ಅಯ್ಯಪ್ಪಮಾಲೆ ಧರಿಸಿದ ಕೇಂದ್ರ ಸಚಿವ ಹೆಚ್. ಡಿ ಕುಮಾರಸ್ವಾಮಿ – ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕುಮಾರಣ್ಣ

ಕೇಂದ್ರ ಸಚಿವ HD ಕುಮಾರಸ್ವಾಮಿ ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ. ಇರುಮುಡಿ ಹೊತ್ತುಕೊಂಡು ಅಯ್ಯಪ್ಪನ ದರ್ಶನಕ್ಕೆ ಹೊರಟಿದ್ದಾರೆ.
ಇದನ್ನೂ ಓದಿ:ಆ ಯತ್ನಾಳ್ ಬಾಯಿಗೆ ಬಂದ ಹಾಗೆ ಮಾತನಾಡುತ್ತಿದ್ದಾನೆ – ಅದು ಯಾವುದೋ ಒಂದು ಕೋತಿಯ ಬ್ರೀಡ್ : ಪ್ರದೀಪ್ ಈಶ್ವರ್
ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಹೊರಟಿದ್ದಾರೆ. ಅಯ್ಯಪ್ಪನ ಮಾಲೆ ಧರಿಸಿ ಇರುಮುಡಿ ಹೊತ್ತು ಸಾಗಿದ್ದಾರೆ. ಇವತ್ತು ಬೆಳಗ್ಗೆ (ಸೋಮವಾರ) ಕುಮಾರಸ್ವಾಮಿಯವರು ಕೊಚ್ಚಿನ್ ನಗರದ ಶ್ರೀ ಸುಬ್ರಮಣ್ಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಪೂಜೆ ಬಳಿಕ ಅಯ್ಯಪ್ಪ ಮಾಲೆ ಹಾಕಿಕೊಂಡು, ಇರಿಮುಡಿ ಹೊತ್ತು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ.
ಕೇಂದ್ರ ಸಚಿವ ಕುಮಾರಸ್ವಾಮಿ ಜೊತೆಯಲ್ಲಿ ಜೆಡಿಎಸ್ ನಾಯಕರು ಸಹ ಮಾಲೆ ಹಾಕಿ ಅಯ್ಯಪ್ಪ ದರ್ಶನಕ್ಕೆ ತೆರಳಿದರು. ಸುರೇಶ್ ಬಾಬು, ಬೋಜೇಗೌಡ, ಸಾ ರಾ ಮಹೇಶ್, ಎ ಮಂಜು ಸೇರಿದಂತೆ ಹಲವು ಜೆಡಿಎಸ್ ನಾಯಕರು ಕುಮಾರಸ್ವಾಮಿ ಜೊತೆಯಲ್ಲಿ ಶಬರಿಮಲೆಗೆ ಹೊರಟಿದ್ದಾರೆ. ಸಂಜೆ ಅಯ್ಯಪ್ಪ ಸನ್ನಿಧಿಯಲ್ಲಿ ಪಡಿ ಪೂಜೆಯಲ್ಲಿ ಪಾಲ್ಗೊಳಲ್ಲಿರುವ ಸಚಿವರು ನಂತರ ಅಯ್ಯಪ್ಪ ಸ್ವಾಮಿ ಪುಷ್ಪ ಅಭಿಷೇಕ ದಲ್ಲಿ ಭಾಗಿಯಾಗಲಿದ್ದಾರೆ. ಕುಮಾರಸ್ವಾಮಿಯವರು ಕೇಂದ್ರ ಸಚಿವರಾದ ನಂತರ ಶಬರಿಮಲೆಗೆ ಕೈಗೊಂಡ ಮೊದಲ ಯಾತ್ರೆ ಇದಾಗಿದೆ.

ನೋಡಿರಿ

