ಬೆಳ್ಳಿ ಪದಕದ ನಿರೀಕ್ಷೆಯಲ್ಲಿದ್ದ ಪೋಗಟ್‌ ಗೆ ನಿರಾಸೆ – ವಿನೇಶ್‌ ಸಲ್ಲಿಸಿದ್ದ ಅರ್ಜಿ ವಜಾ

ಬೆಳ್ಳಿ ಪದಕದ ನಿರೀಕ್ಷೆಯಲ್ಲಿದ್ದ ಪೋಗಟ್‌ ಗೆ ನಿರಾಸೆ – ವಿನೇಶ್‌ ಸಲ್ಲಿಸಿದ್ದ ಅರ್ಜಿ ವಜಾ

2024 ರ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ವಿನೇಶ್‌ ಪೋಗಟ್‌ ಚಿನ್ನದ ಪದಕಕ್ಕೆ ಗುರಿಯಿಟ್ಟಿದ್ದರು. ಆದ್ರೆ ತೂಕದ ಕಾರಣಕ್ಕಾಗಿ ಅನರ್ಹರಾಗಿದ್ದಾರೆ. ಪದಕ ಕೈ ತಪ್ಪುತ್ತಿದ್ದಂತೆ ವಿನೇಶ್ ಫೋಗಟ್ ಅವರು ಕುಸ್ತಿಯಿಂದ ನಿವೃತ್ತಿ ಘೋಷಿಸಿದ್ದರು. ಇದಾಗ್ಯೂ ಬೆಳ್ಳಿ ಪದಕದೊಂದಿಗೆ ತಮ್ಮ ವೃತ್ತಿಜೀವನಕ್ಕೆ ವಿದಾಯ ಹೇಳುವ ಆಸೆಯಲ್ಲಿದ್ದರು. ಆದರೀಗ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ವಿನೇಶ್ ಫೋಗಟ್ ಅವರ ಪದಕ ಕನಸು ಕೂಡ ಕಮರಿದೆ.

ಇದನ್ನೂ ಓದಿ: ಅಭಿಷೇಕ್ ಅಂಬರೀಶ್ ದರ್ಶನ್‌ ನನ್ನು ಭೇಟಿಯಾಗಿದ್ಯಾಕೆ? – ಚಿಕ್ಕಣ್ಣನಿಗೆ ಕಾಡ್ತಿದ್ಯಾ ಆ ಭಯ? –

ಹೌದು, ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವ ವಿನೇಶ್ ಫೋಗಟ್ ಕನಸು ಸಂಪೂರ್ಣ ಭಗ್ನಗೊಂಡಿದೆ. ಆಗಸ್ಟ್ 9 ರಂದು ನಡೆದ ಮಹಿಳೆಯರ 50 ಕೆಜಿ ತೂಕದ ವಿಭಾಗದ ಫೈನಲ್‌ನಿಂದ ಅನರ್ಹಗೊಂಡ ಬಳಿಕ ಬೆಳ್ಳಿ ಪದಕಕ್ಕಾಗಿ ವಿನೇಶ್ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯಕ್ಕೆ (ಸಿಎಎಸ್) ಗೆ ಮೇಲ್ಮನವಿ ಸಲ್ಲಿಸಿದ್ದರು. ಆದರೆ ಹಲವಾರು ದಿನಗಳ ಕಾಯುವಿಕೆಯ ನಂತರ ಅಂತಿಮವಾಗಿ ಈ ಮನವಿಯನ್ನು ಸಿಎಎಸ್ ತಿರಸ್ಕರಿಸಿದೆ. ಇದರಿಂದಾಗಿ ಬೆಳ್ಳಿ ಪದಕದ ನಿರೀಕ್ಷೆಯಲ್ಲಿದ್ದ ವಿನೇಶ್‌ ಪೋಗಟ್‌ ಕನಸು ಸಂಪೂರ್ಣ ಭಗ್ನಗೊಂಡಿದೆ.

