ಉತ್ತರ ಪ್ರದೇಶದಲ್ಲಿ ವರುಣನ ಮರಣ ಮೃದಂಗ! – ಮಳೆಯ ಆರ್ಭಟಕ್ಕೆ 74 ಮಂದಿ ಬಲಿ!

ಉತ್ತರ ಪ್ರದೇಶದಲ್ಲಿ ವರುಣನ ಮರಣ ಮೃದಂಗ! – ಮಳೆಯ ಆರ್ಭಟಕ್ಕೆ 74 ಮಂದಿ ಬಲಿ!

ದೇಶದ ಹಲವು ಭಾಗಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ. ಇದೀಗ ಉತ್ತರಪ್ರದೇಶದಲ್ಲಿ ವರುಣನ ಆರ್ಭಟಕ್ಕೆ 74 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ನೂರಾರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಎಣ್ಣೆ ಪ್ರಿಯರಿಗೆ ಬಿಗ್‌ಶಾಕ್‌! – 21 ವರ್ಷ ತುಂಬಿದ್ರಷ್ಟೇ ಮದ್ಯ ಖರೀದಿಗೆ ಅವಕಾಶ!

ಉತ್ತರ ಪ್ರದೇಶದಲ್ಲಿ ರಣ ಭೀಕರ ಮಳೆಗೆ ಇಡೀ ರಾಜ್ಯವೇ ತತ್ತರಿಸಿದೆ. ವರುಣನ ರೌದ್ರ ನರ್ತನಕ್ಕೆ ಹಲವು ಪ್ರದೇಶಗಳಲ್ಲಿ ಜನಜೀವನ ಅಸ್ಥವ್ಯಸ್ತಗೊಂಡಿದೆ. ವಿವಿಧ ಜಿಲ್ಲೆಗಳಲ್ಲಿ ಗೋಡೆ ಕುಸಿತ, ಮರಗಳು ಬಿದ್ದಿರುವುದು ಮತ್ತು ಸಿಡಿಲು ಬಡಿದ ಘಟನೆಗಳು ವರದಿಯಾಗಿದೆ. ಇದುವರೆಗೆ ಉತ್ತಪ್ರದೇಶದಲ್ಲಿ ಭಾರಿ ಮಳೆಗೆ 74 ಮಂದಿ ಮೃತಪಟ್ಟಿದ್ದಾರೆ. ನೂರಾರು ಜನರು ಗಾಯಗೊಂಡಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಭೀತಿ ಎದುರಾಗಿದೆ.

ಹವಾಮಾನ ಇಲಾಖೆಯ ವರದಿಯಂತೆ, ಪಶ್ಚಿಮ ಉತ್ತರ ಪ್ರದೇಶ ವ್ಯಾಪ್ತಿಯಲ್ಲಿ ಚಂಡಮಾರುತ ಮತ್ತು ದಕ್ಷಿಣ ರಾಜಸ್ಥಾನದಿಂದ ಬೀಸುತ್ತಿರುವ ಗಾಳಿಯ ಪ್ರಭಾವದಿಂದಾಗಿ ಗಂಟೆಗೆ 80 ರಿಂದ 100 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸಿದೆ. ಬುಧವಾರ ಮಧ್ಯಾಹ್ನ ಆರಂಭವಾದ ಈ ಹವಾಮಾನ ವೈಪರೀತ್ಯ ಸಂಜೆ ವೇಳೆಗೆ ಭೀಕರ ಚಂಡಮಾರುತವಾಗಿ ಮಾರ್ಪಟ್ಟು ಭಾರಿ ಅವಾಂತರ ಸೃಷ್ಟಿಸಿದೆ.

ಇನ್ನು ಭೀಕರ ಮಳೆಗೆ ಪ್ರಯಾಗ್‌ರಾಜ್ ಜಿಲ್ಲೆ ಅತಿ ಹೆಚ್ಚು ಹಾನಿಗೊಳಗಾಗಿದ್ದು, ಅಲ್ಲಿ 17 ಜನರು ಮೃತಪಟ್ಟಿದ್ದಾರೆ. ಮೃತರ ಪೈಕಿ ಐವರು ಮಹಿಳೆಯರು ಮತ್ತು ನಾಲ್ವರು ಮಕ್ಕಳು ಸೇರಿದ್ದಾರೆ. ಭದೋಹಿಯಲ್ಲಿ 10, ಫತೇಪುರ್ 8, ಉನ್ನಾವ್ 7, ಬದಾಯೂನ್ 6 ಮತ್ತು ಬರೇಲಿಯಲ್ಲಿ 4 ಜನರು ಸಾವನ್ನಪ್ಪಿದ್ದಾರೆ. ಉನ್ನಾವ್ ಜಿಲ್ಲೆಯ ದಹಿ ಎಂಬಲ್ಲಿ ಮರ ಬಿದ್ದು 70 ವರ್ಷದ ರೈತ ಮೃತಪಟ್ಟರೆ, ಅಸಿವಾನ್‌ನಲ್ಲಿ 9 ವರ್ಷದ ಬಾಲಕ ಬಲಿಯಾಗಿದ್ದಾನೆ.

ಇನ್ನು ಮುಂದಿನ ಕೆಲವು ಗಂಟೆಗಳಲ್ಲಿ ಲಖನೌ, ಉನ್ನಾವ್, ಸೀತಾಪುರ ಮತ್ತು ಪ್ರಯಾಗ್‌ರಾಜ್ ಸೇರಿದಂತೆ 38 ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ಸಿಡಿಲು ಸಹಿತ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮೇ 15 ರಿಂದ ಮತ್ತೆ ತಾಪಮಾನ ಏರಿಕೆಯಾಗಲಿದ್ದು, ಉಷ್ಣಾಂಶ 45 ಡಿಗ್ರಿ ಸೆಲ್ಸಿಯಸ್ ದಾಟುವ ನಿರೀಕ್ಷೆಯಿದೆ. ಮುಖ್ಯಮಂತ್ರಿ ಕಚೇರಿಯು ಜಿಲ್ಲಾಧಿಕಾರಿಗಳಿಗೆ ಪರಿಹಾರ ಕಾರ್ಯಾಚರಣೆಯನ್ನು ಚುರುಕುಗೊಳಿಸಲು ಮತ್ತು ಸಂತ್ರಸ್ತರಿಗೆ ತಕ್ಷಣದ ನೆರವು ನೀಡಲು ಸೂಚಿಸಿದೆ.

Shwetha M

Leave a Reply

Your email address will not be published. Required fields are marked *