ಮೀನುಗಾರಿಕಾ ಬಂದರಿನಲ್ಲಿ ಭೀಕರ ಅಗ್ನಿ ಅವಘಡ – ಸುಟ್ಟು ಕರಕಲಾದ 40 ದೋಣಿಗಳು

ಮೀನುಗಾರಿಕಾ ಬಂದರಿನಲ್ಲಿ ಭೀಕರ ಅಗ್ನಿ ಅವಘಡ – ಸುಟ್ಟು ಕರಕಲಾದ 40 ದೋಣಿಗಳು

ಮೀನುಗಾರಿಕಾ ಬಂದರಿನಲ್ಲಿ ಭಾನುವಾರ ತಡ ರಾತ್ರಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಆಂದ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಸಂಭವಿಸಿದೆ. ಈ ದುರಂತದಲ್ಲಿ ಸುಮಾರು 40 ಮೀನುಗಾರಿಕಾ ದೋಣಿಗಳು ಸುಟ್ಟು ಕರಕಲಾಗಿವೆ ಎಂದು ವರದಿಯಾಗಿದೆ.

ದೋಣಿಗಳಲ್ಲಿ ಸಿಲಿಂಡರ್, ಇಂಧನ ಟ್ಯಾಂಕ್‌ಗಳಿಗೆ ಬೆಂಕಿ ತಗುಲಿದ್ದರಿಂದ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ದೋಣಿಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗಳಿಗೆ ತಿಳಿಸಿದ್ದಾರೆ. ಅಗ್ನಿಶಾಮಕ ದಳ ಬೆಂಕಿ ಆರಿಸಲು ಹರಸಾಹಸ ಪಟ್ಟರು.  ಘಟನೆಯಲ್ಲಿ ಸುಮಾರು 30 ಕೋಟಿ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: ಬರದಲ್ಲಿ ಬೆಳೆ ಉಳಿಸಲು ರೈತರ ಪರದಾಟ –  ಈರುಳ್ಳಿ ಬೆಲೆಗೆ ಗ್ರಾಹಕರು ಕಣ್ಣೀರು!

ರಾತ್ರಿ 11:30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಆನಂದ್ ರೆಡ್ಡಿ ತಿಳಿಸಿದ್ದಾರೆ. ದೋಣಿಗಳಲ್ಲಿನ ಸಿಲಿಂಡರ್‌ಗಳು ಸ್ಫೋಟಕ್ಕೆ ಕಾರಣವಾಗುತ್ತಿವೆ. ಆದ್ದರಿಂದ ನಾವು ಜನರನ್ನು ದೂರವಿರಲು ಕೇಳುತ್ತಿದ್ದೇವೆ. ಬೆಂಕಿಯನ್ನು ನಿಯಂತ್ರಿಸಲು ಅಗ್ನಿಶಾಮಕ ದಳ ಕಾರ್ಯನಿರ್ವಹಿಸುತ್ತಿವೆ. ಬೆಂಕಿಗೆ ಕಾರಣವನ್ನು ಇನ್ನೂ ದೃಢಪಡಿಸಲಾಗಿಲ್ಲ. ಯಾವುದೇ ಸಾವು ನೋವುಗಳು ವರದಿಯಾಗಿಲ್ಲ. ಈ ಕುರಿತು ಪ್ರಕರಣವನ್ನು ದಾಖಲಿಸಲಾಗಿದೆ ಮತ್ತು ತನಿಖೆ ನಡೆಸಲಾಗುತ್ತಿದೆ ಎಂದು ಆನಂದ್ ರೆಡ್ಡಿ ಮಾಹಿತಿ ನೀಡಿದ್ದಾರೆ.

Shwetha M