ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದಾಸನಿಗೆ ಮತ್ತೆ ಢವಢವ! – ಕಾಮಾಕ್ಯ ದೇವಿ ಮೊರೆ ಹೋದ ದರ್ಶನ್

ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್ ಬೆನ್ನು ನೋವಿನ ಕಾರಣ ನೀಡಿ ಜಾಮೀನು ಪಡೆದಿದ್ರು. ಜೈಲಿನಿಂದ ಹೊರ ಬರ್ತಿದ್ದಂರೆ ದರ್ಶನ್ ಬೆನ್ನು ನೋವಿಗೆ ಚಿಕಿತ್ಸೆ ಪಡೆದು, ಡೆವಿಲ್ ಶೂಟಿಂಗ್ ನಲ್ಲಿ ಭಾಗಿಯಾಗಿದ್ರು. ಸಿನಿಮಾದ ಎಲ್ಲಾ ಕೆಲಸ ಮುಗಿಸಿರುವ ದರ್ಶನ್ ಈಗ ಪತ್ನಿ ವಿಜಯಲಕ್ಷ್ಮೀ ಜೊತೆ ಟೆಂಪಲ್‌ರನ್ ಶುರು ಮಾಡಿದ್ದಾರೆ.
ಇದನ್ನೂ ಓದಿ: ಭಾರತ ಸೇನೆಯ ಮಿಂಚಿನ ಕಾರ್ಯಾಚರಣೆ – ಪಹಲ್ಗಾಮ್ ದಾಳಿ ನಡೆಸಿದ್ದ ಮತ್ತಿಬ್ಬರು ಉ*ಗ್ರರು ಫಿನಿಷ್
ದಿ ಡೆವಿಲ್ ಚಿತ್ರದ ಹಾಡಿನ ಚಿತ್ರೀಕರಣಕ್ಕಾಗಿ ಥಾಯ್ಲೆಂಡ್‌ಗೆ ತೆರಳಿದ್ದ ದರ್ಶನ್ ಇತ್ತೀಚೆಗಷ್ಟೇ ಬೆಂಗಳೂರಿಗೆ ಮರಳಿದ್ದರು. ಈ ಬೆನ್ನಲ್ಲೇ ನಟ ದರ್ಶನ್ ಹಾಗೂ ವಿಜಯಲಕ್ಷ್ಮೀ ಅಸ್ಸಾಂನ ಗುವಾಹಟಿಯಲ್ಲಿರುವ ಕಾಮಾಕ್ಯ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ದರ್ಶನ್ ಅವರಿಗೆ ನೀಡಿರುವ ಜಾಮೀನು ರದ್ದು ಕೋರಿ ಬೆಂಗಳೂರು ಪೊಲೀಸರು ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ ತೀರ್ಪು ತಮ್ಮ ಪರವಾಗಿ ಬರುವಂತೆ ಪ್ರಾರ್ಥಿಸಲು ದಂಪತಿ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎನ್ನಲಾಗಿದೆ.
ದರ್ಶನ್ ಬೇಲ್ ರದ್ದು ಮಾಡುವಂತೆ ಬೆಂಗಳೂರು ಪೊಲೀಸರು ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜು. 24ರಂದು ನಡೆಸಿದ್ದು, ತೀರ್ಪನ್ನು ಕಾಯ್ದಿರಿಸಿದೆ. ಲಿಖಿತ ವಾದಾಂಶಗಳನ್ನು ಒಂದು ವಾರದೊಳಗೆ 3 ಪುಟಗಳಲ್ಲಿ ಸಲ್ಲಿಸಬೇಕು ಎಂದು ನ್ಯಾಯಪೀಠ ಸೂಚನೆ ನೀಡಿದೆ. ದರ್ಶನ್ ಮತ್ತು ಗ್ಯಾಂಗ್‌ನಿಂದ ನಡೆದಿದ್ದ ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದಲ್ಲಿ ದರ್ಶನ್ ಮತ್ತಿತರರ ಪರ ವಾದ ಮಂಡನೆ ಮುಕ್ತಾಯವಾಗಿದೆ. ವಾದ, ಪ್ರತಿವಾದ ಆಲಿಸಿ ಸುಪ್ರೀಂ ಕೋರ್ಟ್ ಆದೇಶ ಕಾಯ್ದಿರಿಸಿದೆ. ಹೀಗಾಗಿ ದರ್ಶನ್ ಮತ್ತು ಗ್ಯಾಂಗ್ಗೆ 10 ದಿನಗಳ ಕಾಲ ತಾತ್ಕಾಲಿಕ ರಿಲೀಫ್ ದೊರೆತಿದೆ. ಸದ್ಯದಲ್ಲೇ ದರ್ಶನ್ ಜಾಮೀನಿಗೆ ಸಂಬಂಧಿಸಿ ತೀರ್ಪು ಬರಲಿದ್ದು, ಹೀಗಾಗಿ ಟೆಂಪಲ್ ರನ್ ನಡೆಸುತ್ತಿದ್ದಾರೆ.

ನೋಡಿರಿ

