ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ವಿಧಿವಶ

ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ವಿಧಿವಶ

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ವಿಜಯ್‌ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಸ್ಪಂದನಾ ಅವರು ಬ್ಯಾಂಕಾಕ್‌ಗೆ ಪ್ರವಾಸಕ್ಕೆ ತೆರಳಿದ್ದ ವೇಳೆ ಹೃದಯಾಘಾತ ಸಂಭವಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ:  ಭೀಕರ ರಸ್ತೆ ಅಪಘಾತ – 24 ಮಂದಿ ಸಾವು, ಹಲವರಿಗೆ ಗಾಯ

ಭಾನುವಾರ ಸ್ಪಂದನಾ ಅವರಿಗೆ ಬಿಪಿ ಲೋ ಆಗಿ ಇದ್ದಕ್ಕಿಂತ ಕುಸಿದು ಬಿದ್ದಿದ್ದರು. ಈ ವೇಳೆ ಹೃದಯಾಘಾತ ಸಂಭವಿಸಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇಡೀ ಕುಟುಂಸ್ಥರು ಬ್ಯಾಂಕಾಕ್‌ಗೆ ತೆರಳಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಇದು ಆಘಾತಕಾರಿ ಸುದ್ದಿಯಾಗಿದೆ. ವಿಜಯ್‌ ರಾಘವೇಂದ್ರ ಹಾಗೂ ಸ್ಪಂದನಾ ದಂಪತಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ. 2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನೆಮಾದಲ್ಲಿ ಅತಿಥಿ ಪಾತ್ರದಲ್ಲಿ ಸ್ಪಂದನಾ ನಟಿಸಿದ್ದರು. ಅವರು ನಿವೃತ್ತ ಪೊಲೀಸ್ ಅಧಿಕಾರಿ ಶಿವರಾಂ ಅವರ ಪುತ್ರಿಯಾಗಿದ್ದು, ವಿಜಯ ರಾಘವೇಂದ್ರ ಅವರನ್ನು 2007, ಆಗಸ್ಟ್ 26 ರಂದು ಪ್ರೀತಿಸಿ ಮದುವೆಯಾಗಿದ್ದರು. 16ನೇ ವಿವಾಹ ವಾರ್ಷಿಕೋತ್ಸವಕ್ಕೆ ಕೇವಲ 19 ದಿನಗಳು ಬಾಕಿ ಇರುವಾಗ ಈ ದುರಂತ ನಡೆದಿದೆ.

suddiyaana