ಕೇಂದ್ರದಿಂದ ರಾಜ್ಯಕ್ಕೆ ಕೊನೆಗೂ ಬರ ಪರಿಹಾರದ ಹಣ ಬಿಡುಗಡೆ – ಪರಿಹಾರ ಎಷ್ಟು ಕೋಟಿ ಗೊತ್ತಾ?

ಕೇಂದ್ರದಿಂದ ರಾಜ್ಯಕ್ಕೆ ಕೊನೆಗೂ ಬರ ಪರಿಹಾರದ ಹಣ ಬಿಡುಗಡೆ – ಪರಿಹಾರ ಎಷ್ಟು ಕೋಟಿ ಗೊತ್ತಾ?

ರಾಜ್ಯ ಸರ್ಕಾರದ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದೆ.

ರಾಜ್ಯ ಸರ್ಕಾರ ಕೆಂದ್ರ ಸರ್ಕಾರದ ಬಳಿ ಬರ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿತ್ತು. ಬರ ಕುರಿತು ಪರಿಶೀಲನೆ ನಡೆಸಿದ ರಾಜ್ಯ ಸರ್ಕಾರ 18,174 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಕೇಂದ್ರಕ್ಕೆ ಮನವಿ ಸಲ್ಲಿಕೆ ಮಾಡಿತ್ತು.  ಆದ್ರೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಬರಪರಿಹಾರ ನೀಡದೇ ಮೌನ ವಹಿಸಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಕೋರ್ಟ್‌ ಮೆಟ್ಟಿಲೇರಿತ್ತು. ಇದೀಗ ರಾಜ್ಯ ಸರ್ಕಾರ ಹೋರಾಟಕ್ಕೆ ಜಯ ಸಿಕ್ಕಿದೆ. ಇದೀಗ ಕೇಂದ್ರ ಸರ್ಕಾರ ಕರ್ನಾಟಕಕ್ಕೆ  3455 ಕೋಟಿ ರೂಪಾಯಿಗಳ ಬರ ಪರಿಹಾರ ಬಿಡುಗಡೆ ಮಾಡಿದೆ.

ಇದನ್ನೂ ಓದಿ: ಸಲ್ಮಾನ್‌ ಖಾನ್‌ ಮನೆ ಮುಂದೆ ಗುಂಡಿನ ದಾಳಿ – ಅಪಾರ್ಟ್‌ಮೆಂಟ್‌ನಿಂದ ಶಿಫ್ಟ್‌ ಆಗ್ತಾರ ನಟ?  

ಬರ ಪರಿಹಾರಕ್ಕೆ ರಾಜ್ಯ ಸರ್ಕಾರ ಮನವಿ ಸಲ್ಲಿಸಿ 7 ತಿಂಗಳಾಗಿತ್ತು. 18,172 ಕೋಟಿ ರು.ಗಳನ್ನು ಎನ್.ಡಿ.ಆರ್.ಎಫ್ ನಿಂದ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ಒತ್ತಾಯ  ಮಾಡಿತ್ತು. ಬರ ಪರಿಹಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ನಡುವೆ ಸಂಘರ್ಷ ತಾರಕಕ್ಕೇರಿ ರಾಜ್ಯಕ್ಕೆ ಬರ ಪರಿಹಾರ ನೀಡುವಲ್ಲಿ ಮೋದಿ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಸೇರಿ ಡಿಸಿಎಂ, ಮಂತ್ರಿಗಳು ಸೇರಿ ಕಾಂಗ್ರೆಸ್‌ ಪಕ್ಷದ ಮುಖಂಡರು, ಕಾರ್ಯಕರ್ತರು ಧರಣಿ ನಡೆಸಿದ್ದರು. ಬರ ಪರಿಹಾರ ಸಿಗದಿದ್ದಾಗ ರಾಜ್ಯ ಸರ್ಕಾರ ದೆಹಲಿಯಲ್ಲಿ ಕೂಡ ಪ್ರತಿಭಟನೆ ಮಾಡಿತ್ತು.

ಕೇಂದ್ರ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬರದಿದ್ದಾಗ ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯಸರ್ಕಾರ ದಾವೆ ಹೂಡಿ ಪ್ರಶ್ನಿಸಿತ್ತು. ವಿಚಾರಣೆ ನಡೆಸಿದ ಸುಪ್ರೀಂ ರಾಷ್ಟ್ರೀಯ ಪ್ರಾಕೃತಿಕ ವಿಕೋಪ ನಿಧಿಯಿಂದ ಕರ್ನಾಟಕಕ್ಕೆ ತಕ್ಷಣ ಹಣ ಬಿಡುಗಡೆ ಮಾಡುವಂತೆ ಸುಪ್ರೀಂಕೋರ್ಟ್ ಆದೇಶಿಸಿತ್ತು.

Shwetha M

Leave a Reply

Your email address will not be published. Required fields are marked *