ಭಾರತದ ಉಪರಾಷ್ಟ್ರಪತಿ ಚುನಾವಣೆಗೆ ಮುಹೂರ್ತ ನಿಗದಿ – ಉಪರಾಷ್ಟ್ರಪತಿ ಸ್ಥಾನಕ್ಕೆ ಸೆ.9ರಂದು ಚುನಾವಣೆ

ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನಕರ್ ಅವರು ಅನಾರೋಗ್ಯದ ಕಾರಣ ನೀಡಿ ಇತ್ತೀಚೆಗೆ ರಾಜೀನಾಮೆ ನೀಡಿದ್ರು. ಇದೀಗ ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ಮುಹೂರ್ತ ನಿಗದಿಯಾಗಿದೆ. ಸೆಪ್ಟೆಂಬರ್ 9ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಇದನ್ನೂ ಓದಿ: ಮೊದಲ ದಿನವೇ ಬಾಕ್ಸ್ ಆಫೀಸ್ ಲೂಟಿ ಮಾಡಿದ ವಿಜಯ್ -ಕಿಂಗ್‌ಡಮ್ ಸಿನಿಮಾದಲ್ಲಿ ದೇವರಕೊಂಡ ಕಮಾಲ್
ಉಪರಾಷ್ಟ್ರಪತಿ ಸ್ಥಾನಕ್ಕೆ ನಡೆಯಲಿರುವ ಚುನಾವಣೆ ಸಂಬಂಧ ಕೇಂದ್ರ ಚುನಾವಣಾ ಆಯೋಗ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ. ಇದೇ ಆಗಸ್ಟ್ 7ರಂದು ಅಧಿಸೂಚನೆ ಪ್ರಕಟವಾಗಲಿದೆ. ಆಗಸ್ಟ್ 21ರಂದು ಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಗಸ್ಟ್ 22ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಆಗಸ್ಟ್ 25ರ ಒಳಗೆ ನಾಮಪತ್ರ ಹಿಂಪಡೆಯಲು ಅವಕಾಶ ಇರಲಿದೆ. ಸೆಪ್ಟೆಂಬರ್ 9ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆ ವರೆಗೆ ಮತದಾನ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟವಾಗಲಿದೆ ಎಂದು ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.
ಉಪರಾಷ್ಟ್ರಪತಿ ಆಯ್ಕೆ ಹೇಗೆ ನಡೆಯುತ್ತದೆ?
ಉಪರಾಷ್ಟ್ರಪತಿ ಚುನಾವಣೆಯಲ್ಲಿ, ರಾಜ್ಯಸಭೆಯ 233 ಚುನಾಯಿತ ಸಂಸದರು, ರಾಜ್ಯಸಭೆಯ 12 ನಾಮನಿರ್ದೇಶಿತ ಸಂಸದರು ಮತ್ತು ಲೋಕಸಭೆಯ 543 ಸಂಸದರು ತಮ್ಮ ಮತಗಳನ್ನು ಚಲಾಯಿಸಬಹುದು. ಈ ರೀತಿಯಾಗಿ, ಒಟ್ಟು 788 ಜನರು ಮತ ಚಲಾಯಿಸಬಹುದು. ಪಕ್ಷಗಳ ವಿಪ್ ಅಗತ್ಯವಿಲ್ಲದೆ ಗೌಪ್ಯ ಮತಪತ್ರದ ಮೂಲಕ ಮತದಾನ ನಡೆಯುತ್ತದೆ. ರಾಷ್ಟ್ರಪತಿ ಚುನಾವಣೆಯಂತೆ ರಾಜ್ಯಗಳ ವಿಧಾನಸಭೆ ಶಾಸಕ ರಿಗೆ ಮತದಾನದ ಅವಕಾಶವಿಲ್ಲ. ಏಕಮತದಾನ ವರ್ಗಾವಣೆ ವಿಧಾನದಲ್ಲಿ ಪ್ರತಿಯೊಬ್ಬ ಮತದಾರ ಅಭ್ಯರ್ಥಿಗಳನ್ನು ಪ್ರಾಶಸ್ಯದ ಕ್ರಮದಲ್ಲಿ ಶ್ರೇಣೀಕರಿಸುತ್ತಾರೆ. ಅವರ ಪ್ರಾಶಸ್ಯವನ್ನು ಸಂಖ್ಯೆಗಳ ರೂಪದಲ್ಲಿ ಗುರುತಿಸುತ್ತಾರೆ. (ಮೊದಲ ಪ್ರಾಶಸ್ಯಕ್ಕೆ 1, 2ನೇ ಪ್ರಾಶಸ್ಯಕ್ಕೆ 2, ಇತ್ಯಾದಿ.) ಮತಪತ್ರವು ಮಾನ್ಯವಾಗಿರಲು ಮೊದಲ ಪ್ರಾಶಸ್ಯವನ್ನು ಗುರುತಿಸುವುದು ಕಡ್ಡಾಯವಾಗಿದೆ. ನಂತರದ ಆದ್ಯತೆಗಳು ಐಚ್ಛಿಕವಾಗಿರುತ್ತವೆ. ಎಣಿಕೆ ವೇಳೆ ಎಲ್ಲ ಅಭ್ಯರ್ಥಿಗಳಿಗೆ ಸಿಗುವ ಮೊದಲ ಪ್ರಾಶಸ್ಯದ ಮತಗಳನ್ನು ಆರಂಭಿಕವಾಗಿ ಎಣಿಕೆ ಮಾಡಲಾಗುತ್ತದೆ. ಮೊದಲ ಪ್ರಾಶಸ್ಯದ ಮತಗಳ ಎಣಿಕೆಯಲ್ಲಿ ಬಹುಮತ ದೊರೆಯದಿದ್ದಲ್ಲಿ 2ನೇ ಪ್ರಾಶಸ್ಯದ ಮತದಾನವನ್ನು ಪರಿಗಣಿಸಲಾಗುತ್ತದೆ. ಹೀಗೆಯೇ ಬಹುಮತ ಬರುವವರೆಗೂ ಮುಂದುವರಿಯುತ್ತದೆ.
ಜಗದೀಪ್ ಧನಕರ್ ರಾಜೀನಾಮೆ ನೀಡಿದ್ದು ಯಾಕೆ?
74 ವರ್ಷದ ಧನಕರ್ ಅವರು ಅನಾರೋಗ್ಯ ಕಾರಣ ನೀಡಿ ಜುಲೈ 21ರಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ರಾಜೀನಾಮೆ ಪತ್ರವನ್ನ ರಾಷ್ಟ್ರಪತಿ ದೌಪದಿ ಮುರ್ಮು ಅವರಿಗೆ ಕಳುಹಿಸಿದ್ದು, ‘ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಜೀನಾಮೆ ನೀಡುತ್ತಿದ್ದೇನೆ’ ಎಂದು ತಿಳಿಸಿದ್ದರು. ಈ ವೇಳೆ ಅವಕಾಶಕ್ಕಾಗಿ ಪ್ರಧಾನಿ ಮೋದಿ ಅವರಿಗೆ ಧನ್ಯವಾದ ಹೇಳಿದ್ದರು.

ನೋಡಿರಿ

