ಇರಾನ್‌- ಇಸ್ರೇಲ್, ಅಮೆರಿಕಾ ಯುದ್ಧ! – ಇರಾನ್‌ ದಾಳಿಗೆ ಮೋದಿ ತೀವ್ರ ಖಂಡನೆ

ಇರಾನ್‌- ಇಸ್ರೇಲ್, ಅಮೆರಿಕಾ ಯುದ್ಧ! – ಇರಾನ್‌ ದಾಳಿಗೆ ಮೋದಿ ತೀವ್ರ ಖಂಡನೆ

ಅಮೆರಿಕ ಇಸ್ರೇಲ್ ಜಂಟಿ ದಾಳಿಯ ಬಳಿಕ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನ ವಾತಾವರಣ ಮುಂದುವರಿದಿದೆ. ಇರಾನ್ ಪ್ರತಿದಾಳಿಯ ಆಟ ಮುಂದುವರಿಸಿದೆ. ಇಸ್ರೇಲ್‌ನ ಜೊತೆಗೆ ಇತರೆ ಮುಸ್ಲಿಂ ದೇಶಗಳಲ್ಲಿರುವ ಅಮೆರಿಕ ಸೇನಾ ನೆಲೆಗಳನ್ನ ಧ್ವಂಸ ಮಾಡುತ್ತಿದೆ. ಈ ಯುದ್ದದಿಂದಾಗಿ ಭಾರತೀಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಉದ್ವಿಗ್ನತೆ ಮಧ್ಯೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರೊಂದಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ. ಇದೇ ವೇಳೆ ಭಾರತೀಯ ನಾಗರಿಕರ ಸುರಕ್ಷತೆ ಬಗ್ಗೆ ಒತ್ತಿ ಹೇಳಿದ್ದಾರೆ.

ಇದನ್ನೂ ಓದಿ: ಭಾರತದ ಪರ ಸಂಜು ಸ್ಯಾಮ್ಸನ್ ಹೊಸ ದಾಖಲೆ- ಈ ಸಾಧನೆ ಮಾಡಿದ ಟೀಮ್ ಇಂಡಿಯಾದ ಮೊದಲ ವಿಕೆಟ್ ಕೀಪರ್ ಇವರೇ

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಪ್ರಧಾನಿ ಮೋದಿ, ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಭಾರತದ ಕಳವಳಗಳನ್ನ ತಿಳಿಸಿದ್ದೇನೆ. ಜೊತೆಗೆ ನಾಗರಿಕರನ್ನ ರಕ್ಷಿಸುವ ಮಹತ್ವವನ್ನ ಎತ್ತಿ ತೋರಿಸಿದ್ದೇನೆ. ಪ್ರಸ್ತುತ ಪ್ರಾದೇಶಿಕ ಪರಿಸ್ಥಿತಿಯ ಕುರಿತು ಚರ್ಚಿಸಲು ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿ ಕರೆ ಮಾಡಿದ್ದೇನೆ. ಇತ್ತೀಚಿನ ಬೆಳವಣಿಗೆಗಳ ಕುರಿತು ಭಾರತದ ಕಳವಳಗಳನ್ನು ತಿಳಿಸಿದ್ದೇನೆ ಮತ್ತು ನಾಗರಿಕರ ಸುರಕ್ಷತೆಯನ್ನ ಆದ್ಯತೆಯಾಗಿ ಪರಿಗಣಿಸುವಂತೆ ಒತ್ತಿ ಹೇಳಿದ್ದೇನೆ. ಯುದ್ಧವನ್ನ ಬೇಗನೆ ನಿಲ್ಲಿಸುವಂತೆ ಭಾರತ ಪುನರುಚ್ಚರಿಸುತ್ತದೆ ಎಂದು ತಿಳಿಸಿರುವುದಾಗಿ ಬರೆದುಕೊಂಡಿದ್ದಾರೆ.

