ಸ್ವಿಮ್ಮಿಂಗ್ ಪೂಲ್‌ಗಳಿಗೆ ಕಾವೇರಿ ನೀರು ಬಳಕೆಗೆ ನಿಷೇಧ – ನಿಯಮ ಉಲ್ಲಂಘಿಸಿದರೆ 5,000 ರೂ. ದಂಡ

ಸ್ವಿಮ್ಮಿಂಗ್ ಪೂಲ್‌ಗಳಿಗೆ ಕಾವೇರಿ ನೀರು ಬಳಕೆಗೆ ನಿಷೇಧ – ನಿಯಮ ಉಲ್ಲಂಘಿಸಿದರೆ 5,000 ರೂ. ದಂಡ

ಈ ಬಾರಿ ಮುಂಗಾರು ಮಳೆಯ ಕೊರತೆ ಉಂಟಾಗಿದ್ದು, ರಾಜ್ಯದಲ್ಲಿ ಬರದ ವಾತಾವರಣ ನಿರ್ಮಾಣವಾಗಿದೆ. ರಾಜ್ಯದ ಬಹುತೇಕ ನದಿಗಳು ಬತ್ತಿ ಹೋಗಿವೆ. ಇದರ ಎಫೆಕ್ಟ್‌ ಸಿಲಿಕಾನ್‌ ಸಿಟಿ ಬೆಂಗಳೂರಿಗೂ ತಟ್ಟಿದೆ. ಕುಡಿಯುವ ನೀರಿಗೂ ಹಾಹಾಕಾರ ಶುರುವಾಗಿದೆ. ನೀರಿನ ಸಮಸ್ಯೆ ನಿಭಾಯಿಸಲು ಹಲವು ಕ್ರಮಕೈಗೊಂಡಿರುವ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು, ನಗರದ ಈಜುಕೊಳಗಳಿಗೆ ಕಾವೇರಿ ನೀರನ್ನು ಬಳಸಬಾರದು. ಒಂದು ವೇಳೆ ಕಾವೇರಿ ನೀರು ಬಳಸಿಕೊಂಡರೆ ಭಾರಿ ದಂಡ ವಿಧಿಸಲಾಗುವುದು ಎಂದು ಆದೇಶ ಹೊರಡಿಸಿದೆ.

ಇದನ್ನೂ ಓದಿ: ಪ್ರತಾಪ್ ಸಿಂಹ ಪಕ್ಷೇತರವಾಗಿ ಸ್ಪರ್ಧೆ ಮಾಡ್ತಾರಾ? – ಗಟ್ಟಿ ಪಿಂಡ ನಾನು ಎಂದು ಸಿಂಹ ಘರ್ಜಿಸಿದ್ದೇಕೆ?

ಹೌದು, ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕುಡಿಯೋಕೂ ನೀರಿಲ್ಲ.. ತೊಳೆಯೋಕು ನೀರಿಲ್ಲ ಅನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೆರೆಗಳು ಬತ್ತಿ ಹೋಗುತ್ತಿವೆ. ಬೋರ್‌ವೆಲ್‌ಗಳಲ್ಲೂ ನೀರು ಸಿಗುತ್ತಿಲ್ಲ. ಇದ್ರಿಂದಾಗಿ ನಗರದಲ್ಲಿ ನೀರಿನ ಅಭಾವ ಹೆಚ್ಚಾಗಿದೆ. ನಗರದ ಎಲ್ಲಾ ಕಡೆಗೂ ಕುಡಿಯುವ ನೀರು ಪೂರೈಸುವ ಅಗತ್ಯವಿರುವುದರಿಂದಾಗಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದೀಗ ನಗರದ ಈಜುಕೊಳಗಳಿಗೆ ಕಾವೇರಿ ನೀರನ್ನು ಬಳಸಬಾರದು. ಒಂದು ವೇಳೆ ನಿಯಮ ಉಲ್ಲಂಘಿಸಿದರೆ 5 ಸಾವಿರ ರೂ. ದಂಡ ಹಾಕಲಾಗುವುದು ಎಂದು ಮಂಡಳಿ ತಿಳಿಸಿದೆ.

ಈ ಬಾರಿ ಮುಂಗಾರು ಮಳೆ ಕೊರತೆಯಿಂದ ನೀರಿನ ಅಭಾತ ಉಂಟಾಗಿದೆ. ಅಂತರ್ಜಲ ಮಟ್ಟ ಕುಸಿದಿದೆ. ನೀರು ಪೋಲಾಗುವುದನ್ನು ತಡೆಗಟ್ಟಲು ನಗರದಲ್ಲಿ ಕುಡಿಯುವ ನೀರನ್ನು ಈಜುಕೊಳ ಹಾಗೂ ಇತರೆ ಉದ್ದೇಶಗಳಿಗಾಗಿ ಬಳಕೆ ಮಾಡದಿರುವಂತೆ ಸೂಚಿಸಲಾಗಿದೆ ಎಂದು ಸ್ಪಷ್ಟಪಡಿಸಿದೆ. ನಿಯಮ ಉಲ್ಲಂಘಿಸಿದವರಿಗೆ ಆರಂಭದಲ್ಲಿ 5 ಸಾವಿರ ರೂ. ದಂಡ ಹಾಕಲಾಗುವುದು. ನಂತರವೂ ನಿಯಮ ಉಲ್ಲಂಘಿಸಿದರೆ 5,500 ರೂ. ದಂಡದ ಜೊತೆಗೆ ಈಜುಕೊಳದ ಮಾಲೀಕನ ವಿರುದ್ಧ ಪೊಲೀಸ್‌ ಠಾಣೆ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸಿದೆ.

ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಈಜು ಸ್ಪರ್ಧೆಗೆ ಅಭ್ಯಾಸ ನಡೆಸುತ್ತಿರುವವರಿಗೆ ಈ ನಿಯಮ ಅನ್ವಯ ಆಗುವುದಿಲ್ಲ ಎಂದು ಸ್ಪಷ್ಟನೆ ನೀಡಿದೆಯಲ್ಲದೇ, ನಿಯಮ ಉಲ್ಲಂಘಿಸಿದ್ದು ಕಂಡುಬಂದಲ್ಲಿ ಸಾರ್ವಜನಿಕರು ದೂರವಾಣಿ 1916 ಗೆ ಕರೆ ಮಾಡುವಂತೆ ತಿಳಿಸಿದೆ.

Shwetha M