ಬಿಗ್ಬಾಸ್ ಖ್ಯಾತಿಯ ಶೆಫಾಲಿ ನಿಗೂಢ ಸಾವು – ಶೆಫಾಲಿ ಸಾವಿಗೆ ಹೃದಯಘಾತ ಕಾರಣ ಅಲ್ವಾ?
ನಾ ಬೋರ್ಡು ಇರದ ಬಸ್ಸಲಿ ಹಾಡಿಗೆ ಹೆಜ್ಜೆ ಹಾಕಿದ ಶೆಫಾಲಿ

ಬಿಗ್ಬಾಸ್ ರಿಯಾಲಿಟಿ ಶೋನಲ್ಲಿ ಪ್ರಸಿದ್ಧಿ ಪಡೆದ, ಕನ್ನಡಿಗರ ಪ್ರೀತಿಯ ಅಪ್ಪು ಪುನೀತ್ ರಾಜ್ಕುಮಾರ್ ಅವರೊಂದಿಗೆ ‘ಹುಡುಗರು’ ಚಿತ್ರದಲ್ಲಿ ಹೆಜ್ಜೆ ಹಾಕಿದ್ದ ನಟಿ ಶೆಫಾಲಿ ಜರಿವಾಲಾ ಅವರು 42ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. ನಾನು ಬೋರ್ಡು ಇರದ ಬಸ್ಸಿನಲ್ಲಿ ಹಾಡಿಗೆ ಹೆಜ್ಜೆ ಹಾಕಿದ ಶೆಫಾಲಿ ಕನ್ನಡಿಗರಿಗೆ ಪಂಕಜಾ ಅಂತಾ ಪರಿಚಯವಾಗಿದ್ದರು. ಇದೀಗ ಶೆಫಾಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಅಂತಾ ಹೇಳಲಾಗುತ್ತಿದ್ದರೂ, ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ಸಾವಿನ ಬಗ್ಗೆ ನಿಗೂಢವಾಗಿ ಮಾತನಾಡಿದ್ದಾರೆ.
ಇದನ್ನೂ ಓದಿ:ಪುನೀತ್ ರಾಜ್ ಕುಮಾರ್ ಜೊತೆ ಹೆಜ್ಜೆ ಹಾಕಿದ್ದ ನಟಿ ಇನ್ನಿಲ್ಲ – ಶೆಫಾಲಿ ಹೃದಯಾಘಾತದಿಂದ ನಿಧನ
ಶೆಫಾಲಿ ಜರಿವಾಲಾ ಅವರ ಹಠಾತ್ ಸಾವಿನ ಸುದ್ದಿ ಕೇಳಿ ಸೆಲೆಬ್ರಿಟಿಗಳು ಶಾಕ್ಗೊಳಗಾಗಿದ್ದಾರೆ. 42 ನೇ ವಯಸ್ಸಿನ ಶೆಫಾಲಿ ಹೃದಯಾಘಾತದಿಂದ ನಿಧನರಾದರು ಎಂದು ಹೇಳಲಾಗಿದ್ದರೂ, ಮುಂಬೈ ಪೊಲೀಸರು ಮಾತ್ರ ಶೆಫಾಲಿ ಮುಂಬೈನ ತಮ್ಮ ಅಪಾರ್ಟ್ಮೆಂಟ್ನಲ್ಲಿ ಮೃತಪಟ್ಟಿದ್ದಾರೆ. ಸಾವಿಗೆ ಕಾರಣ ಏನು ಅನ್ನೋದು ಸಧ್ಯದಲ್ಲೇ ಗೊತ್ತಾಗಲಿದೆ ಎಂದು ಹೇಳಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಅವರ ಮೃತದೇಹವನ್ನು ಕೂಪರ್ ಆಸ್ಪತ್ರೆಗೆ ಕಳುಹಿಸಲಾಗಿದೆ.
