ನೀವು ಕರೆದ ಸಭೆಗೆ ನಾವು ಬರೋಕೆ ಆಗಲ್ಲ- ಸಿಎಂ ಸಿದ್ದರಾಮಯ್ಯಗೆ ಖಡಕ್ ಆಗಿ ಹೇಳಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಸಿಎಂ ಸಿದ್ದರಾಮಯ್ಯ ಕರೆದಿರುವ ಸಂಸದರ ಸಭೆಗೆ ನಮಗೆ ಬರುವುದ್ದಕ್ಕೆ ಆಗಲ್ಲ ಅಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಸಂಸತ್ ಚಳಿಗಾಲದ ಅಧಿವೇಶನ ಹಾಗೂ ಕಾರ್ಯದೊತ್ತಡದ ಕಾರಣ ಸಿದ್ದರಾಮಯ್ಯ ಸಂಸದರ ಸಭೆಯಲ್ಲಿ ಪಾಲ್ಗೊಳ್ಳುವುದು ಅಸಾಧ್ಯವೆಂದು ಧಾರವಾಡ ಸಂಸದರೂ ಆಗಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ಸಭೆಯಲ್ಲಿ ಪಾಲ್ಗೊಳ್ಳದಿರುವ ಬಗ್ಗೆ ಕಾರಣ ಸಮೇತ ಸ್ಪಷ್ಟಪಡಿಸಿದ್ದು, ತಾವು ಸಭೆ ನಿಗದಿಪಡಿಸುವ ಮೊದಲೇ ಚರ್ಚಿಸಿ ದಿನಾಂಕ ನಿಗದಿಪಡಿಸಿದ್ರೆ ಅನುಕೂಲವಾಗುತ್ತಿತ್ತು. ಡಿಸೆಂಬರ್ 8ರ ಬದಲು ಮತ್ತೊಂದು ದಿನಾಂಕ ನಿಗದಿಪಡಿಸುವಂತೆ ಪತ್ರದ ಮೂಲಕ ಸಲಹೆ ನೀಡಿದ್ದಾರೆ.
ಇದನ್ನೂ ಓದಿ: ಬೆಂಗಳೂರು ಕೆಂಪೇಗೌಡ ಏರ್ಪೋಟ್ ನಲ್ಲಿ 62ಕ್ಕೂ ಹೆಚ್ಚು ಇಂಡಿಗೋ ವಿಮಾನ ಹಾರಾಟ ರದ್ದು!
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಡಿ.8ರಂದು ರಾಜ್ಯವನ್ನು ಪ್ರತಿನಿಧಿಸುವ ಸಂಸದರ ಸಭೆ ಕರೆದಿದ್ದರು. ರಾಜ್ಯದ ಅಭಿವೃದ್ಧಿ ಮತ್ತು ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕೇಂದ್ರದ ಗಮನ ಸೆಳೆಯಲೆಂದು ಸಂಸದ ಸಭೆ ಕರೆದಿದ್ರು. ಈ ಬಗ್ಗೆ ಮೊದಲೇ ಸಂಸದರೊಂದಿಗೆ ಚರ್ಚಿಸಿ ದಿನಾಂಕ ನಿಗದಿಪಡಿಸಿಲ್ಲ. ಇನ್ನು ಸಂಸತ್ ಅಧಿವೇಶನ ಇರುವುದರಿಂದ ಕೇಂದ್ರ ಸಚಿವರು ಆಗಿರುವ ರಾಜ್ಯದ ಸಂಸದರ ಈ ಸಭೆಯಲ್ಲಿ ಪಾಲ್ಗೊಳ್ಳುತ್ತಿಲ್ಲ. ಈ ಬಗ್ಗೆ ಎಲ್ಲರ ಪರವಾಗಿ ಸಿಎಂಗೆ ಮರುಪತ್ರ ಬರೆದಿದ್ದಾರೆ.
