ಉತ್ತರಾಖಂಡದಲ್ಲಿ ವರುಣನ ರುದ್ರನರ್ತನ! – 6 ಜನ ಸಾವು, 10ಕ್ಕೂ ಹೆಚ್ಚು ಮಂದಿ ನಾಪತ್ತೆ!

ದೇಶದ ಹಲವು ಭಾಗಗಳಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಸಾಕಷ್ಟು ಅವಘಡ ಸಂಭವಿಸಿದೆ. ಜಮ್ಮು ಕಾಶ್ಮೀರ, ಉತ್ತರಾಖಂಡದಲ್ಲೂ ಭಾರಿ ಮಳೆಯಾಗುತ್ತಿದೆ. ಉತ್ತರಾಖಂಡದಲ್ಲಿ ಭಾರಿ ಮಳೆಯ ಪರಿಣಾಮ ಭೂಕುಸಿತ ಸಂಭವಿಸಿದ್ದು, 6 ಮಂದಿ ಸಾವನ್ನಪ್ಪಿದ್ದಾರೆ. 10ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: ನಟ ದರ್ಶನ್ ಜೈಲಿನಲ್ಲಿದ್ರೂ ಮರೆತಿಲ್ಲ ಮೈಸೂರು ನಂಟು! – ದಸರಾ ಆನೆ ಮಾವುತರಿಗೆ ಉಡುಗೊರೆ ಕೊಟ್ಟ ದಚ್ಚು ಪತ್ನಿ ವಿಜಯಲಕ್ಷ್ಮೀ!
ಉತ್ತರಾಖಂಡದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಶುಕ್ರವಾರ ನಿರಂತರ ಮಳೆ ಸುರಿದಿದೆ. ಭಾರಿ ಮಳೆಯಿಂದಾಗಿ ಅಲ್ಲಲ್ಲಿ ಭೂಕುಸಿತ ಸಂಭವಿಸಿದೆ. ಹಲವು ಮನೆಗಳಿಗೆ ಹಾನಿಯಾಗಿದ್ದು, ಹಲವರು ಅವಶೇಷಗಳಡಿಯಲ್ಲಿ ಸಮಾಧಿಯಾಗಿದ್ದಾರೆ. ಈಗಾಗಲೇ 6 ಮಂದಿ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ರುದ್ರಪ್ರಯಾಗ ಜಿಲ್ಲೆಯ ಬಸುಕೆದಾರ್ ಪ್ರದೇಶದಲ್ಲಿ ನಿರಂತರ ಮಳೆ ಮತ್ತು ಭೂಕುಸಿತಗಳು 6ಕ್ಕೂ ಹೆಚ್ಚು ಗ್ರಾಮಗಳಲ್ಲಿ ಭಾರಿ ಹಾನಿ ಸಂಭವಿಸಿದೆ. ಭಾರೀ ಮಳೆ ಹಾಗೂ ಭೂಕುಸಿತದಿಂದ ಬದ್ರಿನಾಥ್ ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಬಂಧಿಸಲಾಗಿದೆ. ರುದ್ರಪ್ರಯಾಗ ಜಿಲ್ಲೆಯಲ್ಲೂ ಸಹ, ಬದ್ರಿನಾಥ್ ರಾಷ್ಟ್ರೀಯ ಹೆದ್ದಾರಿಯನ್ನು ಸಿರೋಬ್‌ಗಢದಲ್ಲಿ ಮುಚ್ಚಲಾಗಿದೆ. ಯಾತ್ರಿಕರು ರಸ್ತೆಯ ಬಗ್ಗೆ ಮಾಹಿತಿ ಪಡೆದ ಬಳಿಕ ಮಾತ್ರ ಪ್ರಯಾಣ ಆರಂಭಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ನೋಡಿರಿ

