ಅವರ ಅಪ್ಪನಿಗೆ ಯಾರಾದರು ಹುಟ್ಟಿರುವವರು ಸಿಡಿ ಬಿಡುಗಡೆ ಮಾಡಲಿ  -ಯತ್ನಾಳ್​ ಸವಾಲ್​

ಅವರ ಅಪ್ಪನಿಗೆ ಯಾರಾದರು ಹುಟ್ಟಿರುವವರು ಸಿಡಿ ಬಿಡುಗಡೆ ಮಾಡಲಿ  -ಯತ್ನಾಳ್​ ಸವಾಲ್​

ರಾಜ್ಯದಲ್ಲಿ ಮತ್ತೊಮ್ಮೆ ಸಿಡಿ ವಿಚಾರ ಸದ್ದು ಮಾಡಿದೆ. ಸುಮ್ಮನೆ ರಾಜಕಾರಣ ಮಾಡಿಕೊಂಡು ಇರಬೇಕು, ಇಲ್ಲದೇ ಹೋದರೆ ನಿಮ್ಮ ಸಿಡಿ ಬಿಡುಗಡೆ ಮಾಡುತ್ತೇನೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಗೆ ಮುಸ್ಲಿಂ ಮುಖಂಡರು ಎಚ್ಚರಿಕೆ ನೀಡಿದ್ದರು. ಇದೀಗ ಇದಕ್ಕೆ ಬಿಜೆಪಿ ಶಾಸಕ ಸರಿಯಾಗೇ ಟಾಂಗ್‌ ಕೊಟ್ಟಿದ್ದಾರೆ.  ಅವರ ಅಪ್ಪನಿಗೆ ಯಾರಾದರು ಹುಟ್ಟಿರುವವರು ಸಿಡಿ ಬಿಡುಗಡೆ ಮಾಡಲಿ ಎಂದು ಸವಾಲ್‌ ಹಾಕಿದ್ದಾರೆ.

ಇದನ್ನೂ ಓದಿ: ನಟ ಸಲ್ಮಾನ್‌ ಖಾನ್‌ ಟಾರ್ಗೆಟ್‌ – ಜಸ್ಟ್ ಮಿಸ್‌.. ಸಲ್ಮಾನ್‌ಗೆ ಹೈ ಸೆಕ್ಯೂರಿಟಿ  

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ಬಸನಗೌಡ ಪಾಟೀಲ್‌ ಯತ್ನಾಳ್‌,  ಖಾದ್ರಿ ಎಂಬ ಒಬ್ಬ ವಕ್ಫ್ ಆಸ್ತಿ ಲೂಟಿಕೋರ, ಹಿಂದೆ ಜಿಲ್ಲೆಯಿಂದ ಗಡೀಪಾರಾಗಿದ್ದವನು, ನಾವು ವಕ್ಫ್ ಆಸ್ತಿಯ ಲೂಟಿಯ ಬಗ್ಗೆ ಪ್ರತಿಭಟನೆಗೆ ಮುಂದಾಗಿರುವಾಗ ನನ್ನ ಸಿ.ಡಿ ಬಿಡುಗಡೆ ಮಾಡುತ್ತೀನಿ ಎಂದು ಹೇಳಿರುವುದನ್ನು ನಾನು ಗಮನಿಸಿದ್ದೇನೆ. ಹಿಂದೆಯೂ ನಾನು ಹೇಳಿದ್ದೆ ಅವರ ಅಪ್ಪನಿಗೆ ಯಾರಾದರು ಹುಟ್ಟಿರುವವರು ಬಿಡುಗಡೆ ಮಾಡಲಿ ಎಂದು, ಈಗ ಅದನ್ನೇ ಪುನರುಚ್ಚರಿಸುತ್ತಿದ್ದೇನೆ. ಇಂತಹ ಅಯೋಗ್ಯರ ಹೇಳಿಕೆಗಳನ್ನು ಕೆಲ ಮಾಧ್ಯಮಗಳು ವೈಭವೀಕರಿಸುತ್ತಿರುವುದನ್ನೂ ಗಮನಿಸಿದ್ದೇನೆ. ಈಗಾಗಲೇ ಮಾನಹಾನಿ ಪ್ರಕರಣದ ಜೊತೆಗೆ ಕ್ರಿಮಿನಲ್ ಪ್ರಕರಣ ದಾಖಲಿಸಲು ಮುಂದಾಗಿದ್ದೇನೆ  ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಖಾದ್ರಿ ಮತ್ತು ಮುಸ್ಲಿಂ ಮುಖಂಡರು ಹೇಳಿದ್ದೇನು?

