ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ -11 ಪರ್ವತಾರೋಹಿಗಳು ಸಾವು, 22 ಮಂದಿ ನಾಪತ್ತೆ

ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ -11 ಪರ್ವತಾರೋಹಿಗಳು ಸಾವು, 22 ಮಂದಿ ನಾಪತ್ತೆ

ಇಂಡೋನೇಷ್ಯಾದ ಮೌಂಟ್ ಮರಾಪಿಯಲ್ಲಿ  ಜ್ವಾಲಾಮುಖಿ ಸ್ಪೋಟಗೊಂಡಿದೆ. ಪರಿಣಾಮ 11 ಪರ್ವತಾರೋಹಿಗಳು ಸಾವನ್ನಪ್ಪಿದ್ದು, 22 ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ಪಶ್ಚಿಮ ಸುಮಾತ್ರಾದಲ್ಲಿ ಭಾನುವಾರ ಜ್ವಾಲಾಮುಖಿ ಸ್ಫೋಟಗೊಂಡಿದೆ. ಜ್ವಾಲಾಮುಖಿ ಸ್ಪೋಟಗೊಳ್ಳುವ ಸಂದರ್ಭ ಆ ಸ್ಥಳದಲ್ಲಿ  75 ಕ್ಕೂ ಅಧಿಕ ಜನರು ಇದ್ದರು. 11 ಪರ್ವತಾರೋಹಿಗಳು ಸಾವನ್ನಪ್ಪಿದ್ದು, 22 ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಬಿಎಂಟಿಸಿ ಬಸ್‌ಗೆ ಕಾರು ಡಿಕ್ಕಿ – ರಸ್ತೆಯಲ್ಲೇ ಹೊತ್ತಿಯುರಿದ ವಾಹನಗಳು, 30 ಪ್ರಯಾಣಿಕರು ಬಚಾವ್..!

ಜ್ವಾಲಾಮುಖಿ ಸ್ಫೋಟದ ಬಳಿಕ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ. ಅದರಲ್ಲಿ 14 ಜನರನ್ನು ಸುರಕ್ಷಿತವಾಗಿ ಕರೆತಂದಿದ್ದೇವೆ. ಮೊದಲು ನಾಪತ್ತೆಯಾಗಿದ್ದವರಲ್ಲಿ ಮೂವರನ್ನು ಜೀವಂತವಾಗಿ ಪತ್ತೆ ಮಾಡಿದ್ದೇವೆ. 11 ಜನರು ಶವವಾಗಿ ಪತ್ತೆಯಾಗಿದ್ದಾರೆ. ಇನ್ನೂ ನಾಪತ್ತೆಯಾಗದವರ ಪತ್ತೆಗೆ ಕಾರ್ಯಾಚರಣೆ ಮುಂದುವರಿಸಲಾಗುತ್ತಿದೆ ಎಂದು ರಕ್ಷಣಾ ಏಜೆನ್ಸಿಯ ಮುಖ್ಯಸ್ಥ ಅಬ್ದುಲ್ ಮಲಿಕ್ ತಿಳಿಸಿದ್ದಾರೆ.

ಭಾನುವಾರ ಸಂಭವಿಸಿದ ಜ್ವಾಲಾಮುಖಿ ಸ್ಫೋಟದ ವೀಡಿಯೋ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಜ್ವಾಲಾಮುಖಿಯಿಂದಾದ ದಟ್ಟವಾದ ಹೊಗೆ ಆಕಾಶದಲ್ಲಿ ಹರಡಿರುವುದು, ರಸ್ತೆ, ವಾಹನಗಳು ಜ್ವಾಲಾಮುಖಿಯ ಬೂದಿಯಿಂದ ಆವೃತವಾಗಿರುವುದು ಕಂಡುಬಂದಿದೆ.

ಇಂಡೋನೇಷ್ಯಾ ಪೆಸಿಫಿಕ್ ಸಾಗದರ ರಿಂಗ್ ಆಫ್ ಫೈರ್‌ನ ಅಂಚಿನಲ್ಲಿ ಬರುತ್ತದೆ. ದೇಶದ ಜ್ವಾಲಾಮುಖಿ ಏಜೆನ್ಸಿಯ ಪ್ರಕಾರ ಮೌಂಟ್ ಮರಾಪಿ ಸುಮಾರು 2,891 ಅಡಿ ಎತ್ತರದಲ್ಲಿದ್ದು, ಇದೇ ರೀತಿಯ 127 ಸಕ್ರಿಯ ಜ್ವಾಲಾಮುಖಿಗಳು ಈ ಪ್ರದೇಶದಲ್ಲಿದೆ.

Shwetha M