ಪಶ್ಚಿಮ ಬಂಗಾಳದ ಸಿಎಂ ಪ್ರಯಾಣಿಸುತ್ತಿದ್ದ ಕಾರು ಅಪಘಾತ – ಕಾರಿನಲ್ಲಿದ್ದ ಮಮತಾ ಬ್ಯಾನರ್ಜಿಗೆ ಗಾಯ
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಕಾರಿನಲ್ಲಿದ್ದ ಮಮತಾ ಬ್ಯಾನರ್ಜಿ ಅವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ʼ
ಇದನ್ನೂ ಓದಿ: ಕೊಲೆ ಮಾಡಲೇಬೇಕು ಎಂದು ಗುಂಡಿ ತೋಡಿ ಇಟ್ಟಿದ್ದ ಪಾತಕಿ – ಶಿಕ್ಷಕಿಯನ್ನು ಕ್ರೂರವಾಗಿ ಕೊಂದವನು ಹೇಳಿದ್ದೇನು?
ಬರ್ಧಮಾನ್ ನಿಂದ ಕೊಲ್ಕತ್ತಾಗೆ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಬುಧವಾರ ಬರ್ಧಮಾನ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ತೆರಳಿದ್ದ ಮಮತಾ ಬ್ಯಾನರ್ಜಿ ಅವರು ಮಳೆಯ ಹಿನ್ನೆಲೆಯಲ್ಲಿ ಕೊಲ್ಕತ್ತಾಗೆ ವಾಪಸ್ ಆಗುತ್ತಿದ್ದರು. ಕಾರಿನಲ್ಲಿ ತೆರಳುತ್ತಿದ್ದಾಗ ದಟ್ಟ ಮಂಜು ಆವರಿಸಿದ್ದು ಚಾಲಕ ಸಡನ್ ಬ್ರೇಕ್ ಹಾಕಿದ್ದಾನೆ. ಈ ವೇಳೆ ಕಾರಿನಲ್ಲಿದ್ದ ಮಮತಾ ಬ್ಯಾನರ್ಜಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಕಾರು ಚಾಲಕ ಸಡನ್ ಬ್ರೇಕ್ ಆಗಿದ್ದಕ್ಕೆ ಈ ಅನಾಹುತ ಸಂಭವಿಸಿದೆ. ಸದ್ಯ ಕೊಲ್ಕತ್ತಾ ಆಸ್ಪತ್ರೆಗೆ ದಾಖಲಾಗಿರುವ ಮಮತಾ ಬ್ಯಾನರ್ಜಿ ಅವರು ಅಪಾಯದಿಂದ ಪಾರಾಗಿದ್ದಾರೆ. ಅವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. ಮಮತಾ ಬ್ಯಾನರ್ಜಿ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಟಿಎಂಸಿ ನಾಯಕರು ಮಾಹಿತಿ ನೀಡಿದ್ದಾರೆ.