ಮುಂಬೈನ ಅಂಧೇರಿ ಲೋಖಂಡ್ವಾಲಾ ಪ್ರದೇಶದಲ್ಲಿ ವಾಸಿಸುತ್ತಿದ್ದ ನಟಿ ಶೆಫಾಲಿ ಜೂನ್ 27ರ ಬೆಳಿಗ್ಗೆ 11 ಗಂಟೆ ಸುಮಾರಿಗೆ ತೀವ್ರ ಅಸ್ವಸ್ಥರಾದರು. ಅವರಿಗೆ ಎದೆನೋವು ಕಾಣಿಸಿಕೊಂಡಿತು. ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ, ಯಾವುದೇ ಪ್ರಯೋಜನ ಆಗಲಿಲ್ಲ. ಆಗಲೇ ಅವರು ನಿಧನ ಹೊಂದಿದ್ದರು ಎಂದು ಹೇಳಲಾಗುತ್ತಿದೆ. ಆದರೆ, ಮುಂಬೈ ಪೊಲೀಸರು, “ಅವರ ಮೃತದೇಹ ಅಂಧೇರಿ ಪ್ರದೇಶದ ಅವರ ನಿವಾಸದಲ್ಲಿ ಪತ್ತೆಯಾಗಿದೆ. ಮುಂಬೈ ಪೊಲೀಸರಿಗೆ ಈ ಬಗ್ಗೆ ಬೆಳಗಿನ ಜಾವ 1 ಗಂಟೆಗೆ ಮಾಹಿತಿ ಸಿಕ್ಕಿತು. ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕೂಪರ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಸಾವಿಗೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ” ಎಂದು ತಿಳಿಸಿದ್ದಾರೆ ಎಂದು ANI ವರದಿ ಮಾಡಿದೆ.
ಶೆಫಾಲಿ ಜನಿಸಿದ್ದು 1982ರ ಡಿಸೆಂಬರ್ 15ರಂದು. ಅವರು ಮುಂಬೈನಲ್ಲಿ ಹುಟ್ಟಿ, ಬೆಳೆದರು. 2004ರಲ್ಲಿ ಅವರು ಹರ್ಮೀತ್ ಸಿಂಗ್ನ ವಿವಾಹ ಆದರು. ಈ ಸಂಬಂಧ 2009ರವರೆಗೆ ಇತ್ತು. ಆ ಬಳಿಕ ಇವರು ವಿಚ್ಛೇದನ ಪಡೆದರು. 2014ರಲ್ಲಿ ಪರಾಗ್ ತ್ಯಾಗಿ ಅವರನ್ನು ಶೆಫಾಲಿ ವಿವಾಹ ಆದರು. ಎರಡನೇ ಪತಿಯ ಜೊತೆ ಇನ್ನೂ ಅವರು ಸಂಸಾರ ನಡೆಸುತ್ತಿದ್ದರು. 2004ರ ‘ಕಾಂಟಾ ಲಗಾ..’ ಹಾಡಿನಲ್ಲಿ ಶೆಫಾಲಿ ಭರ್ಜರಿ ಡ್ಯಾನ್ಸ್ ಮಾಡಿದ್ದರು. 2011ರಲ್ಲಿ ರಿಲೀಸ್ ಆದ ಪುನೀತ್ ರಾಜ್ಕುಮಾರ್ ನಟನೆಯ ‘ಹುಡುಗರು’ ಸಿನಿಮಾದಲ್ಲಿ ಅವರು ‘ಪಂಕಜಾ..’ ಹಾಡಿಗೆ ಕುಣಿದಿದ್ದರು. 2019ರಲ್ಲಿ ಆರಂಭ ಆದ ‘ಬಿಗ್ ಬಾಸ್ ಸೀಸನ್ 13’ರಲ್ಲಿ ಸ್ಪರ್ಧಿಸಿದರು.
ಶಾಕಿಂಗ್ ವಿಚಾರ ಎಂದರೆ ಅವರ ಜೊತೆ ನಟಿಸಿದ ಪುನೀತ್ ಹಾಗೂ ಅವರ ಜೊತೆ ಬಿಗ್ ಬಾಸ್ನಲ್ಲಿ ಸ್ಪರ್ಧಿಸಿ ಗೆದ್ದ ಸಿದ್ದಾರ್ಥ್ ಶುಕ್ಲಾ ಹೃದಯಾಘಾತದಿಂದಲೇ ನಿಧನ ಹೊಂದಿದ್ದರು. ಶೆಫಾಲಿ ಸಾವಿನ ಸುದ್ದಿ ಕೇಳಿದ ಅಭಿಮಾನಿಗಳು ಮತ್ತು ಆಪ್ತರು ಆಘಾತಕ್ಕೊಳಗಾಗಿದ್ದಾರೆ. ಅನೇಕ ಸೆಲೆಬ್ರಿಟಿಗಳು ಶೆಫಾಲಿ ಅವರ ನಿಧನಕ್ಕೆ ದುಃಖ ವ್ಯಕ್ತಪಡಿಸಿದ್ದಾರೆ.

ನೋಡಿರಿ

