಓದಿ: ಏಷ್ಯಾಕಪ್ ನಿಂದ ಹೊರಬಿದ್ದ ಕನ್ನಡತಿ – ಶ್ರೇಯಾಂಕಾ ಪಾಟೀಲ್ ಬೆರಳು ಮುರಿತ
ಮಂಗಳವಾರ ಬೆಳಗ್ಗೆ ಹಣಕಾಸು ಇಲಾಖೆ ಕಚೇರಿಗೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿದರು. ಈ ವೇಳೆ ಹಣಕಾಸು ಇಲಾಖೆ ಅಧಿಕಾರಿಗಳು ಬಜೆಟ್ ಪ್ರತಿಯನ್ನು ನೀಡಿದರು. ಬಳಿಕ ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಇಲಾಖೆ ರಾಜ್ಯ ಸಚಿವ ಪಂಕಜ್ ಚೌಧರಿ ಹಾಗೂ ಇಲಾಖೆ ಅಧಿಕಾರಿಗಳ ಜೊತೆ ಬಜೆಟ್ ಪ್ರತಿ ಜೊತೆ ಫೋಟೋ ಪೋಸ್ ನೀಡಿದರು.
2021ರಿಂದ ನಿರ್ಮಲಾ ಸೀತಾರಾಮನ್ ಅವರು ಕಾಗದ ರಹಿತ ಬಜೆಟ್‌ಗೆ ಒತ್ತು ನೀಡುತ್ತಿದ್ದು, ಮೇಡ್ ಇನ್ ಇಂಡಿಯಾ ಟ್ಯಾಬ್ ಮೂಲಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಹಣಕಾಸು ಇಲಾಖೆಯಿಂದ ಸಂಸತ್ ಭವನಕ್ಕೆ ತೆರಳಲಿರುವ ನಿರ್ಮಲಾ ಸೀತಾರಾಮನ್ ಬಜೆಟ್ ಭಾಷಣ ಮಾಡಲಿದ್ದಾರೆ.