ಇದಕ್ಕೂ ಮುನ್ನ ಪ್ಯಾರಿಸ್ ಒಲಿಂಪಿಕ್ಸ್​ನ 50 ಕೆಜಿ ತೂಕದ ವಿಭಾಗದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ವಿನೇಶ್ ಫೋಗಟ್ ಅವರು ಫೈನಲ್​ಗೆ ಪ್ರವೇಶಿಸಿದ್ದರು. ಆದರೆ ಫೈನಲ್ ಪಂದ್ಯಕ್ಕೂ ನಡೆದ ತೂಕ ಪರಿಶೀಲನೆ ವೇಳೆ ಅವರು ಅನುಮತಿಸಲಾದ ತೂಕಕ್ಕಿಂತ 100 ಗ್ರಾಂ ಹೆಚ್ಚಿರುವುದು ಕಂಡುಬಂದಿದೆ. ಹೀಗಾಗಿ ವಿನೇಶ್ ಫೋಗಟ್ ಅವರನ್ನು ಫೈನಲ್ ಪಂದ್ಯಕ್ಕೂ ಮುನ್ನ ಅನರ್ಹಗೊಳಿಸಲಾಗಿತ್ತು. ಆದರೆ ಈ ಅನರ್ಹತೆಯನ್ನು ಪ್ರಶ್ನಿಸಿದ ವಿನೇಶ್ ಫೋಗಟ್ ಅವರು ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದ ಮೊರೆ ಹೋಗಿದ್ದರು. ಸೆಮಿಫೈನಲ್​ವರೆಗೂ ನಿಗದಿತ ತೂಕದಲ್ಲೇ ಸ್ಪರ್ಧಿಸಿದ್ದರಿಂದ ಬೆಳ್ಳಿ ಪದಕವನ್ನು ನೀಡಬೇಕೆಂದು ಫೋಗಟ್ ಪರ ವಕೀಲರು ಮನವಿ ಸಲ್ಲಿಸಿದ್ದರು. ಸಿಎಎಸ್‌ನ ಏಕೈಕ ಆರ್ಬಿಟ್ರೇಟರ್ ಡಾ ಅನ್ನಾಬೆಲ್ ಬೆನೆಟ್ ಅವರ ಮುಂದೆ ನಡೆದ ಈ ವಿಚಾರಣೆಯಲ್ಲಿ ವಿನೇಶ್ ಪರವಾಗಿ ಫ್ರೆಂಚ್ ಕಾನೂನು ತಂಡ ಹಾಗೂ ಭಾರತೀಯ ಒಲಿಂಪಿಕ್ ಸಂಸ್ಥೆ (ಐಒಎ) ಪರವಾಗಿ ದೇಶದ ಖ್ಯಾತ ಹಿರಿಯ ವಕೀಲರಾದ ಹರೀಶ್ ಸಾಳ್ವೆ ಮತ್ತು ವಿದುಷ್ಪತ್ ಸಿಂಘಾನಿಯಾ ವಾದ ಮಂಡಿಸಿದ್ದರು.

ಈ ವಾದವನ್ನು ಆಲಿಸಿದ ನ್ಯಾಯಾಲಯವು ವಿಚಾರಣೆಯನ್ನು ಆಗಸ್ಟ್ 10ಕ್ಕೆ ಮುಂದೂಡಿದ್ದರು. ಇದಾದ ಬಳಿಕ ಮತ್ತೆ ಕೆಲ ದಾಖಲೆಗಳ ಬೇಡಿಕೆ ಮುಂದಿಟ್ಟು ಆ.13ಕ್ಕೆ ತೀರ್ಪು ನೀಡುವುದಾಗಿ ಹೇಳಿತ್ತು. ಆದರೆ ಆಗಸ್ಟ್ 13 ರಂದು, ಈ ನಿರ್ಧಾರವನ್ನು ಮೂರನೇ ಬಾರಿಗೆ ಆಗಸ್ಟ್ 16 ಕ್ಕೆ ಮುಂದೂಡಲಾಯಿತು. ಈಗ ಇದ್ದಕ್ಕಿದ್ದಂತೆ ಆಗಸ್ಟ್ 14 ರಂದು ಒಂದು ಸಾಲಿನ ನಿರ್ಧಾರವನ್ನು ಪ್ರಕಟಿಸಲಾಗಿದ್ದು, ಈ ತೀರ್ಪಿನಲ್ಲಿ ವಿನೇಶ್ ಫೋಗಟ್ ಅವರ ಮನವಿಯನ್ನು ತಿರಸ್ಕರಿಸಲಾಗಿದೆ ಎಂದು ತಿಳಿಸಲಾಗಿದೆ.

Shwetha M