ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ಲಸಿಕೆ ಸಿಗುತ್ತಿಲ್ಲ – ಇದೇನಾ ಸರ್ಕಾರದ ಮುಂಜಾಗ್ರತಾ ಕ್ರಮ..?

ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ಲಸಿಕೆ ಸಿಗುತ್ತಿಲ್ಲ – ಇದೇನಾ ಸರ್ಕಾರದ ಮುಂಜಾಗ್ರತಾ ಕ್ರಮ..?

ಬೆಂಗಳೂರು: ಕೊರೊನಾ ಭೀತಿ ಜನರಿಗೆ ಬೇಡ. ಬೆಂಗಳೂರು ಕೊರೊನಾ ಎದುರಿಸಲು ಸಕಲ ರೀತಿಯಲ್ಲೂ ಸಜ್ಜಾಗಿದೆ ಎಂದು ಸರ್ಕಾರ ಪದೇ ಪದೇ ಹೇಳುತ್ತಿದೆ. ಬಿಬಿಎಂಪಿ ಕೂಡಾ ಎಲ್ಲಾ ಮುಂಜಾಗೃತಾ ಕ್ರಮ ಕೈಗೊಂಡಿದ್ದೇವೆ ಎಂದು ಹೇಳುತ್ತಲೇ ಇದೆ. ಹಾಗಂತಾ, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಲಸಿಕೆ ತೆಗೆದುಕೊಳ್ಳದೇ ಇರುವವರು ಸರ್ಕಾರಿ ಆಸ್ಪತ್ರೆಗೆ ಹೋದರೆ, ಅಲ್ಲಿ ಲಸಿಕೆಯೇ ಸಿಗುತ್ತಿಲ್ಲ. ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ಲಸಿಕೆ ಕೊರತೆ ಇರುವ ಕಾರಣ ಜನರು ಖಾಸಗಿ ಆಸ್ಪತ್ರೆಗಳತ್ತ ಮುಖಮಾಡುತ್ತಿದ್ದಾರೆ. ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭಯಗೊಂಡಿರುವ ಜನತೆ ಬೂಸ್ಟರ್ ಲಸಿಕೆ ಪಡೆಯಲು ಮುಂದಾಗಿದ್ದಾರೆ. ಹೇಗೂ ಕೊರೊನಾ ಕಡಿಮೆಯಾಗಿದೆ ಎಂದು ಬೂಸ್ಟರ್ ಲಸಿಕೆ ಪಡೆಯಲು ಜನರು ಹಿಂದೇಟು ಹಾಕಿದ್ದರು.

ಇದನ್ನೂ ಓದಿ :  ಬೂಸ್ಟರ್ ಡೋಸ್ ಪಡೆದವರಿಗೆ ಮೂಗಿನ ಮೂಲಕ ಲಸಿಕೆ ಬೇಡ – ತಜ್ಞರ ಸಲಹೆ

ಈಗಾಗಲೇ ಎರಡು ಡೋಸ್‌ಗಳನ್ನು ಪಡೆದಾಗಿದೆ. ಆದರೆ, ಸರ್ಕಾರ ಈಗ ಬೂಸ್ಟರ್ ಡೋಸ್ ಪಡೆಯಬೇಕು ಎಂದು ಹೇಳಿದೆ. ಆದರೆ ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಶೀಲ್ಡ್ ಹಾಗೂ ಕೋರ್ಬಿವ್ಯಾಕ್ಸ್ ಲಸಿಕೆ ಲಭ್ಯವಿಲ್ಲ. ಬೆಂಗಳೂರಿನ ಬಹುತೇಕ ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಶೀಲ್ಡ್ ಲಸಿಕೆ ದಾಸ್ತಾನಿಲ್ಲದಿರುವುದು ತಿಳಿದುಬಂದಿದೆ. ಹಲವೆಡೆ ಕೋವಿಶೀಲ್ಡ್ ಲಸಿಕೆ ಲಭ್ಯ ಇಲ್ಲದ ಹಿನ್ನಲೆಯಲ್ಲಿ ಪರ್ಯಾಯವಾಗಿ ಕೋರ್ಬಿವ್ಯಾಕ್ಸ್ ಲಸಿಕೆ ನೀಡಲಾಗುತ್ತಿದೆ. ಕೋವಿಶೀಲ್ಡ್ ಪಡೆದವರು ಕೋರ್ಬಿವ್ಯಾಕ್ಸ್ ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ಸರ್ಕಾರಕ್ಕೆ 2 ಕೋಟಿ ಕೋವಿಡ್ ಲಸಿಕೆಯನ್ನು ಉಚಿತವಾಗಿ ನೀಡಲು ಸಿದ್ಧ ಎಂದು ಸೀರಮ್ ಇನ್ಸ್ಟಿಟ್ಯೂಟ್ ಹೇಳಿದೆ. ಸೀರಮ್ ಇನ್ಸ್ಟಿಟ್ಯೂಟ್‌ನ ಸರ್ಕಾರ ಮತ್ತು ನಿಯಂತ್ರಣ ವ್ಯವಹಾರಗಳ ನಿರ್ದೇಶಕ ಪ್ರಕಾಶ್ ಕುಮಾರ್ ಸಿಂಗ್ ಅವರು 410 ಕೋಟಿ ರೂಪಾಯಿಗಳ ಉಚಿತ ಡೋಸ್ ನೀಡುವುದಾಗಿ ಆರೋಗ್ಯ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ. ಕೆಲ ದೇಶಗಳಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ (SII) ಕೇಂದ್ರ ಸರ್ಕಾರಕ್ಕೆ ಎರಡು ಕೋಟಿ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ಉಚಿತವಾಗಿ ನೀಡಿದೆ ಎಂದು ತಿಳಿದುಬಂದಿದೆ.

suddiyaana