ಚೆನ್ನೈ ವಿರುದ್ಧ ರಾಜಸ್ಥಾನ್ ರಾಯಲ್ಸ್‌ಗೆ ಜಯ – ಗೆಲುವಿನೊಂದಿಗೆ ಲೀಗ್‌ಗೆ ವಿದಾಯ ಹೇಳಿದ ಆರ್‌ಆರ್

ಚೆನ್ನೈ ವಿರುದ್ದ ಗೆಲುವಿನೊಂದಿಗೆ ಈ ಬಾರಿಯ ಐಪಿಎಲ್ ಲೀಗ್‌ಗೆ ರಾಜಸ್ಥಾನ ರಾಯಲ್ಸ್ ವಿದಾಯ ಹೇಳ್ತು. ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ತಂಡ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 187 ರನ್ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ರಾಜಸ್ಥಾನ ರಾಯಲ್ಸ್ 17.1 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 188 ರನ್ ಕಲೆ ಹಾಕಿತು.
ಚೆನ್ನೈ ನೀಡಿದ ಗುರಿಯನ್ನು ಬೆನ್ನಟ್ಟಿದ ರಾಜಸ್ಥಾನ ರಾಯಲ್ಸ್ ತಂಡದ ಆರಂಭ ಸಾಧಾರಣವಾಗಿತ್ತು. ಭರವಸೆಯ ಆಟಗಾರ ಯಶಸ್ವಿ ಜೈಸ್ವಾಲ್ 5 ಬೌಂಡರಿ, 2 ಸಿಕ್ಸರ್ ಸಹಾಯದಿಂದ 36 ರನ್ ಬಾರಿಸಿ ಕಾಂಬೋಜ್ ಎಸೆತದಲ್ಲಿ ಬೋಲ್ಡ್ ಆದ್ರು. ವೈಭವ್ ಅರ್ಧಶತಕ ಎರಡನೇ ವಿಕೆಟ್‌ಗೆ ವೈಭವ್ ಸೂರ್ಯವಂಶಿ ಹಾಗೂ ಸಂಜು ಸ್ಯಾಮ್ಸನ್ ಜೋಡಿ ಉತ್ತಮ ಜೊತೆಯಾಟದ ಕಾಣಿಕೆ ನೀಡಿತು. ಈ ಜೋಡಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬೌಲರ್‌ಗಳನ್ನು ಕಾಡಿದರು. ಈ ಜೋಡಿ 59 ಎಸೆತಗಳಲ್ಲಿ 98 ರನ್ ಸಿಡಿಸಿತು. ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ಸಂಜು 41 ರನ್‌ಗಳಿಗೆ ಔಟ್ ಆದರು. ಇನ್ನು ಆರಂಭಿಕ ವೈಭವ್ ಕ್ಲಾಸಿಕ್ ಬ್ಯಾಟಿಂಗ್ ಪ್ರದರ್ಶಿಸಿದರು. ಇವರು 4 ಬೌಂಡರಿ, 4 ಸಿಕ್ಸರ್ ಸಹಾಯದಿಂದ 57 ರನ್ ಬಾರಿಸಿ ಇಲ್ಲದ ಹೊಡೆತಕ್ಕೆ ಮುಂದಾಗಿ ಅಶ್ವಿನ್‌ಗೆ ವಿಕೆಟ್ ಒಪ್ಪಿಸಿದರು. ರಿಯಾನ್ ಪರಾಗ್ ಬಂದು ಹೋಗುವ ಸಂಪ್ರದಾಯವನ್ನು ಮುಗಿಸಿದರು.
ಕಳಪೆ ಪ್ರದರ್ಶನ ತೋರಿಸಿದ ಚೆನ್ನೈ
ಕಳೆದ ಕೆಲವು ಪಂದ್ಯಗಳಲ್ಲಿ ತಂಡವನ್ನು ಗೆಲುವಿನ ಹತ್ತಿರಕ್ಕೆ ತಂದು ನಿಲ್ಲಿಸಿ ಔಟ್ ಆಗುತ್ತಿದ್ದ ಧ್ರುವ್ ಜುರೇಲ್ ಚೆನ್ನೈ ವಿರುದ್ಧದ ಅಜೇಯ 31 ರನ್ ಬಾರಿಸಿದರು. ಶಿಮ್ರೋನ್ ಹೆಟ್ಮೆಯರ್ ಅಜೇಯ 12 ರನ್ ಸಿಡಿಸಿ ಗೆಲುವಿನಲ್ಲಿ ಮಿಂಚಿದರು. ಕಳಪೆ ಆರಂಭ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆರಂಭ ಕಳಪೆಯಾಗಿತ್ತು. ಡ್ವೇನ್ ಕಾನ್ವೆ, ಉರ್ವಿಲ್ ಪಟೇಲ್ ರನ್ ಕಲೆ ಹಾಕುವಲ್ಲಿ ವಿಫಲರಾದರು. ಆರಂಭಿಕರಾದ ಆಯುಷ್ ಮಾತ್ರೆ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಇವರು 8 ಬೌಂಡರಿ, 1 ಸಿಕ್ಸರ್ ಸಹಾಯಿಂದ 43 ರನ್ ಬಾರಿಸಿ ಔಟ್ ಆದರು. ಸಿಎಸ್‌ಕೆ ಪವರ್ ಪ್ಲೇನಲ್ಲಿ 3 ವಿಕೆಟ್ ನಷ್ಟಕ್ಕೆ 68 ರನ್ ಕಲೆ ಹಾಕಿತು. ಆಯುಷ್ ಮಾತ್ರೆ ಹಾಗೂ ಅಶ್ವಿನ್ ಜೋಡಿ ಮೂರನೇ ವಿಕೆಟ್‌ಗೆ 24 ಎಸೆತಗಳಲ್ಲಿ 56 ರನ್ ಸೇರಿಸಿತು.