ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾಗೆ ಅನಾರೋಗ್ಯ – ಎಲ್ಲೋ.. ಏನೋ ಆಗಿದೆ ಅಂತಿದ್ದಾರೆ ಅಭಿಮಾನಿಗಳು..!
ಅತ್ತ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಮೈದಾನದಲ್ಲಿ ಕಾಣಿಸುತ್ತಿಲ್ಲ.. ಇತ್ತ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಯಾರ ಕಣ್ಣಿಗೂ ಬೀಳುತ್ತಿಲ್ಲ. ಹೀಗಾಗಿ ಸಹಜವಾಗಿಯೇ ಅಭಿಮಾನಿಗಳಲ್ಲಿ ಏನಾಗಿರಬಹುದು ಎಂಬ ಗೊಂದಲ ಶುರುವಾಗಿದೆ. ಅಭಿಮಾನಿಗಳಲ್ಲಿ ಗೊಂದಲ ಸೃಷ್ಟಿಯಾಗಿರುವಾಗಲೇ ಅನುಷ್ಕಾ ಶರ್ಮಾಗೆ ಅನಾರೋಗ್ಯ ಕಾಡುತ್ತಿದೆಯಾ ಎಂಬ ಬಗ್ಗೆ ಅನುಮಾನ ಮೂಡಿದೆ. ಇದಕ್ಕೆ ಕಾರಣ ಪತ್ರಕರ್ತರೊಬ್ಬರು ಹಾಕಿರುವ ಪೋಸ್ಟ್.
ಇದನ್ನೂ ಓದಿ: ಇಂಗ್ಲೆಂಡ್ ವಿರುದ್ಧದ ಕೊನೆಯ ಮೂರು ಟೆಸ್ಟ್ ಪಂದ್ಯಗಳಿಗೆ ಟೀಮ್ ಪ್ರಕಟ – ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅಲಭ್ಯ
ಕೆಲವು ದಿನಗಳ ಹಿಂದೆ ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಮತ್ತು ವಿರಾಟ್ ಅವರ ಸ್ನೇಹಿತ ಎಬಿ ಡಿವಿಲಿಯರ್ಸ್ ಒಂದು ವಿಚಾರವನ್ನು ಬಹಿರಂಗಪಡಿಸಿದ್ದರು. ವಿರಾಟ್ ಎರಡನೇ ಬಾರಿಗೆ ತಂದೆಯಾಗಲಿದ್ದಾರೆ ಎಂದು ಹೇಳುವ ಮೂಲಕ ವಿರಾಟ್ ಮತ್ತು ಅನುಷ್ಕಾ ಶರ್ಮಾ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದರು. ಈ ಹೇಳಿಕೆ ನೀಡಿದ ಎರಡನೇ ದಿನದಲ್ಲಿ ಎಬಿ ಡಿವಿಲಿಯರ್ಸ್ ತಮ್ಮ ಹೇಳಿಕೆಯನ್ನು ವಾಪಸ್ಸು ಪಡೆದಿದ್ದರು. ಅಷ್ಟೇ ಅಲ್ಲ ಅಭಿಮಾನಿಗಳಲ್ಲಿ ಕ್ಷಮೆಯನ್ನೂ ಕೇಳಿದ್ದರು. ತಾವು ದೊಡ್ಡ ತಪ್ಪು ಮಾಡಿದ್ದು, ವಿರಾಟ್ ಬಗ್ಗೆ ನೀಡಿದ ಮಾಹಿತಿ ತಪ್ಪು ಎಂದು ಹೇಳಿದ್ದರು.
ಈ ಬೆಳವಣಿಗೆ ಆದ ಮೇಲೂ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಮಾಧ್ಯಮಗಳಿಂದ ದೂರವಿದ್ದಾರೆ. ಅನುಷ್ಕಾ ಅವರ ಆರೋಗ್ಯದ ಕುರಿತು ಪತ್ರಕರ್ತರೊಬ್ಬರು ಹಾಕಿರುವ ಪೋಸ್ಟ್ ಮಾತ್ರ ನೆಟ್ಟಿಗರ ಗಮನ ಸೆಳೆದಿದೆ. ಪತ್ರಕರ್ತ ಅಭಿಷೇಕ್ ತ್ರಿಪಾಠಿ ಟ್ವಿಟರ್‌ನಲ್ಲಿ ಪೋಸ್ಟ್ ಒಂದನ್ನು ಬರೆದಿದ್ದಾರೆ. ಅದರಲ್ಲಿ ಅವರು ಅನುಷ್ಕಾ ಮತ್ತು ವಿರಾಟ್ ಹೆಸರನ್ನು ಉಲ್ಲೇಖಿಸಿದ್ದಾರೆ.
‘ನಾಲ್ಕು ವಿಷಯಗಳು: ಒಂದು: ಡಿವಿಲಿಯರ್ಸ್ ಹೇಳಿದ್ದು ಸರಿ. ಎರಡು: ಕೆಲವು ಸಮಸ್ಯೆಗಳ ಕಾರಣ ವಿದೇಶದಲ್ಲಿ ವೈದ್ಯರ ಬಳಿ ಚಿಕಿತ್ಸೆ ಪಡೆಯಲು ಮತ್ತು ಕುಟುಂಬದೊಂದಿಗೆ ಇರಲು ವಿರಾಟ್ ನಿರ್ಧರಿಸಿದ್ದಾರೆ. ಮೂರು: ಬಿಸಿಸಿಐ ಅನುಮತಿಯೊಂದಿಗೆ ಈ ಸಮಯದಲ್ಲಿ ಅವರು ತಮ್ಮ ಕುಟುಂಬದೊಂದಿಗೆ ಇರಲು ನಿರ್ಧರಿಸಿದ್ದಾರೆ. ನಾಲ್ಕು: ನಾವು ಅವರ ಸಂತೋಷದ ಭವಿಷ್ಯಕ್ಕಾಗಿ ಪ್ರಾರ್ಥಿಸಬೇಕು’ ಎಂದು ಪೋಸ್ಟ್ ಮಾಡಲಾಗಿದೆ.
ಈ ಪೋಸ್ಟ್ ನೋಡಿದ ಮೇಲೆ ಅಭಿಮಾನಿಗಳು ಅನುಷ್ಕಾ ಶರ್ಮಾ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಅವರಿಗೆ ಅನಾರೋಗ್ಯ ಉಂಟಾಗಿರಬಹುದು ಎಂದು ಹೇಳಲಾಗುತ್ತಿದೆ. ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಸರಣಿಯ ಕೊನೆಯ ಮೂರು ಟೆಸ್ಟ್ ಪಂದ್ಯಗಳಿಂದಲೂ ದೂರ ಉಳಿದಿದ್ದಾರೆ. ಅನುಷ್ಕಾ ಶರ್ಮಾ ಅವರು ಸದ್ಯ ನಟನೆಯಿಂದ ದೂರವೇ ಇದ್ದಾರೆ. ಎಲ್ಲೋ ಏನೋ ಆಗಿದೆ. ಇದಕ್ಕಾಗಿಯೇ ವಿರಾಟ್ ಕೊಹ್ಲಿ ಮೈದಾನದಿಂದ ದೂರ ಉಳಿದಿದ್ದಾರೆ ಎಂಬ ಸಂದೇಹ ಅಭಿಮಾನಿಗಳದ್ದು.