ನಟಿ ರಚಿತಾ ರಾಮ್ ವಿರುದ್ಧ ಮತ್ತೊಂದು ದೂರು ಕೇಸ್ – ಅಡ್ವಾನ್ಸ್ ಹಣ ವಾಪಸ್ ಕೊಡದೆ ಸತಾಯಿಸುತ್ತಿದ್ದಾರಾ ನಟಿ?

ಸಂಜು ವೆಡ್ಸ್ ಗೀತಾ-2 ಸಿನಿಮಾ ಪ್ರಚಾರ ಕಾರ್ಯಕ್ಕೆ ನಟಿ ರಚಿತಾ ರಾಮ್ ಅಸಹಕಾರ ತೋರಿದ್ದಾರೆ ಎಂದು ಚಿತ್ರತಂಡ ಕನ್ನಡ ಚಲನ ಚಿತ್ರ ವಾಣಿಜ್ಯ ಮಂಡಳಿಗೆ ಚಿತ್ರತಂಡ ದೂರು ನೀಡಿತ್ತು. ರಚಿತಾ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಚಿತ್ರತಂಡ ದೂರು ನೀಡಿದೆ. ಇದ್ರ ಬೆನ್ನಲ್ಲೇ ನಟಿ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.
ಇದನ್ನೂ ಓದಿ:ಗೋಲ್ಡ್ ಸುರೇಶ್ ಮೇಲೆ ಕೇಸ್ – ಲಕ್ಷ ಲಕ್ಷ ಹಣ ವಂಚನೆ ಮಾಡಿದ್ರಾ ಬಿಗ್ ಬಾಸ್ ಮಾಜಿ ಸ್ಪರ್ಧಿ?
8 ವರ್ಷಗಳ ಹಿಂದೆ ಉಪ್ಪಿ ಮತ್ತು ರಚಿತಾ ನಟನೆಯಲ್ಲಿ ಸಿನಿಮಾ ಮೂಡಿಬರಬೇಕಿತ್ತು. ‘ಉಪ್ಪಿ ರುಪ್ಪಿ’ ಸಿನಿಮಾದಲ್ಲಿ ಉಪೇಂದ್ರ ಜೊತೆ ನಟಿಸಲು ನಟಿ ಒಪ್ಪಿಕೊಂಡಿದ್ದರು. ಈ ಸಿನಿಮಾವನ್ನು ವಿಜಯಲಕ್ಷ್ಮಿ ಅರಸ್ ನಿರ್ಮಾಣ ಮತ್ತು ಕೆ.ಮಾದೇಶ್ ನಿರ್ದೇಶನ ಮಾಡುವುದಿತ್ತು. ಈ ಪ್ರಾಜೆಕ್ಟ್‌ಗಾಗಿ ನಟಿ ರಚಿತಾರಾಮ್ ಅಡ್ವಾನ್ಸ್ ಪಡೆದಿದ್ರು. ಆದ್ರೀಗ ಅಡ್ವಾನ್ಸ್ ಹಣ ವಾಪಸ್ ಕೊಡದ ಆರೋಪದಲ್ಲಿ ನಟಿ ರಚಿತಾ ರಾಮ್ ವಿರುದ್ಧ ಫಿಲ್ಮ್ ಚೇಂಬರ್‌ನಲ್ಲಿ ಮತ್ತೊಂದು ದೂರು ದಾಖಲಾಗಿದೆ. ಹಣ ವಾಪಸ್ ಕೊಡದೇ ನಿರ್ಮಾಪಕಿಯನ್ನು ಸತಾಯಿಸುತ್ತಿದ್ದಾರೆಂದು ದೂರಲಾಗಿದೆ.
ನಟಿ ರಚಿತಾ ರಾಮ್ 23 ಲಕ್ಷ ಸಂಭಾವನೆಗೆ ನಟಿ ಕಮಿಟ್ ಆಗಿದ್ದರು. ಮುಂಗಡವಾಗಿ 13 ಲಕ್ಷ ಅಡ್ವಾನ್ಸ್ ರೂಪದಲ್ಲಿ ಹಣ ಪಡೆದಿದ್ದರು. 2017 ರಲ್ಲಿ ಬ್ಯಾಂಕಾಕ್‌ನಲ್ಲಿ ಶೂಟಿಂಗ್‌ಗೆ ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿತ್ತು. ಬರುವುದಾಗಿ ಒಪ್ಪಿಕೊಂಡು ರಚಿತಾ ರಾಮ್‌ಗೆ ಟಿಕೆಟ್ ಬುಕ್ ಮಾಡಿದ್ದರು. ಆದರೆ, ಬಂದಿರಲಿಲ್ಲ. 15 ದಿನಗಳ ಕಾಲ ಈಗ ಬರ್ತೀನಿ, ಆಗ ಬರ್ತೀನಿ ಅಂತಾ ಸತಾಯಿಸಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ.

ನೋಡಿರಿ

