ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ – ಜನಾರ್ದನ ರೆಡ್ಡಿ ಸೇರಿ ಐವರ ವಿರುದ್ದ ಕೇಸ್
ಕೊಪ್ಪಳ: ಹೊಸ ಪಕ್ಷ ಹುಟ್ಟು ಹಾಕಿ ರಾಜಕಾರಣಕ್ಕೆ ಕಮ್ ಬ್ಯಾಕ್ ಮಾಡಿರುವ ಗಣಿಧಣಿಗೆ ಇದೀಗ ಕಾನೂನು ಸಂಕಷ್ಟ ಎದುರಾಗಿದೆ. ಕೊಪ್ಪಳ ಜಿಲ್ಲೆಯ ಕನಕಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಜನಾರ್ಧನ ರೆಡ್ಡಿ ಸೇರಿ ಐವರ ವಿರುದ್ದ ಎಫ್ಐಆರ್ ದಾಖಲಾಗಿದೆ.
ಇದನ್ನೂ ಓದಿ: ಬಿ.ವೈ ವಿಜಯೇಂದ್ರ ಕ್ಷೇತ್ರ ಕೊನೆಗೂ ಫೈನಲ್ – ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಯಾವಾಗ ಗೊತ್ತಾ?
ಕನಕಗಿರಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಡಾ. ಚಾರುಲ್ ವೆಂಕಟರಮಣ ದಾಸರಿ ಕಳೆದ ಹಲವು ದಿನಗಳಿಂದ ಸಾರ್ವಜನಿಕರಿಗೆ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಿದ್ದರು. ಈ ಆ್ಯಂಬುಲೆನ್ಸ್ ಮೇಲೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಜನಾರ್ಧನ ರೆಡ್ಡಿ, ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಲಕ್ಷ್ಮೀ ಅರುಣಾ, ಕನಕಗಿರಿ ವಿಧಾನಸಭಾ ಅಭ್ಯರ್ಥಿ ಡಾ. ಚಾರುಲ್ ವೆಂಕಟರಮಣ ದಾಸರಿ ಅವರ ಭಾವಚಿತ್ರವಿತ್ತು. ನೀತಿ ಸಂಹಿತೆ ಜಾರಿಯಾದರೂ ಅನುಮತಿ ಪಡೆಯದೆ ಕ್ಷೇತ್ರದ ಹಲವೆಡೆ ಪ್ರಚಾರ ಮಾಡುತ್ತಿದ್ದಾರೆ ಅಂತಾ ಎಫ್ಐಆರ್ ದಾಖಲಾಗಿದೆ.
ಕಳೆದ ಎರಡು ದಿನಗಳ ಹಿಂದೆ ಕನಕಗಿರಿಯ ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಆ್ಯಂಬುಲೆನ್ಸ್ ಅನ್ನು ಪೊಲೀಸರು ಜಪ್ತಿ ಮಾಡಿದ್ದರು. ಇದೀಗ ಜನಾರ್ದನ ರೆಡ್ಡಿ, ಆ್ಯಂಬುಲೆನ್ಸ್ ಚಾಲಕ ಸೇರಿ ಐವರ ವಿರುದ್ದ ಪ್ರಕರಣ ದಾಖಲಾಗಿದೆ ಅಂತಾ ಪೊಲೀಸರು ತಿಳಿಸಿದ್ದಾರೆ.