ಹೋಟೆಲ್‌ಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ – ಆರೋಗ್ಯ ಸಚಿವ ಯು.ಟಿ. ಖಾದರ್ ಸೂಚನೆ

ಹೋಟೆಲ್‌ಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ – ಆರೋಗ್ಯ ಸಚಿವ ಯು.ಟಿ. ಖಾದರ್ ಸೂಚನೆ

ರಾಜ್ಯದ ಹೋಟೆಲ್‌ಗಳು ಹಾಗೂ ಉಪಹಾರ ಗೃಹಗಳಲ್ಲಿ ಆಹಾರ ಸುರಕ್ಷತೆ, ಸ್ವಚ್ಛತೆ ಮತ್ತು ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಆರೋಗ್ಯ ಸಚಿವ ಯು.ಟಿ. ಖಾದರ್ ಸೂಚನೆ ನೀಡಿದ್ದಾರೆ.

ಆರೋಗ್ಯ ಸೌಧದಲ್ಲಿ ಸಚಿವ ಯು.ಟಿ. ಖಾದರ್ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಹೋಟೆಲ್ ಅಸೋಸಿಯೇಷನ್ ಪದಾಧಿಕಾರಿಗಳು ಹಾಗೂ ಪ್ರಮುಖ ಹೋಟೆಲ್ ಮಾಲೀಕರೊಂದಿಗೆ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಆರೋಗ್ಯ ಇಲಾಖೆ ಕಾರ್ಯದರ್ಶಿಗಳು, ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಯುಕ್ತರು ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಇದನ್ನೂ ಓದಿ: ವಿಧಾನಪರಿಷತ್‌ಗೆ ರವಿಚಂದ್ರನ್ ಎಂಟ್ರಿ?- ಕನಸುಗಾರನಿಗೆ ಸಿಗುತ್ತಾ MLC ಸ್ಥಾನ?

ಕಳೆದ ಒಂದು ತಿಂಗಳಿಂದ ರಾಜ್ಯಾದ್ಯಂತ ಹೋಟೆಲ್ ಹಾಗೂ ಉಪಹಾರ ಗೃಹಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ನಡೆಸಲಾಗುತ್ತಿದ್ದು, ಈ ವೇಳೆ ಹಲವು ನ್ಯೂನತೆಗಳು ಹಾಗೂ ಲೋಪದೋಷಗಳು ಪತ್ತೆಯಾದ ಹಿನ್ನೆಲೆಯಲ್ಲಿ ಸಭೆ ನಡೆಸಲಾಯಿತು.

ಸ್ಟಾರ್ ಹೋಟೆಲ್‌ಗಳಿಂದ ಹಿಡಿದು ಸಣ್ಣ ಉಪಹಾರ ಗೃಹಗಳವರೆಗೆ ಎಲ್ಲೆಡೆ ಆಹಾರ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಚಿವರು ಸೂಚಿಸಿದರು. ಸಾರ್ವಜನಿಕರ ಆರೋಗ್ಯದ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ಸ್ಪಷ್ಟಪಡಿಸಿದ ಅವರು, ಹೋಟೆಲ್‌ಗಳು ಕೇವಲ ಲಾಭದ ಉದ್ದೇಶದಿಂದ ಕಾರ್ಯನಿರ್ವಹಿಸದೆ ಸಮಾಜಮುಖಿ ಜವಾಬ್ದಾರಿ ಹಾಗೂ ಸಾರ್ವಜನಿಕ ಆರೋಗ್ಯದ ಕಾಳಜಿಯೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.

Kishor KV

Leave a Reply

Your email address will not be published. Required fields are marked *