ಶ್ರೀ ಮಹಾಕಾಳೇಶ್ವರನ ದರ್ಶನ ಪಡೆದ ವಿರಾಟ್ ಕೊಹ್ಲಿ – ಕುಲ್ದೀಪ್ ಯಾದವ್ ಜೊತೆ ಉಜ್ಜಯಿನಿಗೆ ಭೇಟಿ

ಶ್ರೀ ಮಹಾಕಾಳೇಶ್ವರನ ದರ್ಶನ ಪಡೆದ ವಿರಾಟ್ ಕೊಹ್ಲಿ – ಕುಲ್ದೀಪ್ ಯಾದವ್ ಜೊತೆ ಉಜ್ಜಯಿನಿಗೆ ಭೇಟಿ

ಟೀಮ್ ಇಂಡಿಯಾದ ಕಿಂಗ್ ಕೊಹ್ಲಿ ಶ್ರೀ ಮಹಾಕಾಳೇಶ್ವರನ ದರ್ಶನ ಪಡೆದಿದ್ದಾರೆ. ಇವರಿಗೆ ಮತ್ತೊಬ್ಬ ಕ್ರಿಕೆಟರ್ ಕುಲ್ದೀಪ್ ಯಾದವ್ ಜೊತೆಯಾಗಿದ್ದಾರೆ. ವಿರಾಟ್ ಕೊಹ್ಲಿ ಮಹಾಕಾಳೇಶ್ವರನಿಗೆ ತಲೆಬಾಗಿ ಪ್ರಾರ್ಥಿಸುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ:ಟಗರುಪುಟ್ಟಿ ಡಿಚ್ಚಿಗೆ ಗುಜರಾತ್ ಪಲ್ಟಿ – RCB ಸಿಂಹಿಣಿಯರ Hat-Trick ಗರ್ಜನೆ

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 3ನೇ ಏಕದಿನ ಪಂದ್ಯವು ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಇಂದೋರ್​​ಗೆ ಆಗಮಿಸಿರುವ ವಿರಾಟ್ ಕೊಹ್ಲಿ ಉಜ್ಜಯಿನಿಯಲ್ಲಿರುವ ಶ್ರೀ ಮಹಾಕಾಳೇಶ್ವರನ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸಹ ಆಟಗಾರ ಕುಲ್ದೀಪ್ ಯಾದವ್ ಅವರೊಂದಿಗೆ ಉಜ್ಜಯಿನಿಯ ಶ್ರೀ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು. ವಿರಾಟ್ ಕೊಹ್ಲಿ ಕೆಲ ಹೊತ್ತು ದೇವರ ಸನ್ನಿಧಿಯಲ್ಲೇ ಕಾಲ ಕಳೆದರು. ಇದೀಗ ವಿರಾಟ್ ಕೊಹ್ಲಿ ಮಹಾಕಾಳೇಶ್ವರನಿಗೆ ತಲೆಬಾಗಿ ಪ್ರಾರ್ಥಿಸುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕೊಹ್ಲಿ ಈ ಹಿಂದೆ 2023 ರಲ್ಲಿ, ಪತ್ನಿ ಅನುಷ್ಕಾ ಶರ್ಮಾ ಜೊತೆಗೆ ಆಗಮಿಸಿ ಈ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರು. ಇದೀಗ ಮತ್ತೊಮ್ಮೆ ಶ್ರೀ ಮಹಾಕಾಳೇಶ್ವರನ ಸನ್ನಿಧಿಗೆ ಆಗಮಿಸಿ ಪೂಜೆ ಸಲ್ಲಿಸಿದ್ದಾರೆ.

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರನೇ ಏಕದಿನ ಪಂದ್ಯವು ಭಾನುವಾರ (ಜ.18) ನಡೆಯಲಿದೆ. ಈ ಪಂದ್ಯವು ಸರಣಿ ನಿರ್ಣಾಯಕ. ಅಂದರೆ ಮೂರು ಪಂದ್ಯಗಳ ಸರಣಿಯ ಮೊದಲ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ ಗೆದ್ದರೆ, ದ್ವಿತೀಯ ಪಂದ್ಯದಲ್ಲಿ ನ್ಯೂಝಿಲೆಂಡ್ ಗೆಲುವು ದಾಖಲಿಸಿತ್ತು. ಇದೀಗ ಮೂರನೇ ಪಂದ್ಯದಲ್ಲಿ ಗೆಲ್ಲುವ ತಂಡ ಸರಣಿಯನ್ನು ಜಯಿಸಲಿದೆ.

Sulekha