ತಿ.. ಮುಚ್ಚಿಕೊಂಡು ಬಸನಗೌಡ ಪಾಟೀಲ್​ ಯತ್ನಾಳ ಅವರು ರಾಜಕಾರಣ ಮಾಡಬೇಕು. ಇಲ್ಲದಿದ್ದರೇ ನವೆಂಬರ್​ 6 ರಂದು ಸಿಡಿ ಬಿಡುಗಡೆ ಮಾಡುವುದು ಗ್ಯಾರೆಂಟಿ ಎಂದು ವಿಜಯಪುರ ಎಸ್​ಎಸ್​ ಖಾದ್ರಿ ಮತ್ತು ಮುಸ್ಲಿಂ ಮುಖಂಡರು ಎಚ್ಚರಿಕೆ ನೀಡಿದ್ದರು.

ಮುಸ್ಲಿಂ ಮುಖಂಡರ ಆಕ್ರೋಶಕ್ಕೆ ಕಾರಣ

ವಿಜಯಪುರ ಜಿಲ್ಲೆಯ 12000 ಎಕರೆ, ವಿಜಯಪುರ ತಾಲೂಕಿನ 2643 ಎಕರೆ ವಕ್ಫ ಆಸ್ತಿ ಎಂದು ನೋಂದಣಿ ಮಾಡಲು ಸಚಿವ ಜಮೀರ್ ಅಹ್ಮದ್ ಖಾನ್ ಆದೇಶಿಸಿದ್ದಾರೆ. ಸಂಘ-ಸಂಸ್ಥೆಗಳ, ದೇವಸ್ಥಾನಗಳ, ಸರ್ಕಾರಿ ಆಸ್ತಿ ಜಮೀನುಗಳನ್ನು ವಕ್ಪ್ ಆಸ್ತಿ ಎಂದು ಉತಾರೆಯಲ್ಲಿ ನೋಂದಣಿ ಮಾಡುವುದನ್ನು ಕೈಬಿಡುವಂತೆ ಒತ್ತಾಯಿಸಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಪ್ರತಿಭಟನೆಗೆ​ ಕರೆ ಕೊಟ್ಟಿದ್ದಾರೆ.

ಅದರಂತೆ ಇಂದು (ಅ.15) ಸಿದ್ದೇಶ್ವರ ದೇವಸ್ಥಾನದ ಬಳಿ ಪ್ರತಿಭಟನಾ ಸಮಾವೇಶ ನಡೆಯಲಿದ್ದು, ಬಿಜೆಪಿ ನಾಯಕ ಸಿಟಿ ರವಿ, ಚಿಂತಕ ಚಕ್ರವರ್ತಿ ಸೂಲಿಬೆಲೆ ಭಾಗಿಯಾಗಲಿದ್ದಾರೆ. ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಅವರ ನೇತೃತ್ವದ ಪ್ರತಿಭಟನೆಗೆ ಎಸ್​ಎಸ್​ ಖಾದ್ರಿ ಮತ್ತು ಮುಸ್ಲಿಂ ಮುಖಂಡರು ವಿರೋಧ ವ್ಯಕ್ತಪಡಿಸಿದ್ದಾರೆ. ಶಾಸಕ ಬಸನಗೌಡ ಯತ್ನಾಳ್​ ವಿರುದ್ಧ ಸಿಡಿ ಅಸ್ತ್ರ ಪ್ರಯೋಗಿಸಿದ್ದಾರೆ.

Shwetha M