ಟೀಂ INDಗೆ RO-KO ರಿಟರ್ನ್ಸ್ – 15 ಪಂದ್ಯದ ಮೇಲೆ ನಿಂತ ರೋಹಿತ್, ಕೊಹ್ಲಿ ODI ವಿಶ್ವಕಪ್ ಭವಿಷ್ಯ

ಟಿ20 ವಿಶ್ವಕಪ್ ಮುಕ್ತಾಯಕ್ಕೂ ಮುನ್ನವೇ ಟೀಮ್ ಇಂಡಿಯಾದ ಮುಂದಿನ ಸರಣಿಗಳ ವೇಳಾಪಟ್ಟಿ ಪ್ರಕಟವಾಗಿದೆ. ಈ ಸರಣಿಗಳಲ್ಲಿ ಟೀಮ್ ಇಂಡಿಯಾದ ದಿಗ್ಗಜರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಂದರೆ ಭಾರತ ತಂಡದ ಮುಂದಿನ 15 ಏಕದಿನ ಪಂದ್ಯಗಳ ವೇಳಾಪಟ್ಟಿ ಫಿಕ್ಸ್ ಮಾಡಲಾಗಿದೆ. 2027ರ ಏಕದಿನ ವಿಶ್ವಕಪ್ಗೂ ಮುನ್ನ ನಡೆಯಲಿರುವ ಈ ಮ್ಯಾಚ್ಗಳು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ.
ಇದನ್ನೂ ಓದಿ: PAK ಪ್ಲೇಯರ್ಸ್ ಗೆ ದಂಡಂ ದಶಗುಣಂ – ಭಾರತದ ವಿರುದ್ದ ಸೋತಿದ್ದಕ್ಕೆ ಶಿಕ್ಷೆ
ಈ ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡಿದರೆ ಮಾತ್ರ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಮುಂಬರುವ ಏಕದಿನ ವಿಶ್ವಕಪ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಈ ವರ್ಷ ಹಿಟ್ಮ್ಯಾನ್ ಹಾಗೂ ಕಿಂಗ್ ಕೊಹ್ಲಿ ಹದಿನೈದು ಮ್ಯಾಚ್ಗಳಲ್ಲಿ ಕಣಕ್ಕಿಳಿಯಲಿದ್ದಾರೆ.
ಅಫ್ಘಾನಿಸ್ತಾನ್ ವಿರುದ್ಧದ ಸರಣಿ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಈ ಸರಣಿಯಲ್ಲಿ ಭಾರತ ಮೂರು ಏಕದಿನ ಪಂದ್ಯಗಳನ್ನಾಡಲಿದ್ದಾರೆ.ಭಾರತ ತಂಡವು ಸೆಪ್ಟೆಂಬರ್ ಮತ್ತು ಅಕ್ಟೋಬರ್ 2026 ರ ಅವಧಿಯಲ್ಲಿ ವೆಸ್ಟ್ ಇಂಡೀಸ್ ತಂಡಕ್ಕೆ ಆತಿಥ್ಯ ವಹಿಸಲಿದೆ. ಈ ಸರಣಿಯಲ್ಲಿ 3 ಏಕದಿನ ಮತ್ತು 5 ಟಿ20 ಪಂದ್ಯಗಳನ್ನಾಡಲಾಗುತ್ತದೆ. ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯ ಬಳಿಕ ಟೀಮ್ ಇಂಡಿಯಾ ನ್ಯೂಝಿಲೆಂಡ್ ಪ್ರವಾಸ ಕೈಗೊಳ್ಳಲಿದೆ. ಅಕ್ಟೋಬರ್-ನವೆಂಬರ್ನಲ್ಲಿ ನಡೆಯಲಿರುವ ಈ ಸರಣಿಯಲ್ಲೂ ಭಾರತ ತಂಡ 3 ಏಕದಿನ ಪಂದ್ಯಗಳನ್ನಾಡಲಿದೆ. ಈ ವರ್ಷಾಂತ್ಯದಲ್ಲಿ ಭಾರತ ತಂಡವು ಶ್ರೀಲಂಕಾವನ್ನು ಎದುರಿಸಲಿದೆ.

ನೋಡಿರಿ

