ಪಾಕಿಸ್ತಾನದೊಂದಿಗೆ ನಿರಂತರ ಸಂಪರ್ಕ – ಕಲಬುರಗಿಯಲ್ಲಿ ಇಬ್ಬರು ಶಂಕಿತ ಉ*ಗ್ರರು ವಶ

ಕಲಬುರಗಿಯಲ್ಲಿ ಇಬ್ಬರು ಶಂಕಿತ ಉಗ್ರರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗ್ತಿದೆ. ಪಾಕಿಸ್ತಾನದೊಂದಿಗೆ ನಿರಂತರ ಸಂಪರ್ಕ ಹೊಂದಿದ್ದರೆಂಬ ಶಂಕೆಯ ಮೇರೆಗೆ ಇಬ್ಬರನ್ನು ಉತ್ತರ ಪ್ರದೇಶದ ಆ್ಯಂಟಿ ಟೆರರಿಸ್ಟ್ ಸ್ಕ್ವಾಡ್ ಅಧಿಕಾರಿಗಳು ಬಂಧಿಸಿದ್ದಾರೆ.
ಇದನ್ನೂ ಓದಿ: ರೀಲ್ಸ್ ನೋಡಬೇಡ ಅಂದಿದ್ದಕ್ಕೆ ವಿದ್ಯಾರ್ಥಿನಿ ಆತ್ಮ*ಹತ್ಯೆ – ಮಗಳ ಜೀವಕ್ಕೆ ಕಂಟಕವಾಯ್ತಾ ಮೊಬೈಲ್ ಹು*ಚ್ಚು?
ಕೇಂದ್ರ ಗುಪ್ತಚರ ಇಲಾಖೆ ನೀಡಿದ ಮಾಹಿತಿ ಆಧರಿಸಿ ಉತ್ತರ ಪ್ರದೇಶ ಎಟಿಎಸ್ ತಂಡ ಕಲಬುರಗಿಯಲ್ಲಿ ಕಾರ್ಯಾಚರಣೆ ನಡೆಸಿದೆ ಎನ್ನಲಾಗಿದೆ. ಉತ್ತರ ಪ್ರದೇಶದ ನಿವಾಸಿ ವಿಳಾಸ ಹೊಂದಿರುವ ಸಮೀರ್ ಸಲ್ಮಾನ್ ಸೇರಿದಂತೆ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಇವರಿಬ್ಬರು ವಾಟ್ಸ್‌ಆ್ಯಪ್ ಕರೆ ಹಾಗೂ ಫೇಸ್‌ಬುಕ್ ಮೂಲಕ ಪಾಕಿಸ್ತಾನದೊಂದಿಗೆ ಸಂಪರ್ಕ ಹೊಂದಿದ್ದರು ಎಂಬ ಶಂಕೆ ವ್ಯಕ್ತವಾಗಿದೆ.
ಎಟಿಎಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ ಸಂದರ್ಭದಲ್ಲಿ ಸಮೀರ್ ಸಲ್ಮಾನ್ ಉಳಿದುಕೊಂಡಿದ್ದ ಕೊಠಡಿಯಲ್ಲಿ ಕೆಲವು ಮ್ಯಾಪ್‌ಗಳು ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ. ಪತ್ತೆಯಾದ ದಾಖಲೆಗಳು ಹಾಗೂ ಆರೋಪಿಗಳ ಪಾಕ್ ಸಂಪರ್ಕದ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಪ್ರಸ್ತುತ ಇಬ್ಬರನ್ನೂ ಕಲಬುರಗಿಯ ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಸಂಪರ್ಕ, ಚಟುವಟಿಕೆ ಹಾಗೂ ಪತ್ತೆಯಾದ ಮ್ಯಾಪ್‌ಗಳ ಕುರಿತು ತನಿಖೆ ಮುಂದುವರಿದಿದೆ. ಆರೋಪಿಗಳ ವಶಕ್ಕೆ ಸಂಬಂಧಿಸಿದ ಅಧಿಕೃತ ವಿವರಗಳನ್ನು ತನಿಖಾ ಸಂಸ್ಥೆಗಳು ಇನ್ನಷ್ಟೇ ಬಹಿರಂಗಪಡಿಸಬೇಕಿದೆ.

ನೋಡಿರಿ

