ಸರ್ಕಾರದ ಮುಂದೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಇಟ್ಟ ಬೇಡಿಕೆಗಳೇನು?

ಸರ್ಕಾರದ ಮುಂದೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಇಟ್ಟ ಬೇಡಿಕೆಗಳೇನು?

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಸದಸ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ. ಹರೀಶ್ ಅವರ ನೇತೃತ್ವದಲ್ಲಿ ಈ ಭೇಟಿ ನಡೆದಿದೆ. ಒಂದಷ್ಟು ಸಮಸ್ಯೆಗಳ ಬಗ್ಗೆ ಮನವಿ ಕೊಟ್ಟಿದ್ದೇವೆ. ಚಿತ್ರರಂಗದ ಧ್ಯೇಯ ಮತ್ತು ಉದ್ದೇಶದ ಬಗ್ಗೆಯೂ ಸಿಎಂ ಮುಂದೆ ಪ್ರಸ್ತಾಪ ಮಾಡಲಾಯ್ತು. ಇದೊಂದು ಸೌಹಾರ್ದಯುತ ಭೇಟಿಯಾಗಿದೆ ಎಂದು ಭಾ.ಮ. ಹರೀಶ್ ಹೇಳಿದ್ದಾರೆ.

ಇದನ್ನೂ ಓದಿ:  ನನಗೆ ಸೋಲಿನ ನೋವು.. ಕಾಂಗ್ರೆಸ್ ಗೆ ಗೆದ್ದ ಅಹಂ – ಪಕ್ಷ ವಿಸರ್ಜನೆ ಬಗ್ಗೆ ಕಾಲೆಳೆದವರಿಗೆ ಹೆಚ್​ಡಿಕೆ ತಿರುಗೇಟು!

ಸಿನಿಮಾ ಕ್ಷೇತ್ರಕ್ಕೆ ಸರ್ಕಾರದ ಬೆಂಬಲ ಇದ್ದೇ ಇರುತ್ತದೆ. ಚಿತ್ರರಂಗದ ಬೇಡಿಕೆಗಳು ಇನ್ನೂ ಸಾಕಷ್ಟು ಹಾಗೇ ಉಳಿದಿವೆ. ಹೊಸ ಸರ್ಕಾರದ ಮುಂದೆ ಕನ್ನಡ ಚಿತ್ರರಂಗದವರು ಕೆಲವು ಮನವಿಗಳನ್ನು ಇಟ್ಟಿದ್ದಾರೆ. ವಾಣಿಜ್ಯ ಮಂಡಳಿ ವತಿಯಿಂದ ಒಂದಷ್ಟು ಸಮಸ್ಯೆಗಳ ಬಗ್ಗೆ ಮನವಿ ಕೊಟ್ಟಿದ್ದೇವೆ. ಆದರೆ, ಸಬ್ಸಿಡಿ ವಿಚಾರದ ಬಗ್ಗೆ ಸದ್ಯಕ್ಕೆ ಚರ್ಚೆ ಮಾಡಿಲ್ಲ. ಚಲನಚಿತ್ರ ಅಕಾಡೆಮಿ ಅಧ್ಯಕ್ಷರು ಹಾಗೂ ಕಂಠೀರವ ಸ್ಟುಡಿಯೋ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಚರ್ಚೆ ಮಾಡಿದ್ದೇವೆ. ಸಿನಿಮಾದವರಿಗೆ ಅವಕಾಶ ಕೊಡಿ ಅಂತ ಕೇಳಿದ್ದೇವೆ. ಈ ವಿಚಾರಗಳ ಬಗ್ಗೆ ಸಿಎಂಗೆ ಮನವರಿಕೆ ಮಾಡಿದ್ದೇವೆ. ಸಿಎಂ ಕೂಡ ಉತ್ತಮ ರೀತಿಯಲ್ಲಿ ಸ್ಪಂದನೆ ನೀಡಿದ್ದಾರೆ’ ಎಂದು ಭಾ.ಮ. ಹರೀಶ್ ಹೇಳಿದ್ದಾರೆ. ಸೆನ್ಸಾರ್ ಮಂಡಳಿ ವಿಚಾರದಲ್ಲಿ ಗೊಂದಲಗಳಿವೆ. ಇದು ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದ ವಿಚಾರ. ಈ ಹಿಂದೆ ಲೋಕಸಭಾ ಸದಸ್ಯರಿಗೆ ಮನವಿ ಮಾಡಿದ್ದೆವು. ಪತ್ರಿಕೋದ್ಯಮಕ್ಕೆ ಸಂಬಂಧಿಸಿದ ವ್ಯಕ್ತಿಯನ್ನು ಆಯ್ಕೆ ಮಾಡುವಂತೆ ಹೇಳಿದ್ದೆವು. ಆದರೆ ಸೆನ್ಸಾರ್ ಮಂಡಳಿಯಲ್ಲಿ ಕಾರ್ಯಕರ್ತರ ನೇಮಕ ಮಾಡಿದರೆ ಸಮಸ್ಯೆ ಆಗುತ್ತದೆ. ಈ ವಿಚಾರಕ್ಕೆ ಸಂಬಂಧಪಟ್ಟ ಲೋಕಸಭೆ ಸದಸ್ಯರನ್ನು ಮತ್ತೆ ಭೇಟಿಯಾಗಿ ಮನವಿ ಮಾಡುತ್ತೇವೆ. ಸಮಗ್ರ ಕನ್ನಡ ಚಿತ್ರೋದ್ಯಮದ ಅಭಿವೃದ್ಧಿ ಬಗ್ಗೆ ಚರ್ಚೆ ಆಗಿದೆ ಎಂದು ಭಾ.ಮ. ಹರೀಶ್ ಹೇಳಿದ್ದಾರೆ.

suddiyaana