ಪಶ್ಚಿಮ ಬಂಗಾಳದಲ್ಲಿ ಭುಗಿಲೆದ್ದ ಹಿಂಸಾಚಾರ – ಸಾವಿನ ಸಂಖ್ಯೆ 11ಕ್ಕೆ ಏರಿಕೆ  

ಪಶ್ಚಿಮ ಬಂಗಾಳದಲ್ಲಿ ಭುಗಿಲೆದ್ದ ಹಿಂಸಾಚಾರ – ಸಾವಿನ ಸಂಖ್ಯೆ 11ಕ್ಕೆ ಏರಿಕೆ  

ಪಶ್ಚಿಮ ಬಂಗಾಳದಲ್ಲಿ ಮೂರು ಹಂತದ ಪಂಚಾಯತ್‌ ಚುನಾವಣೆ ನಡೆಯುತ್ತಿದೆ. ಮತದಾನ ನಡೆಯುತ್ತಿರುವಾಗಲೇ ಹಿಂಸಾಚಾರ ಭುಗಿಲೆದ್ದಿದೆ. ಈ ಹಿಂಸಾಚಾರದಲ್ಲಿ ಸುಮಾರು 11 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಶುಕ್ರವಾರ ತಡರಾತ್ರಿ ಈ ಹಿಂಸಾಚಾರ ಆರಂಭವಾಗಿದ್ದು, ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಿದೆ. ಕೇಂದ್ರ ಪಡೆಗಳ ಭದ್ರತೆ ಮಧ್ಯೆಯೂ ಸಾವಿನ ಸಂಖ್ಯೆ ಹೆಚ್ಚುತ್ತಿವೆ. ಈ ಗಲಭೆಯಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಹತ್ಯೆಗೀಡಾದವರಲ್ಲಿ 6 ಮಂದಿ ತೃಣಮೂಲ ಕಾಂಗ್ರೆಸ್‌ ಸದಸ್ಯರಿದ್ದು, ಬಿಜೆಪಿ, ಎಡ, ಕಾಂಗ್ರೆಸ್‌ ಮತ್ತು ಐಎಸ್‌ಎಫ್‌ನ ತಲಾ ಒಬ್ಬೊಬ್ಬರು ಹಾಗೂ ಮತ್ತೊಬ್ಬ ಅಪರಿಚಿತ ವ್ಯಕ್ತಿ ಸಾವನ್ನಪ್ಪಿದ್ದಾರೆ. ಅನೇಕ ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆ – ಹಿಂಸಾಚಾರದಲ್ಲಿ ಹಲವು ಮಂದಿ ಸಾವು

ಮಾಲ್ಡಾದ ಮಾಣಿಕ್‌ಚಕ್‌ನಲ್ಲಿ ಬಾಂಬ್ ದಾಳಿಯ ನಡೆಸಲಾಗಿದೆ. ನಾಡಿಯಾದ ನಾರಾಯಣಪುರ ಗ್ರಾಮ ಪಂಚಾಯತಿ ಅಭ್ಯರ್ಥಿ ಹಸೀನಾ ಸುಲ್ತಾನ್​ ಅವರ ಪತಿಯ ಮೇಲೆ ಗುಂಡು ಹಾರಿಸಲಾಗಿದೆ. ಮತದಾನ ಆರಂಭವಾಗುವ ಕೆಲವೇ ಕ್ಷಣಗಳ ಮೊದಲು ಕಚ್ಚಾ, ದೇಶಿ ನಿರ್ಮಿತ ಬಾಂಬ್‌ಗಳನ್ನು ಕಾರ್ಯಕರ್ತರ ಮೇಲೆ ಎಸೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಗಲಭೆಗೆ ಸಂಭಂದಪಟ್ಟಂತೆ ಆಡಳಿತಾರೂಢ ತೃಣಮೂಲ ಕಾಂಗ್ರೆಸ್  ಮತ್ತು ಬಿಜೆಪಿ ಪರಸ್ಪರ ವಾಗ್ದಾಳಿ ನಡೆಸಿದ್ದು, ಒಬ್ಬರನ್ನೊಬ್ಬರು ದೂಷಿಸುತ್ತಿವೆ. ಕೂಚ್‌ಬೆಹಾರ್ ಜಿಲ್ಲೆಯ ಫಲಿಮಾರಿ ಗ್ರಾಮ ಪಂಚಾಯತ್‌ನಲ್ಲಿ ಬಿಜೆಪಿ ಮತಗಟ್ಟೆ ಏಜೆಂಟ್ ಮಾಧಬ್  ಬಿಸ್ವಾಸ್ ಅವರನ್ನು ಹತ್ಯೆ ಮಾಡಲಾಗಿದೆ. ಬಿಸ್ವಾಸ್ ಮತಗಟ್ಟೆಗೆ ಪ್ರವೇಶಿಸಲು ಪ್ರಯತ್ನಿಸಿದಾಗ ಅವರನ್ನು ಟಿಎಂಸಿ ಬೆಂಬಲಿಗರು ತಡೆದರು. ಅಲ್ಲಿ ಮಾತಿನ ಚಕಮಕಿ ನಡೆದು ಟಿಎಂಸಿ ಆತನನ್ನು ಹತ್ಯೆ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಆದರೆಈ ಆರೋಪಗಳನ್ನು ಟಿಎಂಸಿ ನಿರಾಕರಿಸಿದೆ.

suddiyaana