ರಾಮ ಶಾಮ ಭಾಮ ಖ್ಯಾತಿಯ ನಟ ಇನ್ನಿಲ್ಲ! – ಯಶವಂತ ಸರದೇಶಪಾಂಡೆ ವಿಧಿವಶ

ರಾಮ ಶಾಮ ಭಾಮ ಖ್ಯಾತಿಯ ನಟ ಇನ್ನಿಲ್ಲ! – ಯಶವಂತ ಸರದೇಶಪಾಂಡೆ ವಿಧಿವಶ

ಕನ್ನಡ ಚಿತ್ರರಂಗಕ್ಕೆ ದೊಡ್ಡ ಆಘಾತ ಎದುರಾಗಿದೆ. ಕನ್ನಡ ರಂಗಭೂಮಿ, ಚಲನಚಿತ್ರ ಮತ್ತು ಕಿರುತೆರೆಯ ಲೋಕದಲ್ಲಿ  ಹೆಸರು ಪಡೆದ ಕಲಾವಿದ ಯಶವಂತ ಸರದೇಶಪಾಂಡೆ ನಿಧನರಾಗಿದ್ದಾರೆ. ಯಶವಂತ ಸರದೇಶಪಾಂಡೆ ಅವರು (60) ಹೃದಯಾಘಾತದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ.

ಇದನ್ನೂ ಓದಿ: 1 ಸಾವಿರಕ್ಕೆ 20 ಶರ್ಟ್‌ ಆಫರ್‌! – ಅಂಗಡಿ ಮುಂದೆ ಜಮಾಯಿಸಿದ ಸಾವಿರಾರು ಗ್ರಾಹಕರು.. ಆಮೇಲೆ ಆಗಿದ್ದೇನು?

ನಿನ್ನೆ ರಾತ್ರಿ ಧಾರವಾಡದಲ್ಲಿ ನಾಟಕ ಪ್ರದರ್ಶನ ನೀಡಿದ್ದ ಯಶವಂತ್ ಸರದೇಶಪಾಂಡೆ , ಇಂದು ಬೆಳಿಗ್ಗೆ ಬೆಂಗಳೂರುಗೆ ಆಗಮಿಸಿದ್ದರು. ಹೃದಯಾಘಾತ ಸಂಭವಿಸಿದ ತಕ್ಷಣವೇ ಯಶವಂತ್ ಸರದೇಶಪಾಂಡೆ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಯಶವಂತ ಅವರು ಕೊನೆಯುಸಿರೆಳೆದಿದ್ದಾರೆ.  ಪತ್ನಿ ಮಾಲತಿ ಸರದೇಶಪಾಂಡೆ, ಮಗಳನ್ನ ದೋಸ್ತಿಯನ್ನ ಅಗಲಿದ್ದಾರೆ. ಇವರ ನಿಧನಕ್ಕೆ ಸ್ಯಾಂಡಲ್‌ ವುಡ್‌ ಕಲಾವಿದರು, ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸೋಶಿಯಲ್ ಮೀಡಿಯಾ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ‘ಖ್ಯಾತ ಕನ್ನಡ ರಂಗಭೂಮಿ ನಟ, ರಾಜ್ಯಾದ್ಯಂತ ಅನೇಕ ನಾಟಕಗಳಲ್ಲಿ ನಟಿಸಿ-ನಿರ್ದೇಶಿಸಿ ಅತ್ಯಂತ ಜನಪ್ರೀಯ ನಾಟಕಕಾರರಾಗಿದ್ದ  ನಮ್ಮ ಹುಬ್ಬಳ್ಳಿಯ ಯಶವಂತ ಸರದೇಶಪಾಂಡೆ ಅವರು ಇಂದು ಬೆಳಿಗ್ಗೆ ನಿಧನರಾದ ವಿಷಯ ತಿಳಿದು ಅತ್ಯಂತ ದುಃಖವಾಗಿದೆ. ಅವರ ಆಲ್ ದಿ ಬೆಸ್ಟ್ ನಾಟಕ ಅಭೂತಪೂರ್ವ ಯಶಸ್ಸು ಕಂಡಿತು. ಕಿರುತೆರೆ ಮತ್ತು ಚಲನಚಿತ್ರಗಳಲ್ಲಿಯೂ ಇವರು ಪಾತ್ರವಹಿಸುತ್ತಿದ್ದರು’ ಎಂದು ಅವರು ಬರೆದುಕೊಂಡಿದ್ದಾರೆ.

ಯಶವಂತ ಅವರು ನಾಟಕಗಳನ್ನು ನಿರ್ದೇಶಿಸಿ, ಅವುಗಳಲ್ಲಿ ನಟಿಸಿ ಜನಪ್ರಿಯತೆ ಪಡೆದುಕೊಂಡಿದ್ದರು. ಅವರು ಮುಖ್ಯವಾಗಿ ಹಾಸ್ಯ ನಾಟಕಗಳಲ್ಲಿ ನಟಿಸುತ್ತಿದ್ದರು. ಕರ್ನಾಟಕ ಮಾತ್ರವಲ್ಲದೆ, ದೇಶ-ವಿದೇಶಗಳಲ್ಲಿಯೂ ನಾಟಕಗಳನ್ನು ಮಾಡಿದ್ದರು. ಅವರಿಗೆ ಅಪಾರ ಅಭಿಮಾನಿಗಳು ಇದ್ದಾರೆ. ಯಶವಂತ ಅವರು ನಾಟಕಗಳಲ್ಲಿ ಮಾತ್ರವಲ್ಲದೆ ಹಲವು ಸಿನಿಮಾ ಹಾಗೂ ಧಾರಾವಾಹಿಗಳಲ್ಲೂ ನಟಿಸಿದ್ದರು. ಅಲ್ಲಿಯೂ ಹಾಸ್ಯ ಪಾತ್ರಗಳ ಮೂಲಕವೇ ಗುರುತಿಸಿಕೊಂಡಿದ್ದರು. ‘ಆಲ್ ದಿ ಬೆಸ್ಟ್’ ನಾಟಕ ಅಭೂತಪೂರ್ವ ಯಶಸ್ಸು ಕಂಡಿತ್ತು.‘ರಾಮ ಶಾಮ ಭಾಮಾ’ ಸಿನಿಮಾದಲ್ಲಿ ನಟಿಸಿ ಅವರು ಗಮನ ಸೆಳೆದಿದ್ದರು.

Shwetha M