ಇನ್ನು ಪತ್ರದಲ್ಲಿ ಏನಿದೆ ಅಂತ ನೋಡುವುದಾದ್ರೆ. ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ತಾವು ಡಿಸೆಂಬರ್ 8ಕ್ಕೆ ನವದೆಹಲಿಯಲ್ಲಿ ರಾಜ್ಯದ ಸಂಸದರೊಂದಿಗೆ ಸಭೆ ನಡೆಸಲಿರುವ ಬಗ್ಗೆ ಬರೆದ ಪತ್ರ ಡಿ.2ರಂದು ಸ್ವೀಕೃತವಾಗಿದೆ. ಆದರೆ, ತಮಗೇ ತಿಳಿದಿರುವಂತೆ ಸಂಸತ್ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಅಧಿವೇಶನ ವೇಳೆ ಕಾರ್ಯ ಬಾಹುಳ್ಯ ಸಾಕಷ್ಟಿರುವುದು ತಮಗೆ ಗೊತ್ತಿರುವ ವಿಷಯವೇ. ಹಣಕಾಸು ಇಲಾಖೆ ಮಸೂದೆ ಮಂಡನೆಯಾಗುತ್ತಿವೆ. ಹಾಗಾಗಿ ಸಚಿವರಾದ ನಮಗೆಲ್ಲ ಸಂಸತ್ ಅಧಿವೇಶನ ಹಾಗೂ ಇಲಾಖೆಗಳ ಕಾರ್ಯದೊತ್ತಡವಿದೆ. ಅಲ್ಲದೇ, ಡಿ.8ರಂದೇ ಹೊಸ ಮತ್ತು ನವೀಕೃತ ಇಂಧನ ಇಲಾಖೆ ಸಂಬಂಧ ಪ್ರಧಾನಿ ವಿಶೇಷ ಸಭೆಯಿದೆ. ಹಣಕಾಸು ಸಚಿವಾಲಯದಿಂದ ಸಂಸತ್ತಿನಲ್ಲಿ ಬಿಲ್ ಮಂಡನೆಗೊಳಿಸುವುದು ಪೂರ್ವದಲ್ಲೇ ನಿಗದಿಗೊಂಡಿದೆ. ಅದೇ ದಿನ “ವಂದೇ ಮಾತರಂ” ಗೀತೆಯ 150ನೇ ವರ್ಷಾಚರಣೆ ಬಗ್ಗೆ ಸಂಸತ್ ಅಧಿವೇಶನದಲ್ಲಿ ಚರ್ಚೆ ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ಡಿ.8ರಂದು ನಿಗದಿಪಡಿಸಿದ ಸಭೆಯಲ್ಲಿ ನಾವುಗಳು ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ’ ಎಂದು ಕರ್ನಾಟಕವನ್ನು ಪ್ರತಿನಿಧಿಸುತ್ತಿರುವ ಎಲ್ಲಾ ಕೇಂದ್ರ ಸಚಿವರೂ ಸಿಎಂಗೆ ಮರುಪತ್ರ ಬರೆದು ತಿಳಿಸಿದ್ದಾರೆ.
ಹಾಗೇ ಮುಖ್ಯಮಂತ್ರಿಗಳು ಮೊದಲೇ ಚರ್ಚಿಸಿ ದಿನಾಂಕ ನಿಗದಿಪಡಿಸಿದ್ದರೆ ಅನುಕೂಲವಾಗುತ್ತಿತ್ತು ಎಂದಿರುವ ಸಚಿವ ಜೋಶಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರಾಜ್ಯ ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ.ಸೋಮಣ್ಣ, ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಮತ್ತು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮ ಸಚಿವಾಲಯದ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರೂ ಸಭೆಗೆ ಪಾಲ್ಗೊಳ್ಳಲು ಸಾಧ್ಯವಾಗದಿರುವ ಬಗ್ಗೆ ತಿಳಿಸಿಯಪಡಿಸಿದ್ದಾರೆ ಎಂದು ಸಿಎಂಗೆ ಪತ್ರದ ಮೂಲಕ ತಿಳಿಸಿದ್ದಾರೆ.

ನೋಡಿರಿ

