ಹೋಗಿಲ್ಲ ಕೊರೊನಾ ಹೆಮ್ಮಾರಿ ನೀವು ಅಲರ್ಟ್ ಆಗಿರಿ – 8 ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಎಚ್ಚರಿಕೆ..!

ಹೋಗಿಲ್ಲ ಕೊರೊನಾ ಹೆಮ್ಮಾರಿ ನೀವು ಅಲರ್ಟ್ ಆಗಿರಿ – 8 ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಎಚ್ಚರಿಕೆ..!

ರಾಜ್ಯದಲ್ಲಿ ಮತ್ತೆ ಕೊರೊನಾ ಆತಂಕ ಶುರುವಾಗಿದೆ. ಕೊರೊನಾ ಕಾಟ ಕಡಿಮೆಯಾಯ್ತು ಅನ್ನೋ ರೀತಿ ಜನ ಎಲ್ಲವನ್ನೂ ಮರೆಯುವಾಗಲೇ ಮತ್ತೆ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 537 ಹೊಸ ಪ್ರಕರಣಗಳು ಪತ್ತೆಯಾಗಿವೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಯೇ 367 ಹೊಸ ಪ್ರಕರಣಗಳು ದಾಖಲಾಗಿದೆ. ಕೋವಿಡ್ ಪಾಸಿಟಿವಿಟಿ ರೇಟ್ ಹೆಚ್ಚುತ್ತಿರುವುದರಿಂದ ಕೊರೊನಾ ಪರಿಸ್ಥಿತಿ ಮೇಲೆ ತೀವ್ರ ನಿಗಾ ವಹಿಸುವಂತೆ ಕೇಂದ್ರ ಸರ್ಕಾರ 8 ರಾಜ್ಯಗಳಿಗೆ ನಿರ್ದೇಶನ ನೀಡಿದೆ.

ಇದನ್ನೂ ಓದಿ:ದೇಶದಲ್ಲಿ ಹೆಚ್ಚಾಯ್ತು ಕೊರೊನಾ ಕೇಸ್ – 60 ಸಾವಿರ ಗಡಿ ದಾಟಿದ ಸಕ್ರಿಯ ಪ್ರಕರಣ

ರಾಜ್ಯದಲ್ಲಿ 2070 ಸಕ್ರಿಯ ಪ್ರಕರಣಗಳು ದಾಖಲಾಗಿದ್ದು, ವಾರದಲ್ಲಿ ಏರಿಕೆ ಪ್ರಮಾಣ 3.52ರಷ್ಟಿದೆ. ದೈನಂದಿನ ಏರಿಕೆಯು ಶೇ 3.06 ರಷ್ಟಿದೆ. ಕೊರೊನಾದಿಂದ ರಾಜ್ಯದಲ್ಲಿ ಕಳೆದ 15 ದಿನದಲ್ಲಿ 15 ಜನರು ಸಾವನ್ನಪ್ಪಿದ್ದಾರೆ. ಇನ್ನು ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12 ಸಾವಿರ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಕೊರೊನಾದಿಂದ ಕಳೆದ 24 ಗಂಟೆಗಳಲ್ಲಿ 42 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಕೊರೊನಾ ಏರಿಕೆಯಾಗುತ್ತಿದ್ದು, ತೀವ್ರ ನಿಗಾ ವಹಿಸುವಂತೆ ಕೇಂದ್ರ ಸರ್ಕಾರ 8 ರಾಜ್ಯಗಳಿಗೆ ನಿರ್ದೇಶನ ನೀಡಿದೆ. ಉತ್ತರ ಪ್ರದೇಶ, ತಮಿಳುನಾಡು, ರಾಜಸ್ಥಾನ, ಮಹಾರಾಷ್ಟ್ರ, ಕೇರಳ, ಕರ್ನಾಟಕ, ಹರಿಯಾಣ ಮತ್ತು ದೆಹಲಿ ಈ ಎಂಟು ರಾಜ್ಯಗಳಲ್ಲಿ ನಿಗಾ ವಹಿಸಬೇಕೆಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಅಲ್ಲದೇ, ಕೊರೊನಾ ಹರಡದಂತೆ ಜನ ಕೂಡಾ ಅಲರ್ಟ್ ಆಗಿರಬೇಕು ಎಂದು ಕೇಂದ್ರ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

suddiyaana