ಜ್ಞಾನವಾಪಿ ಆವರಣದಲ್ಲಿ ವೈಜ್ಞಾನಿಕ ಸಮೀಕ್ಷೆಗೆ ವಾರಣಾಸಿ ಕೋರ್ಟ್ ಅನುಮತಿ
ವಾರಣಾಸಿ: ಭಾರಿ ವಿವಾದಕ್ಕೆ ಕಾರಣವಾಗಿದ್ದ ಉತ್ತರ ಪ್ರದೇಶದ ವಾರಾಣಸಿಯಲ್ಲಿರುವ ಜ್ಞಾನವಾಪಿ ಮಸೀದಿ ವಿಚಾರವಾಗಿ ಮಹತ್ವದ ಬೆಳವಣಿಗೆಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರಣಾಸಿ ಕೋರ್ಟ್ ಮಹತ್ವದ ಆದೇಶ ನೀಡಿದ್ದು, ಜ್ಞಾನವಾಪಿ ಆವರಣದಲ್ಲಿ ವೈಜ್ಞಾನಿಕ ಸಮೀಕ್ಷೆಗೆ ಆದೇಶ ನೀಡಿದೆ.
ಇದನ್ನೂ ಓದಿ: ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ – ಭಜರಂಗದಳದ ಮೂವರು ಕಾರ್ಯಕರ್ತರು ಗಡಿಪಾರು?
ಜ್ಞಾನವಾಪಿ ಮಸೀದಿ ಆವರಣದ ವೈಜ್ಞಾನಿಕ ಸಮೀಕ್ಷೆಗೆ ವಾರಣಾಸಿ ಕೋರ್ಟ್ ಶುಕ್ರವಾರ ಅನುಮತಿ ನೀಡಿದೆ. ಆರ್ಕಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾ ಸಮೀಕ್ಷೆ ನಡೆಸಿ ಅಂತಿಮ ವರದಿಯನ್ನು ಆಗಸ್ಟ್ 4 ರೊಳಗೆ ಸಲ್ಲಿಸಬೇಕು ಎಂದು ನ್ಯಾಯಾಲಯ ಹೇಳಿದೆ.
ಬ್ಯಾರಿಕೇಡ್ ಹಾಕಿರುವ ವಜುಕಾನಾ ಹೊರತುಪಡಿಸಿ ಉಳಿದೆಡೆ ಸರ್ವೆ ಮಾಡುವಂತೆ ಆದೇಶ ನೀಡಿದೆ. ಕೇವಲ ತಾಂತ್ರಿಕ ಸಮೀಕ್ಷೆ ನಡೆಸಬೇಕು, ಯಾವುದೇ ಉತ್ಕನನ ಮಾಡುವಂತಿಲ್ಲ ಎಂದು ಸೂಚನೆ ನೀಡಿದೆ. ಇನ್ನು ಜ್ಞಾನವಾಪಿಯಲ್ಲಿ ಇರುವ ಶಿವಲಿಂಗ ಎಂದು ಹೇಳಲಾಗುವ ವಜುಕಾನಾದ ಪ್ರದೇಶದ ಸರ್ವೆ ಇದರಲ್ಲಿ ಇರುವುದಿಲ್ಲ. ಇದಕ್ಕೆ ಸುಪ್ರೀಂ ಕೋರ್ಟ್‌ನ ಅನುಮತಿ ಬೇಕಾಗಿದೆ.