ಲೈಂಗಿಕ ದೌರ್ಜನ್ಯ.. ಕೊಲೆ ಬೆದರಿಕೆ.. ಬ್ಲ್ಯಾಕ್‌ಮೇಲ್.. – ಪ್ರಜ್ವಲ್ ವಿರುದ್ಧ ಮತ್ತೊಬ್ಬ ಸಂತ್ರಸ್ತೆಯಿಂದ ದೂರು!
ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಕೇಸ್ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಕೇಸ್ ಮೇಲೆ ಕೇಸ್ ದಾಖಲಾಗುತ್ತಿದೆ. ಇದೀಗ ಪ್ರಜ್ವಲ್ ವಿರುದ್ಧ ಸಿಐಡಿಗೂ ದೂರು ದಾಖಲಾಗಿದೆ.
ಇದನ್ನೂ ಓದಿ: ನಿರೀಕ್ಷಣಾ ಜಾಮೀನು ಅರ್ಜಿ ವಾಪಸ್ ಪಡೆದ ರೇವಣ್ಣ – ಕಾರಣವೇನು ಗೊತ್ತಾ?
ಹೌದು, ಪ್ರಜ್ವಲ್ ರೇವಣ್ಣ ವಿರುದ್ಧ ದೌರ್ಜನ್ಯಕ್ಕೊಳಗಾದ ಹೆಣ್ಣು ಮಕ್ಕಳು ಒಬ್ಬೊಬ್ಬರಾಗಿಯೇ ಬಂದು ದೂರು ನೀಡುತ್ತಿದ್ದಾರೆ. ಇದೀಗ ಪ್ರಜ್ವಲ್ ರೇವಣ್ಣರಿಂದ ದೌರ್ಜನ್ಯವಾಗಿದೆ ಎಂದು ಆರೋಪಿಸಿದ್ದ ಮಹಿಳೆಯ ಪತಿ ಇದೀಗ ಅಪರಾಧ ತನಿಖಾ ಇಲಾಖೆಗೆ (CID) ದೂರು ಸಲ್ಲಿಸಿದ್ದಾರೆ. ಪ್ರಕರಣ ಸಂಬಂಧ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಎ1 ಆಗಿದ್ದಾರೆ.
ಕಾಲೇಜು ವಿದ್ಯಾರ್ಥಿನಿಯರಿಗೆ ಬಿಸಿಎಂ ಹಾಸ್ಟೇಲ್ ಸೀಟ್ ಕೊಡಿಸಿ ಅಂತ 2021ರಲ್ಲಿ ಸಂತ್ರಸ್ತೆ ಪ್ರಜ್ವಲ್ ರೇವಣ್ಣ ಅವರನ್ನು ಎಂಪಿ ಕ್ವಾಟರ್ಸ್ನಲ್ಲಿ ಭೇಟಿಯಾಗಲು ತೆರಳಿದ್ದರು. ಈ ವೇಳೆ ಸಂಸದ ಪ್ರಜ್ವಲ್ ರೇವಣ್ಣ ಮಹಿಳೆಯನ್ನು ಕ್ವಾಟರ್ಸ್ನ ಮಹಡಿ ಮೇಲೆ ಕಳುಹಿಸಿದ್ದಾರೆ. ಬಳಿಕ ಪ್ರಜ್ವಲ್ ರೇವಣ್ಣ ತಮ್ಮ ಬಳಿ ಸಮಸ್ಯೆ ಹೇಳಿಕೊಂಡು ಬಂದಿದ್ದ ಸಾರ್ವಜನಿಕರನ್ನು ಮಾತನಾಡಿಸಿ ಕಳುಹಿಸಿದ್ದಾರೆ. ಕೊನೆಗೆ ಸಂತ್ರಸ್ತೆ ಮಹಿಳೆ ಭೇಟಿಯಾಗಲು ಮಹಡಿ ಮೇಲೆ ಹೋಗಿದ್ದಾರೆ. ಅಲ್ಲಿ ಪ್ರಜ್ವಲ್ ರೇವಣ್ಣ ಮಹಿಳೆಯನ್ನು ಕೊಠಡಿಯೊಂದರ ಒಳಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾರೆ. ಅಲ್ಲದೆ ಮೊಬೈಲ್ನಲ್ಲಿ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಾರೆ.
ಬಳಿಕ ಈ ವಿಡಿಯೋವನ್ನು ಇಟ್ಟುಕೊಂಡು ಮಹಿಳೆಗೆ ಬ್ಲಾಕ್ ಮೇಲ್ ಮಾಡಿದ್ದಾರೆ. ಅಲ್ಲದೆ ಮಹಿಳೆಗೆ ಪದೇ ಪದೇ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರವೆಸಗಿದ್ದಾರೆ ಎಂದು ಸಂತ್ರಸ್ತೆಯ ಪತಿ ದೂರಿನಲ್ಲಿ ದಾಖಲಿಸಿದ್ದಾರೆ.