ರಾಜ್ಯ ಸರ್ಕಾರದಿಂದ ಮತ್ತೊಂದು ಯೋಜನೆ – ಏನಿದು ‘ಪುನೀತ್ ರಾಜಕುಮಾರ್ ಹೃದಯ ಜ್ಯೋತಿ’ ಯೋಜನೆ?

ರಾಜ್ಯ ಸರ್ಕಾರದಿಂದ ಮತ್ತೊಂದು ಯೋಜನೆ – ಏನಿದು ‘ಪುನೀತ್ ರಾಜಕುಮಾರ್ ಹೃದಯ ಜ್ಯೋತಿ’ ಯೋಜನೆ?

ಇತ್ತೀಚೆಗೆ ಹೃದ್ರೋಗ ಸಮಸ್ಯೆ ಹೆಚ್ಚಳವಾಗುತ್ತಿದೆ. ಯುವ ಜನರೇ ಹೆಚ್ಚಿನ ಸಂಖ್ಯೆಯಲ್ಲಿ ಏಕಾಏಕಿ ಹೃದಯಾಘಾತ, ಹೃದಯ ಸ್ತಂಭನಕ್ಕೀಡಾಗಿ ಜೀವ ಕಳೆದುಕೊಳ್ಳುತ್ತಿದ್ದಾರೆ. ಹೃದ್ರೋಗಗಳಿಗೆ ಉಂಟಾಗುತ್ತಿರುವ ಜೀವ ಹಾನಿ ಪ್ರಮಾಣವನ್ನು ತಗ್ಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ‘ಪುನೀತ್ ರಾಜಕುಮಾರ್ ಹೃದಯ ಜ್ಯೋತಿ’ ಎಂಬ ಹೊಸ ಯೋಜನೆಯೊಂದನ್ನು ಆರಂಭಿಸುತ್ತಿದೆ.

ಹೌದು ರಾಜ್ಯ ಸರ್ಕಾರ ಮಹತ್ವದ ಯೋಜನೆಯೊಂದನ್ನು ಜಾರಿ ಮಾಡಿದೆ. ಹೃದಯಾಘಾತಕ್ಕೆ ಒಳಗಾದವರಿಗೆ ತಕ್ಷಣವೇ ಚಿಕಿತ್ಸೆ ದೊರಕಿಸುವ ನಿಟ್ಟಿನಲ್ಲಿ  ರಾಜ್ಯ ಸರ್ಕಾರ ‘ಪುನೀತ್ ರಾಜಕುಮಾರ್ ಹೃದಯ ಜ್ಯೋತಿ’ ಯೋಜನೆಯನ್ನು ಈ ಈ ತಿಂಗಳಿನಲ್ಲಿ ಜಾರಿಗೊಳಿಸುತ್ತಿದೆ. ಮೊದಲ ಹಂತದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ 85 ಆಸ್ಪತ್ರೆಗಳಲ್ಲಿ ಸೌಲಭ್ಯ ಕಲ್ಪಿಸಲಾಗುತ್ತಿದೆ. ಅದಕ್ಕಾಗಿ 26.50 ಕೋಟಿ ವೆಚ್ಚ ನಿಗದಿ ಮಾಡಲಾಗಿದೆ. 72 ಕೋಟಿ ವೆಚ್ಚದಲ್ಲಿ 50 ಉಪಕರಣ ಖರೀದಿಸಲಾಗುತ್ತಿದೆ.

ಇದನ್ನೂ ಓದಿ: ಸಲಾರ್, ಡಂಕಿ ಸಿನಿಮಾ ಜೊತೆ ಹಾಲಿವುಡ್‌ನ ಬಿಗ್‌ಬಜೆಟ್ ಚಿತ್ರ ರಿಲೀಸ್ – ಬಾಕ್ಸ್ಆಫೀಸ್ ವಾರ್ ಆಗೋದು ಗ್ಯಾರಂಟಿ..!

ಈ ಹೊಸ ಯೋಜನೆಯನ್ನು ಬೆಂಗಳೂರಿನ ಜಯದೇವ ಹೃದ್ರೋಗ ಸಂಸ್ಥೆ, ವೈದ್ಯಕೀಯ ಕಾಲೇಜು ಆಸ್ಪತ್ರೆಗಳು ಸೇರಿದಂತೆ 16 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ 10 ಹಬ್‌ಗಳನ್ನು ರಚಿಸಲಾಗಿದೆ. ಹೃದಯಾಘಾತಕ್ಕೆ ಒಳಗಾದವರು ಸಮೀಪದ ಕೇಂದ್ರಗಳಿಗೆ ತೆರಳಿದ ತಕ್ಷಣ ಇಸಿಜಿ ಮಾಡಲಾಗುತ್ತದೆ. ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ಮೂಲಕ ಐದು ನಿಮಿಷದಲ್ಲೇ ಹೃದಯದ ಪರಿಸ್ಥಿತಿಯ ಮಾಹಿತಿ ಪಡೆಯಲಾಗುತ್ತದೆ. ಅಪಾಯದ ಪ್ರಮಾಣದ ಹೆಚ್ಚಿದ್ದರೆ ತಕ್ಷಣ ‘ಟೆನೆಕ್ಸೆಪ್ಲೇಸ್ ಚುಚ್ಚುಮದ್ದು ನೀಡಲಾಗುವುದು. 45 ಸಾವಿರದವರೆಗೂ ಇರುವ ಈ ಚುಚ್ಚುಮದ್ದು ಸೇರಿದಂತೆ ಅಗತ್ಯ ಚಿಕಿತ್ಸೆಯನ್ನು ಎಪಿಎಲ್, ಬಿಪಿಎಲ್ ವರ್ಗದ ಎಲ್ಲ ನಾಗರಿಕರಿಗೂ ನೀಡಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.

ಪ್ರಾಥಮಿಕ ಚಿಕಿತ್ಸೆಯ ನಂತರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಿಗೆ ಕಳುಹಿಸಲಾಗುತ್ತದೆ. ಅದಕ್ಕಾಗಿ ಜಯದೇವ ಸೇರಿದಂತೆ 16 ಆಸ್ಪತ್ರೆಗಳನ್ನು ಗುರುತಿಸಲಾಗಿದೆ. ರೋಗಿಗಳನ್ನು ಕಳುಹಿಸಲು ಸರ್ಕಾರವೇ ಆಂಬುಲೆನ್ಸ್ ಸೇವೆ ಒದಗಿಸಲಾಗುತ್ತದೆ.

Shwetha M