ಬಿಗ್‌ಬಾಸ್ ಮನೆಯಲ್ಲಿ ವರ್ತೂರು ಸಂತೋಷ್ ಬಂಧನ – ಬಿಗ್‌ಬಾಸ್ ಇತಿಹಾಸದಲ್ಲೇ ಮೊದಲ ಬಾರಿ ಸ್ಪರ್ಧಿಯ ಬಂಧನ
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್ ಮನೆಯ ಇತಿಹಾಸದಲ್ಲೇ ಮೊದಲ ಬಾರಿ ಸ್ಪರ್ಧಿಯೊಬ್ಬರನ್ನು ಅರೆಸ್ಟ್ ಮಾಡಲಾಗಿದೆ. ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 10 ರಲ್ಲಿ ಸ್ಪರ್ಧಿಯಾಗಿರುವ ವರ್ತೂರು ಸಂತೋಷ್ ಬಂಧನವಾಗಿದೆ. ವರ್ತೂರ್ ಸಂತೋಷ್ ಮಾಡಿರುವ ಅಪರಾಧವೇನು? ಬಿಗ್‌ಬಾಸ್ ಮನೆಗೇ ಬಂದು ಸ್ಪರ್ಧಿಯನ್ನು ಅರೆಸ್ಟ್ ಮಾಡುವ ಅರ್ಜೆಂಟ್ ಏನಿತ್ತು ಎಂಬ ವಿವರ ಇಲ್ಲಿದೆ.
ಇದನ್ನೂ ಓದಿ: ಬಿಗ್ ಬಾಸ್ ನಲ್ಲೀಗ ‘ಹಳ್ಳಿಕಾರ್ ಒಡೆಯ’ನ ಹವಾ – ಹಳ್ಳಿಕಾರ್ ತಳಿಯ ಬಗ್ಗೆ ಜಗತ್ತಿಗೆ ತಿಳಿಸಲು ದೊಡ್ಮನೆಗೆ ಎಂಟ್ರಿ
ವರ್ತೂರು ಸಂತೋಷ್ ಅವರನ್ನು ಅರಣ್ಯಾಧಿಕಾರಿಗಳು ಅಕ್ಟೋಬರ್ 22ರ ಭಾನುವಾರ ತಡರಾತ್ರಿ ಅರೆಸ್ಟ್ ಮಾಡಿದ್ದಾರೆ. ‘ಕನ್ನಡ ಬಿಗ್ ಬಾಸ್’ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಬಿಗ್ ಬಾಸ್ ಮನೆ ಒಳಗೆ ಅರಣ್ಯಾಧಿಕಾರಿಗಳ ಎಂಟ್ರಿ ಆಗಿದೆ. ಸಂತೋಷ್ ಅವರು ಕತ್ತಿಗೆ ಒಂದು ಚೈನ್ ಹಾಕಿದ್ದರು. ಇದರಲ್ಲಿ ಹುಲಿಯ ಉಗುರು ಕಾಣಿಸಿದೆ. ಈ ಕಾರಣದಿಂದಲೇ ಅವರನ್ನು ಅರೆಸ್ಟ್ ಮಾಡಲಾಗಿದೆ. ವರ್ತೂರು ಸಂತೋಷ್ ಅವರು ಬಿಗ್ ಬಾಸ್‌ಗೆ ಬರುವ ಸಂದರ್ಭದಲ್ಲಿ ಕತ್ತಿನಲ್ಲಿ ಹುಲಿ ಉಗುರಿನ ಪೆಂಡೆಂಟ್ ಇರುವ ಚೈನ್ ಹಾಕಿದ್ದರು. ಈ ಪೆಂಡೆಂಟ್ ಚರ್ಚೆ ಹುಟ್ಟುಹಾಕಿತ್ತು. ವನ್ಯಜೀವಿ ಕಾಯಿದೆ ಉಲ್ಲಂಘನೆ ಮಾಡಿದ್ದರಿಂದ ಅವರು ಬಂಧನಕ್ಕೆ ಒಳಗಾಗಿದ್ದಾರೆ.
ಬೆಂಗಳೂರಿನ ರಾಮೋಹಳ್ಳಿ ಅರಣ್ಯಾಧಿಕಾರಿಗಳಿಂದ ಈ ಕಾರ್ಯಾಚರಣೆ ನಡೆದಿದೆ. ಸುಮೊಟೋ ಕೇಸ್ ದಾಖಲಿಸಿ ಕಾರ್ಯಾಚರಣೆ ಮಾಡಲಾಗಿತ್ತು. ಇನ್ನಷ್ಟು ಮಾಹಿತಿ ಪಡೆಯಲು ಸಂತೋಷ್ ಅವರನ್ನು ಕೋರ್ಟ್ಗೆ ಹಾಜರುಪಡಿಸಲಾಗಿದೆ.