ಐಎಎಸ್ ಅಧಿಕಾರಿ ಶಿವರಾಮ್ ಇನ್ನಿಲ್ಲ – ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದ ಕನ್ನಡದ ನಟ

ಐಎಎಸ್ ಅಧಿಕಾರಿ ಶಿವರಾಮ್ ಇನ್ನಿಲ್ಲ – ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದ ಕನ್ನಡದ ನಟ

ಐಎಎಸ್ ಅಧಿಕಾರಿ ಕಮ್ ‘ಬಾ ನಲ್ಲೆ ಮಧುಚಂದ್ರಕೆ’ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಾಯಕರಾಗಿ ನಟಿಸಿರುವ ಕೆ.ಶಿವರಾಮ್ ಇಹಲೋಕ ತ್ಯಜಿಸಿದ್ದಾರೆ. 71 ವರ್ಷದ ಶಿವರಾಮ್‌ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.  ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಕೊನೆಯುಸಿರೆಳೆದಿದ್ದಾರೆ.

ಕಳೆದ  20 ದಿನಗಳ ಹಿಂದೆ ರಕ್ತದೊತ್ತಡದಲ್ಲಿ ಏರುಪೇರಾದ ಕಾರಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಶಿವರಾಮ್​ ಅವರು ಕಾರ್ಡಿಯಕ್ ಅರೆಸ್ಟ್​ ಆಗಿತ್ತು. ಆ ಬಳಿಕ ಅವರ ಬ್ರೈನ್ ಡೆಡ್ ಆಗಿದೆ. ಹೀಗಾಗಿ ಅವರ ಪರಿಸ್ಥಿತಿ ಚಿಂತಾಜನಕವಾಗಿತ್ತು. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಗುರುವಾರ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಇವರ ಸಾವು ಅಭಿಮಾನಿಗಳಿಗೆ ನೋವು ತಂದಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಚಿತ್ರರಂಗದ ಗಣ್ಯರು ಹಾಗು ರಾಜಕಾರಣಿಗಳು ಕೋರುತ್ತಿದ್ದಾರೆ.

ಇದನ್ನೂ ಓದಿ: ಐಎಎಸ್ ಅಧಿಕಾರಿ ಕೆ.ಶಿವರಾಂ ಬದುಕಿದ್ದಾರೆ, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ – ಅಳಿಯ ಪ್ರದೀಪ್‌ ಸ್ಪಷ್ಟನೆ

ಸರ್ಕಾರಿ ಸೇವೆ, ಸಿನಿಮಾ ಕ್ಷೇತ್ರವಲ್ಲದೆ, ರಾಜಕೀಯದಲ್ಲೂ ಶಿವರಾಮ್​ ಗುರುತಿಸಿಕೊಂಡಿದ್ದರು. 9ಕ್ಕೂ ಹೆಚ್ಚು ಸಿನಿಮಾದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದರು. ಅಲ್ಲದೆ ರಾಜಕೀಯಕ್ಕೂ ಧುಮುಕಿ ಲೋಕಸಭಾ ಚುನಾವಣೆಯಲ್ಲೂ ಸ್ಪರ್ಧಿಸಿದ್ದರು.

ಇನ್ನು ಈ ಬಾರಿಯ ಲೋಕಸಭಾ ಚುನಾವಣೆಯ ಟಿಕೆಟ್​ ಆಕ್ಷಾಂಕಿ ಎಂದು ಹೇಳಲಾಗಿತ್ತು. ಆದರೆ ಇಂದು ವಿಧಿಯ ಕ್ರೂರಲೀಲೆಗೆ ಬಲಿಯಾಗಿದ್ದಾರೆ. ಆಸ್ಪತ್ರೆಗೆ ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ, ಮಾಜಿ ಸಚಿವ ಸೋಮಣ್ಣ ಹಲವು ಗಣ್ಯರು ಭೇಟಿ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯನವರು ಸಹ ಟ್ವೀಟ್​ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ.

Shwetha M