ಇನ್ನು ಯುಎಇ ಅಧ್ಯಕ್ಷರೊಂದಿಗೂ ಮಾತನಾಡಿದ್ದು, ಯುಎಇ ಮೇಲಿನ ಇರಾನ್‌ ದಾಳಿಯನ್ನ ಪ್ರಧಾನಿ ನರೇಂದ್ರ ಮೋದಿ ತೀವ್ರವಾಗಿ ಖಂಡಿಸಿದ್ದಾರೆ. ʻಯುಎಇ ಅಧ್ಯಕ್ಷ ನನ್ನ ಸಹೋದರ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ಮಾತನಾಡಿದೆ. ಯುಎಇ ಮೇಲಿನ ದಾಳಿಗಳನ್ನು ತೀವ್ರವಾಗಿ ಖಂಡಿಸಿದೆ ಮತ್ತು ಈ ದಾಳಿಯಲ್ಲಿನ ಜೀವಹಾನಿಗೆ ಸಂತಾಪ ಸೂಚಿಸಿದೆ. ಈ ಕಷ್ಟದ ಸಮಯದಲ್ಲಿ ಭಾರತ ಯುಎಇಯೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತದೆ. ಯುಎಇಯಲ್ಲಿ ವಾಸಿಸುವ ಭಾರತೀಯ ಸಮುದಾಯವನ್ನ ನೋಡಿಕೊಂಡಿದ್ದಕ್ಕಾಗಿ ಅವರಿಗೆ ಧನ್ಯವಾದ ಅರ್ಪಿಸಿದೆ. ನಾವು ಉದ್ವಿಗ್ನತೆ ನಿವಾರಣೆ, ಪ್ರಾದೇಶಿಕ ಶಾಂತಿ, ಭದ್ರತೆ ಮತ್ತು ಸ್ಥಿರತೆಯನ್ನ ಬೆಂಬಲಿಸುತ್ತೇವೆʼ ಎಂದು ಮತ್ತೊಂದು ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಇನ್ನು ಭಾನುವಾರ ರಾತ್ರಿ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಕ್ಯಾಬಿನೆಟ್ ಭದ್ರತಾ ಸಮಿತಿಯ ಸಭೆ ನಡೆದಿದೆ. ಸಭೆಯಲ್ಲಿ ಮಧ್ಯಪ್ರಾಚ್ಯ ಸ್ಥಿತಿಗತಿಯ ಬಗ್ಗೆ ಗಂಭೀರ ಚರ್ಚೆಯಾಗಿದೆ.  ಹೋರ್ಮುಜ್ ಜಲಸಂಧಿ ಬಂದ್ ಮಾಡಿರುವುದರಿಂದ ಭಾರತ ದೇಶದ ಕಚ್ಚಾತೈಲ ಸ್ಟಾಕ್ ಬಗ್ಗೆ ಚರ್ಚೆಯಾಗಿದೆ. ಇಸ್ರೇಲ್ ನಲ್ಲಿ 40 ಸಾವಿರ ಭಾರತೀಯರಿದ್ದಾರೆ.  ಇನ್ನೂ ಇರಾನ್ ನಲ್ಲಿ 3 ಸಾವಿರ ವಿದ್ಯಾರ್ಥಿಗಳು ಸೇರಿದಂತೆ 10 ಸಾವಿರ ಭಾರತೀಯ ನಾಗರಿಕರಿದ್ದಾರೆ.  ಗಲ್ಪ್ ರಾಷ್ಟ್ರ ಮತ್ತು ಪಶ್ಚಿಮ ಏಷ್ಯಾದಲ್ಲಿ 90 ಲಕ್ಷ ಭಾರತೀಯರಿದ್ದಾರೆ.  ಹೀಗಾಗಿ ಈಗ ಇಸ್ರೇಲ್, ಅಮೆರಿಕಾ ಹಾಗೂ ಇರಾನ್ ಯುದ್ಧದಿಂದ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯರಿಗೆ ನೆರವು ನೀಡುವ ಬಗ್ಗೆ ಚರ್ಚೆಯಾಗಿದೆ.  ಈಗಾಗಲೇ ವಿದೇಶಾಂಗ ಇಲಾಖೆಯು ತನ್ನ ರಾಯಭಾರ ಕಚೇರಿ ಮೂಲಕ ಭಾರತದ ನಾಗರಿಕರ ಜೊತೆ ಸಂಪರ್ಕದಲ್ಲಿದೆ.

ಮಧ್ಯಪ್ರಾಚ್ಯದ ಭಾರತೀಯರ ಸುರಕ್ಷತೆ ಬಗ್ಗೆ ಪ್ರಧಾನಿ ಮೋದಿ ಅಧ್ಯಕ್ಷತೆಯ ಸಭೆಯಲ್ಲಿ ಚರ್ಚೆಯಾಗಿದೆ.  ಬದಲಾಗುತ್ತಿರುವ ಪರಿಸ್ಥಿತಿಯ ಹಿನ್ನಲೆಯಲ್ಲಿ ಭಾರತ ಕೈಗೊಳ್ಳಬೇಕಾದ ಕ್ರಮದ ಬಗ್ಗೆ ಚರ್ಚೆಯಾಗಿದೆ.  ಭಾರತೀಯರನ್ನು ಈಗಿನ ಸ್ಥಿತಿಯಲ್ಲಿ ಏರ್ ಲಿಫ್ಟ್ ಮಾಡಬೇಕಾ ಇಲ್ಲವೇ ಸ್ಪಲ್ಪ ದಿನ ಕಾಯಬೇಕಾ ಎಂಬ ಬಗ್ಗೆ ಚರ್ಚೆಯಾಗಿದೆ.  ಪ್ರಧಾನಿ ಮೋದಿ, ರಾಜನಾಥ್ ಸಿಂಗ್, ಜೈಶಂಕರ್, ಅಜಿತ್ ದೋವಲ್ ಸೇರಿದಂತೆ ಪ್ರಮುಖರು ಸಭೆಯಲ್ಲಿ ಭಾಗಿಯಾಗಿದ್ದರು.

Shwetha M

Leave a Reply

Your email address will not be published. Required fields are marked *