ಏಕಕಾಲದಲ್ಲಿ ಮೂರು ಸಿನಿಮಾಗಳ ಶೂಟಿಂಗ್ – ಟಾಲಿವುಡ್‌ನಲ್ಲಿ ವಿಜಯ್ ದೇವರಕೊಂಡ ಫುಲ್ ಬ್ಯುಸಿ
ಟಾಲಿವುಡ್ ಹೀರೋ ವಿಜಯ್ ದೇವರಕೊಂಡ ‘ಲೈಗರ್’ ಸಿನಿಮಾ ಸೋಲಿನಿಂದಾಗಿ ಸಿನಿಮಾ ಆಯ್ಕೆ ಬಗ್ಗೆ ಸಾಕಷ್ಟು ಎಚ್ಚರಿಕೆಯ ಹೆಜ್ಜೆ ಇಡುತ್ತಿದ್ದಾರೆ. ಅಭಿಮಾನಿಗಳು ಕೂಡಾ ವಿಜಯ್ ದೇವರಕೊಂಡ ಸಿನಿಮಾ ನೋಡಲು ಕಾಯುತ್ತಿದ್ದಾರೆ. ಕೊನೆಗೂ ಈಗ ಟಾಲಿವುಡ್‌ನಲ್ಲಿ ವಿಜಯ್ ದೇವರಕೊಂಡ ಬ್ಯುಸಿ ಆಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಒಪ್ಪಿಕೊಂಡಿರುವ ವಿಜಯ್ ದೇವರಕೊಂಡ ಕೈಯಲ್ಲಿ ಈಗ ಮೂರು ಸಿನಿಮಾಗಳಿವೆ.
ಇದನ್ನೂ ಓದಿ: ಜೂನ್ 23ರಂದು ‘ಧೂಮಂ’ ಚಿತ್ರ ರಿಲೀಸ್ – ಕನ್ನಡ ಮತ್ತು ಮಲಯಾಳಂ ಎರಡೂ ಭಾಷೆಯಲ್ಲೂ ಸಿನಿಮಾ ಬಿಡುಗಡೆ
ವಿಶೇಷ ಏನೆಂದರೆ ಏಕಕಾಲಕ್ಕೆ ಅವರು ಮೂರು ಸಿನಿಮಾಗಳ ಶೂಟಿಂಗ್‌ನಲ್ಲಿ ವಿಜಯ್ ದೇವರಕೊಂಡ ಬ್ಯುಸಿ ಆಗಿದ್ದಾರೆ. ಮುಂದಿನ ದಿನಗಳಲ್ಲಿ ವಿಜಯ್ ದೇವರಕೊಂಡ ಅವರ ಸಿನಿಮಾಗಳು ಒಂದರ ಹಿಂದೊಂದು ತೆರೆಕಾಣುವುದರಲ್ಲಿ ಯಾವುದೇ ಅನುಮಾನವಿಲ್ಲ. ಸಮಂತಾ ರುತ್ ಪ್ರಭು ಜೊತೆ ವಿಜಯ್ ದೇವರಕೊಂಡ ಅವರು ‘ಖುಷಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಕೆಲಸಗಳು ಕಾರಣಾಂತರಗಳಿಂದ ತಡ ಆಗಿದ್ದವು. ಸಮಂತಾ ಅವರಿಗೆ ಅನಾರೋಗ್ಯ ಉಂಟಾಗಿದ್ದರಿಂದ ಕೆಲವು ದಿನಗಳ ಕಾಲ ಶೂಟಿಂಗ್‌ಗೆ ಬ್ರೇಕ್ ಹಾಕಲಾಗಿತ್ತು. ನಂತರ ಸಮಂತಾ ಅವರು ಚೇತರಿಸಿಕೊಂಡು ಬಂದ ಬಳಿಕ ಚಿತ್ರೀಕರಣ ಭರದಿಂದ ಸಾಗಿದ್ದು, ಕೊನೇ ಹಂತದ ಶೂಟಿಂಗ್ ನಡೆಯುತ್ತಿದೆ. ನಿರ್ದೇಶಕ ಗೌತಮ್ ತಿನ್ನನುರಿ ಅವರ ಜೊತೆ ವಿಜಯ್ ದೇವರಕೊಂಡ ಅವರು ಹೊಸ ಸಿನಿಮಾ ಮಾಡುತ್ತಿದ್ದಾರೆ. ಆ ಸಿನಿಮಾಗೆ ಕೆಲವೇ ದಿನಗಳ ಹಿಂದೆ ಚಾಲನೆ ಸಿಕ್ಕಿತು. ಈ ಚಿತ್ರದಲ್ಲಿ ವಿಜಯ್ ದೇವರಕೊಂಡ ಮತ್ತು ಶ್ರೀಲೀಲಾ ಅವರು ಜೋಡಿಯಾಗಿ ನಟಿಸಲಿದ್ದಾರೆ. ತೆಲುಗಿನಲ್ಲಿ ಶ್ರೀಲೀಲಾ ಅವರಿಗೆ ಹೊಸ ಹೊಸ ಅವಕಾಶಗಳು ಸಿಗುತ್ತಿವೆ. ಇತ್ತೀಚೆಗಷ್ಟೇ ಅವರ ಮತ್ತೊಂದು ಸಿನಿಮಾಗೆ ಮುಹೂರ್ತ ಮಾಡಲಾಯಿತು. ಆ ಚಿತ್ರಕ್ಕೆ ಪರಶುರಾಮ್ ನಿರ್ದೇಶನ ಮಾಡಲಿದ್ದಾರೆ. ದಿಲ್ ರಾಜು ಅವರು ನಿರ್ಮಾಣದ ಹೊಣೆ ಹೊತ್ತಿದ್ದು ವಿಜಯ್ ದೇವರಕೊಂಡ ಅವರಿಗೆ ನಾಯಕಿಯಾಗಿ ಮೃಣಾಲ್ ಠಾಕೂರ್ ಅವರು ನಟಿಸಲಿದ್ದಾರೆ.