ಬಾರ್ಡರ್ -ಗವಾಸ್ಕರ್ ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯ – ಆಸ್ಟ್ರೇಲಿಯಾದ ಪ್ರಧಾನಿ ಜೊತೆ ಮೋದಿ ಮ್ಯಾಚ್ ವೀಕ್ಷಣೆ

ಬಾರ್ಡರ್ -ಗವಾಸ್ಕರ್ ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯ – ಆಸ್ಟ್ರೇಲಿಯಾದ ಪ್ರಧಾನಿ ಜೊತೆ ಮೋದಿ ಮ್ಯಾಚ್ ವೀಕ್ಷಣೆ

ಬಾರ್ಡರ್ -ಗವಾಸ್ಕರ್ ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯ ಗುಜರಾತ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಭಾರತ – ಆಸ್ಟ್ರೇಲಿಯಾ ನಡುವಿನ ಕೊನೆಯ ಹಾಗೂ 4ನೇ ಟೆಸ್ಟ್ ಪಂದ್ಯವನ್ನು ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಗುಜರಾತ್‌ನ ನರೇಂದ್ರ ಮೋದಿ ಕ್ರೀಡಾಂಗಣಕ್ಕೆ ಆಗಮಿಸಿದ್ದರು. ಮೂರು ದಿನಗಳ ಭಾರತ ಪ್ರವಾಸದಲ್ಲಿರುವ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ (Anthony Albanese) ಅವರೊಂದಿಗೆ ಪ್ರಧಾನಿ ಮೋದಿ ಕೆಲ ಹೊತ್ತು  ಪಂದ್ಯ ವೀಕ್ಷಿಸಿದ್ದಾರೆ. ಈಗಾಗಲೇ ಟಾಸ್ ಗೆದ್ದು ಆಸ್ಟ್ರೇಲಿಯಾ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಇದನ್ನೂ ಓದಿ:  ಆರ್‌ಸಿಬಿಗೆ ಹ್ಯಾಟ್ರಿಕ್ ಸೋಲು -ಬೌಲಿಂಗ್ ಸಮಸ್ಯೆಯಿಂದ ಟೀಮ್ ಕ್ಯಾಪ್ಟನ್ ಕಂಗಾಲು

ಪಂದ್ಯ ಆರಂಭಕ್ಕೂ ಮುನ್ನವೇ ಉಭಯ ದೇಶದ ಪ್ರಧಾನಿಗಳು ಮೈದಾನಕ್ಕೆ ಆಗಮಿಸಿ ಉಭಯ ತಂಡದ ನಾಯಕರಿಗೆ ಟೆಸ್ಟ್ ಕ್ಯಾಪ್ ಹಸ್ತಾಂತರಿಸಿದರು. ಮೋದಿ ಅವರು ನಾಯಕ ರೋಹಿತ್ ಶರ್ಮಾರಿಗೆ ಕ್ಯಾಪ್ ನೀಡಿದರೆ, ಆಸೀಸ್ ನಾಯಕ ಸ್ಟೀವ್ ಸ್ಮಿತ್‌ಗೆ ಅಲ್ಬನೀಸ್ ಅವರು ಗ್ರೀನ್ ಕ್ಯಾಪ್ ನೀಡಿದರು. ಇದೇ ವೇಳೇ ಇಬ್ಬರು ಪ್ರಧಾನಿಗಳು ಎರಡು ತಂಡಗಳ ನಾಯಕರಾದ ರೋಹಿತ್ ಶರ್ಮಾ ಹಾಗೂ ಸ್ಟೀವ್ ಸ್ಮಿತ್ ಅವರ ಕೈಗಳನ್ನ ಹಿಡಿದು ಮೇಲೆತ್ತಿ ಖುಷಿ ವ್ಯಕ್ತಪಡಿಸಿ ಶುಭಕೋರಿದರು. ಸಾಲಿನಲ್ಲಿ ನಿಂತು ಆಟಗಾರರರು ರಾಷ್ಟ್ರಗೀತೆಯನ್ನು ಹಾಡುವಾಗ ಮೋದಿ, ರೋಹಿತ್ ಶರ್ಮಾ ಪಕ್ಕದಲ್ಲೇ ನಿಂತು ರಾಷ್ಟ್ರಗೀತೆ ಹಾಡಿದರೆ, ಆಸೀಸ್ ಪ್ರಧಾನಿ ಆಂಟೋನಿ ಕೂಡ ತಮ್ಮ ಆಟಗಾರರ ಸಾಲಿನಲ್ಲಿ ನಿಂತು ರಾಷ್ಟ್ರಗೀತೆ ಹಾಡಿದರು. ಭಾರತದ ಪ್ರಧಾನಿ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಮೈದಾನದಲ್ಲಿ ವಿಶೇಷವಾಗಿ ರ್ಯಾಲಿ ನಡೆಸಿದರು. ತೆರೆದ ವಾಹನದಲ್ಲಿ ಕ್ರೀಡಾಂಗಣವನ್ನ ಸುತ್ತು ಹಾಕಿ ಕ್ರಿಕೆಟ್ ಅಭಿಮಾನಿಗಳಿಗೆ ಕೈಬೀಸಿದರು. ಈ ವೇಳೆ ಮೋದಿ ಹಾಗೂ ಆಂಥೋನಿ ಅಲ್ಬನೀಸ್ 2 ತಂಡದ ಆಟಗಾರರಿಗೆ ಶುಭ ಕೋರಿದರು. ನಾಗ್ಪುರದಲ್ಲಿ ನಡೆದ ಮೊದಲ ಟೆಸ್ಟ್ನಲ್ಲಿ ಭಾರತ 132 ರನ್ಗಳಿಂದ ಗೆಲುವು ಸಾಧಿಸಿತ್ತು. ಎರಡನೇ ಟೆಸ್ಟ್ನಲ್ಲಿ ದೆಹಲಿಯಲ್ಲಿ 6 ವಿಕೆಟ್‌ಗಳ ಜಯದೊಂದಿಗೆ ಮತ್ತೊಮ್ಮೆ ಗೆಲುವು ಸಾಧಿಸಿತ್ತು. ಇಂದೋರ್‌ನಲ್ಲಿ ನಡೆದ 3ನೇ ಟೆಸ್ಟ್ ಪಂದ್ಯವನ್ನು 3 ದಿನಗಳಲ್ಲಿ 9 ವಿಕೆಟ್‌ಗಳಿಂದ ಗೆಲ್ಲುವ ಮೂಲಕ ಆಸ್ಟ್ರೇಲಿಯಾ ವೈಟ್‌ವಾಶ್ ಎದುರಿಸುವ ಸಾಧ್ಯತೆಯಿಂದ ತಪ್ಪಿಸಿಕೊಂಡಿದೆ.

suddiyaana