ನಮ್ಮ ಮೆಟ್ರೋ ನೇರಳೆ ಮಾರ್ಗದ ಸಂಚಾರದಲ್ಲಿ ನವೆಂಬರ್‌ 5ಕ್ಕೆ ವ್ಯತ್ಯಯ!

ನಮ್ಮ ಮೆಟ್ರೋ ನೇರಳೆ ಮಾರ್ಗದ ಸಂಚಾರದಲ್ಲಿ ನವೆಂಬರ್‌ 5ಕ್ಕೆ ವ್ಯತ್ಯಯ!

ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಮಹತ್ವದ ಸುದ್ದಿ ಇದೆ. ಭಾನುವಾರ ನೇರಳೆ ಮಾರ್ಗದ ಮೆಟ್ರೋ ರೈಲು ಸೇವೆಯಲ್ಲಿ ಭಾರಿ ವ್ಯತ್ಯಯವಾಗಲಿದೆ ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

ನೇರಳೆ ಮಾರ್ಗದಲ್ಲಿ ಸ್ವಾಮಿ ವಿವೇಕಾನಂದ ರಸ್ತೆ ಮತ್ತು ಇಂದಿರಾನಗರ ಮೆಟ್ರೋ ನಿಲ್ದಾಣಗಳ ನಡುವೆ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಹೀಗಾಗಿ ಎಂ.ಜಿ. ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳ ನಡುವಿನ ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲು ಸೇವೆಗಳು ಬೆಳಗ್ಗೆ 7 ಗಂಟೆಗೆ ಬದಲಾಗಿ 9 ಗಂಟೆಗೆ ಪ್ರಾರಂಭವಾಗಲಿದೆ.

ಇದನ್ನೂ ಓದಿ: ನಮ್ಮ ಮೆಟ್ರೋ ಹಳಿಯೇರಲು ಚೀನಾ ರೈಲು ಸಿದ್ಧ ! – ಭಾರತಕ್ಕೆ ರೈಲುಗಳ ರವಾನೆ ಯಾವಾಗ?

ಬೆಳಗ್ಗೆ 9 ಗಂಟೆಯ ನಂತರ ಎಂ.ಜಿ. ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆಗಳು ಎಂದಿನಂತೆ ಲಭ್ಯವಿರುತ್ತದೆ ಎಂದು ಬಿಎಂಆರ್ ಸಿಎಲ್ ಪ್ರಕಟಣೆ ತಿಳಿಸಿದೆ.

ಚಲ್ಲಘಟ್ಟ ಮತ್ತು ಎಂ.ಜಿ.ರಸ್ತೆ, ಬೈಯಪ್ಪನಹಳ್ಳಿ ಮತ್ತು ವೈಟ್‌ಫೀಲ್ಡ್‌ (ಕಾಡುಗೋಡಿ), ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ನಡುವಿನ ಮಾರ್ಗಗಳಲ್ಲಿ ರೈಲುಗಳ ಸೇವೆಯು ಬೆಳಗ್ಗೆ 7 ಗಂಟೆಗೆ ಆಯಾ ಟರ್ಮಿನಲ್‌ ನಿಲ್ದಾಣಗಳಿಂದ ವೇಳಾಪಟ್ಟಿಯ ಪ್ರಕಾರ ಸಂಚರಿಸಲಿವೆ.

ನಮ್ಮ ಮೆಟ್ರೋ ಹೆಸರು ಬದಲಾವಣೆ ವಿವಾದ

‘ನಮ್ಮ ಮೆಟ್ರೋ’ದ ಹೆಸರು ಬದಲಾವಣೆ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿಪರ-ವಿರೋಧದ ಚರ್ಚೆಗಳು ಕಾವೇರಿವೆ. ಹೆಸರು ಬದಲಾವಣೆಯ ಪ್ರಸ್ತಾವಕ್ಕೆ ಕೆಲವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಮೆಟ್ರೋ ದ ಹೆಸರು ಬದಲಾಯಿಸುವ ಪ್ರಕ್ರಿಯೆ ಕೈಬಿಟ್ಟು ಮೂಲಭೂತ ಸೌಕರ್ಯ ಕಲ್ಪಿಸಬೇಕು. ಮೆಟ್ರೋ ಸಂಪರ್ಕ ಜಾಲ ವಿಸ್ತರಿಸಿ, ಫೀಡರ್‌ ಬಸ್‌, ಸಬ್‌ಅರ್ಬನ್‌ ರೈಲು ಸಂಚಾರ ಯೋಜನೆಗಳ ಜಾರಿಗೆ ಆದ್ಯತೆ ನೀಡಬೇಕು ಎಂದು ಸಾರ್ವಜನಿಕರು ಎಕ್ಸ್‌ನಲ್ಲಿ ಟ್ವೀಟ್‌ ಮಾಡಿದ್ದಾರೆ.

Shwetha M