ನೀಟ್ ಅಕ್ರಮ, ವಿದ್ಯಾರ್ಥಿಗಳ ಹೋರಾಟಕ್ಕೆ ಜಯ – ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಧರ್ಮೇಂದ್ರ ಪ್ರಧಾನ್

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ದೇಶದೆಲ್ಲೆಡೆ ಪ್ರತಿಭಟನೆ ಕಾವು ವಿಕೋಪಕ್ಕೆ ಹೋಗುತ್ತಿದ್ದಂತೆಯೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಕಾಕ್ರೋಚ್ ಜನತಾ ಪಾರ್ಟಿ ದೆಹಲಿ ಜಂತರ್ ಮಂತರ್ನಲ್ಲಿ ನಿರಂತರ ಪ್ರತಿಭಟನೆ ನಡೆಸುತ್ತಿದ್ದು, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಲೇಬೇಕೆಂದು ಪಟ್ಟು ಹಿಡಿದಿತ್ತು. ಹೀಗಾಗಿ ಅಂತಿಮವಾಗಿ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಇದನ್ನೂಓದಿ: 20 ಬಾಲ್ ಮೇಲೆ ಆಡಲ್ಲ ಸೂರ್ಯವಂಶಿ – ಶ್ರೇಯಸ್ ಮಾತು ಕೇಳಲ್ವಾ ವೈಭವ್?
ನೀಟ್-ಯುಜಿ 2026 ಪರೀಕ್ಷೆ ವಿವಾದದ ನಡುವೆಯೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ದೇಶದ ಯುವಜನತೆ ಹಾಗೂ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ಅವರು ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ (X) ನಲ್ಲಿ ಪ್ರಕಟಿಸಿರುವ ಎರಡು ಪುಟಗಳ ಪತ್ರದಲ್ಲಿ ದೇಶದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿರುವ ಧರ್ಮೇಂದ್ರ ಪ್ರಧಾನ್, ‘ನೀಟ್-ಯುಜಿ 2026 ಪರೀಕ್ಷೆಗೆ ಸಂಬಂಧಿಸಿದ ಬೆಳವಣಿಗೆಗಳ ನೈತಿಕ ಹೊಣೆಯನ್ನು ಮೊದಲ ದಿನದಿಂದಲೇ ತಾವು ಹೊತ್ತಿದ್ದು, ಪರಿಸ್ಥಿತಿಯಿಂದ ಎಂದಿಗೂ ಹಿಂದೆ ಸರಿಯಲಿಲ್ಲ’ ಎಂದು ಹೇಳಿದ್ದಾರೆ.
ಮೇ 3, 2026ರಂದು ನಡೆದ ನೀಟ್-ಯುಜಿ ಪರೀಕ್ಷೆಯಲ್ಲಿ ಅಕ್ರಮಗಳು ಬೆಳಕಿಗೆ ಬಂದ ತಕ್ಷಣವೇ ಕೇಂದ್ರ ಸರ್ಕಾರ ತನಿಖೆಯನ್ನು ಸಿಬಿಐಗೆ ವಹಿಸಿತ್ತು. ಪರೀಕ್ಷೆಯನ್ನು ರದ್ದುಪಡಿಸಿ ಮರುಪರೀಕ್ಷೆ ನಡೆಸುವ ನಿರ್ಧಾರ ಕೈಗೊಂಡಿತ್ತು. ಜೊತೆಗೆ ಮುಂದಿನ ವರ್ಷದಿಂದ ನೀಟ್ ಪರೀಕ್ಷೆಯನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ಮಾದರಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ನೋಡಿರಿ

