ಗಡಿ ಭಾಗದ ಕನ್ನಡ ಶಾಲೆಗಳಲ್ಲಿ ಮಲಯಾಳಂ ಕಲಿಕೆ ಕಡ್ಡಾಯ- ಉಗ್ರ ಹೋರಾಟದ ಎಚ್ಚರಿಕೆ ಕೊಟ್ಟ ಸಿದ್ದರಾಮಯ್ಯ

ಗಡಿ ಭಾಗದ ಕನ್ನಡ ಶಾಲೆಗಳಲ್ಲಿ ಮಲಯಾಳಂ ಕಲಿಕೆ ಕಡ್ಡಾಯ- ಉಗ್ರ ಹೋರಾಟದ ಎಚ್ಚರಿಕೆ ಕೊಟ್ಟ ಸಿದ್ದರಾಮಯ್ಯ

ಗಡಿ ಭಾಗದ ಕನ್ನಡ ಶಾಲೆಗಳಲ್ಲಿ ಮಲಯಾಳಂ ಕಲಿಕೆ ಕಡ್ಡಾಯ  ಮಾಡಲು ಮುಂದಾಗಿರುವ ಕೇರಳ ಸರ್ಕಾರದ ನಿರ್ಧಾರದ ವಿರುದ್ಧ ಹೋರಾಟ ಮಾಡುತ್ತೇವೆ. ಮಲಯಾಳಂನ್ನು ಮೊದಲ ಭಾಷೆಯಾಗಿ ಕಲಿಯುವುದನ್ನು ಕಡ್ಡಾಯಗೊಳಿಸಿರುವ ಬಗ್ಗೆ ಕೇರಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ಹೋರಾಟವನ್ನೇ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇಂದು ನಗರದ ರೇಸ್ ಕೋರ್ಸ್ ರಸ್ತೆಯ KEB ಎಂಜಿನಿಯರ್ಸ್ ಅಸೋಸಿಯೇಷನ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.ಬಿಜೆಪಿಯವರು ರಾಜ್ಯಕ್ಕೆ ಎಷ್ಟೇ ಅನ್ಯಾಯವಾದರೂ ಕೇಂದ್ರ ಸರ್ಕಾರ ಮಾಡಿದ್ದನ್ನೆಲ್ಲಾ ಸಮರ್ಥಿಸಿಕೊಳ್ಳುವುದು ಮಹಾ ತಪ್ಪು. ರಾಜ್ಯಕ್ಕೆ ಅನ್ಯಾಯವಾದದ್ದನೆಲ್ಲ ನ್ಯಾಯ ಎನ್ನುವುದು ಮಹಾ ಅಪರಾಧ ಎಂದು ಟೀಕಿಸಿದರು.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಕಾಯ್ದೆ ಕುರಿತಂತೆ ಚರ್ಚೆಗೆ ಆಹ್ವಾನಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಚರ್ಚೆಗೆ ನಾವು ಸಿದ್ಧವಾಗಿದ್ದು, ದೊಡ್ಡ ಆಂದೋಲನವನ್ನೇ ಮಾಡುತ್ತೇವೆ. ಬಿಜೆಪಿ-ಜೆಡಿಎಸ್‌ನವರು ಕೇವಲ ಸುಳ್ಳು ಹೇಳುತ್ತಾರೆ ಎಂದರು. ದ್ವೇಷ ಭಾಷಣಕ್ಕೆ ಸಂಬಂಧಿಸಿದ ಬಿಲ್‌ ರಾಜ್ಯಪಾಲರ ಬಳಿಯೇ ಉಳಿದಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಈ ಬಗ್ಗೆ ರಾಜ್ಯಪಾಲರನ್ನು ಒಮ್ಮೆ ಭೇಟಿಯಾಗಿ ವಿವರಣೆ ನೀಡಲಾಗುವುದು ಎಂದರು.ರಾಜ್ಯದಲ್ಲಿ ಬಾಂಗ್ಲಾ ವಲಸಿಗರು ಹೆಚ್ಚಾಗಿದ್ದಾರೆ ಎಂಬ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಹೆಸರುಗಳನ್ನು ನೀಡುವಂತೆ ಮುಖ್ಯಮಂತ್ರಿಗಳು ಹೇಳಿದರು.

ಇದನ್ನೂ ಓದಿ: ಟಿ20 ವಿಶ್ವಕಪ್‌ಗೆ ಸಿಗದ ಚಾನ್ಸ್ – ಕೊನೆಗೂ ಮೌನ ಮುರಿದ ಶುಭಮನ್ ಗಿಲ್

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆ ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆ-2025 ವಿರೋಧಿಸಿ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರಿಗೆ ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ಪತ್ರ ಬರೆದಿದ್ದರು. ಈ ಮಸೂದೆ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದ ಮುಖ್ಯಮಂತ್ರಿಗಳು, ಕೇರಳ ಸರ್ಕಾರವು ಕಾಯ್ದೆ ಜಾರಿಗೆ ಮುನ್ನ ಭಾಷಾ ಅಲ್ಪಸಂಖ್ಯಾತ ಸಮುದಾಯಗಳು, ಶಿಕ್ಷಣ ತಜ್ಞರು ಮತ್ತು ನೆರೆಯ ರಾಜ್ಯಗಳೊಂದಿಗೆ ಸಮಾಲೋಚನೆ ನಡೆಸಬೇಕು ಹಾಗೂ ಮಸೂದೆಯನ್ನು ಪುನರ್ ಪರಿಶೀಲಿಸಬೇಕು ಎಂದು ಮನವಿ ಮಾಡಿದ್ದರು.

ನಮ್ಮ ದೇಶದಲ್ಲಿ ಭಾಷೆಗಳು ಕಡ್ಡಾಯತೆಯ ಬದಲಿಗೆ ಪರಸ್ಪರ ಗೌರವ ಮತ್ತು ಸಹಬಾಳ್ವೆಯ ಮೂಲಕ ವಿಕಸನಗೊಂಡಿವೆ. ಕಾಸರಗೋಡಿನಂತಹ ಗಡಿ ಪ್ರದೇಶಗಳು ಈ ತತ್ವದ ಜೀವಂತ ಉದಾಹರಣೆಗಳಾಗಿವೆ. ಅಲ್ಲಿ ಮಲಯಾಳಂ, ಕನ್ನಡ, ತುಳು, ಬ್ಯಾರಿ ಮತ್ತು ಇತರ ಭಾಷೆಗಳನ್ನಾಡುವ ಜನರು ತಲೆಮಾರುಗಳಿಂದ ಸಾಮರಸ್ಯದಿಂದ ಜೀವನ, ಶಿಕ್ಷಣ ಮತ್ತು ಗುರುತನ್ನು ರೂಪಿಸಿಕೊಂಡಿದ್ದಾರೆ.

Kishor KV