5 ಯುದ್ಧ ವಿಮಾನ ಹೊಡೆದುರುಳಿಸಿ, ವ್ಯಾಪಾರ ಬೆದರಿಕೆ ಹಾಕಿ ಭಾರತ Vs ಪಾಕ್ ಯುದ್ಧ ನಿಲ್ಲಿಸಿದ್ದೇನೆ – ಟ್ರಂಪ್

ಪಾಕ್ ಮತ್ತು ಭಾರತದ ವಿಷ್ಯದಲ್ಲಿ ಟ್ರಂಪ್ ಬಡಾಯಿಕೊಚ್ಚಿಕೊಳ್ಳುತ್ತಿರೋದು ಬಿಡುತ್ತಿಲ್ಲ. ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿ ಬಳಿಕ ಭಾರತ ಪಾಕಿಸ್ತಾನ ನಡುವೆ ಏರ್ಪಟ್ಟ ಸಂಘರ್ಷದ ವೇಳೆ ಐದು ಯುದ್ಧ ವಿಮಾನಗಳನ್ನು ಹೊಡೆದುರುಳಿಸಲಾಗಿದ್ದು, ವ್ಯಾಪಾರ ಬೆದರಿಕೆ ಹಾಕುವ ಮೂಲಕ ಯುದ್ಧ ನಿಲ್ಲಿಸಿದ್ದೆವು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶ್ವೇತಭವನದಲ್ಲಿ ಕೆಲವು ರಿಪಬ್ಲಿಕನ್ ಶಾಸಕರೊಂದಿಗೆ ಭೋಜನಕೂಟದಲ್ಲಿ ಮಾತನಾಡಿದ ಟ್ರಂಪ್, ಕದನ ವಿರಾಮ ನನ್ನಿಂದಲೇ ಆಗಿದ್ದು. ವ್ಯಾಪಾರ ಬೆದರಿಕೆಯನ್ನು ಬಳಸಿಕೊಂಡು ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿದ್ದಾಗಿ ಹೇಳಿಕೊಂಡಿದ್ದಾರೆ.
ಹಾಗೇ ಈ ಸಂಘರ್ಷದ ವೇಳೆ ಯುದ್ಧ ವಿಮಾನಗಳನ್ನು ಹೊಡೆದುರುಳಿಸಲಾಗಿದೆ. ನಾಲ್ಕು ಅಥವಾ ಐದು ಇರಬಹುದು. ಆದರೆ, ಐದು ವಿಮಾನಗಳನ್ನು ಹೊಡೆದುರುಳಿಸಲಾಗಿದೆ ಎಂದು ನಾನು ಭಾವಿಸುತ್ತೇನೆ’ ಎಂದು ಹೇಳಿದ್ದಾರೆ. ಆದರೆ, ಹೊಡೆದುರುಳಿಸಲಾಗಿರುವ ಯುದ್ಧ ವಿಮಾನಗಳು ಯಾವ ದೇಶದವು ಎಂಬುದನ್ನು ಟ್ರಂಪ್ ಹೇಳಿಲ್ಲ.
ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದಿದ್ದ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟು, 16 ಮಂದಿ ಗಾಯಗೊಂಡಿದ್ದರು. ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಮೇ 7ರಂದು `ಆಪರೇಷನ್ ಸಿಂಧೂರ’ ಹೆಸರಿನಲ್ಲಿ ಪಾಕ್ನ 9 ಭಯೋತ್ಪಾದಕರ ನೆಲೆಗಳ ಮೇಲೆ ದಾಳಿ ನಡೆಸಿತ್ತು. ಅದಾದ ಬಳಿಕ ಪಾಕಿಸ್ತಾನ ಹಲವು ಬಾರಿ ಅಪ್ರಚೋದಿತ ದಾಳಿ ನಡೆಸಿದ್ದು, ಮೇ 10ರಂದು ಭಾರತ-ಪಾಕಿಸ್ತಾನ ಕದನ ವಿರಾಮ ಘೋಷಿಸಲಾಗಿತ್ತು. ಟ್ರಂಪ್ ಪದೇಪದೆ ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾನ ನನ್ನಿಂದಲೇ ಆಗಿದ್ದು ಎಂದು ಒತ್ತಿ ಒತ್ತಿ ಹೇಳುತ್ತಿದ್ದಾರೆ.

ನೋಡಿರಿ

